ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ಪ್ರಾಮಾಣಿಕತೆ ಅಗತ್ಯ
ಕೆ.ಆರ್.ಪೇಟೆ: ಸಹಕಾರ ಸಂಸ್ಥೆಗಳ ಅಭಿವೃದ್ಧಿಗೆ ನೌಕರರು ಮತ್ತು ಅಧಿಕಾರಿಗಳು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಮೈಸೂರು ವಿಭಾಗೀಯ ಸಹಕಾರ ಸಂಘಗಳ ಜಂಟಿ ನಿಬಂಧಕ ಡಾ.ಎಚ್.ಆರ್. ಕೃಷ್ಣಯ್ಯಗೌಡ ಹೇಳಿದರು.
ಪಟ್ಟಣದ ಎಂ.ಕೆ. ಬೊಮ್ಮೇಗೌಡ ಸಹಕಾರ ಭವನದಲ್ಲಿ ನಡೆದ ಸಮಾರಂಭದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಸಹಕಾರ ಸಂಸ್ಥೆಗಳು ಗ್ರಾಮೀಣ ಜನರ ಜೀವನಾಡಿಯಾಗಿವೆ. ಸಹಕಾರ ಸಂಸ್ಥೆಗಳನ್ನು ಗಟ್ಟಿಗೊಳಿಸಲು ಎಲ್ಲರೂ ರಾಜಕೀಯರಹಿತವಾಗಿ ಸಹಕಾರ ನೀಡಬೇಕು ಎಂದು ಹೇಳಿದರು.
ಸಹಕಾರ ಸಂಸ್ಥೆಗಳು ಶೇ. 90ರಷ್ಟು ಗ್ರಾಮೀಣ ಭಾಗದಲ್ಲಿವೆ. ಗ್ರಾಮೀಣ ಜನರಿಗೆ ಸುಲಭವಾಗಿ ವಿವಿಧ ಸೌಲಭ್ಯ ನೀಡುವ ಮೂಲಕ ಅವರ ಆರ್ಥಿಕ ಸ್ವಾವಲಂಬನೆಗೆ ಶ್ರಮಿಸುತ್ತಿವೆ. ಸಹಕಾರ ಸಂಸ್ಥೆಗಳು ಅಭಿವೃದ್ಧಿಯಾದಷ್ಟು ಗ್ರಾಮೀಣ ಜನರ ಬದುಕು ಹೆಚ್ಚಿನ ರೀತಿಯಲ್ಲಿ ಹಸನಾಗುತ್ತದೆ ಎಂದರು.
ರಾಜಕೀಯ ನುಸುಳಿದ ನೂರಾರು ಸಹಕಾರ ಸಂಸ್ಥೆಗಳು ದಿವಾಳಿಯಾದ ಹಲವು ಉದಾಹರಣೆಗಳು ನಮ್ಮ ಕಣ್ಣ ಮುಂದಿವೆ. ಆದ್ದರಿಂದ ಸಹಕಾರ ಸಂಸ್ಥೆಗಳಲ್ಲಿ ರಾಜಕೀಯ ಬೆರೆಸದೇ ಅವುಗಳ ಅಭಿವೃದ್ಧಿಗೆ ಎಲ್ಲ ರೀತಿಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಸಹಕಾರ ಸಂಸ್ಥೆಗಳಲ್ಲಿ ಕೆಲಸ ಮಾಡುವ ನೌಕರರು ಬದ್ಧತೆ ಮತ್ತು ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು. ಸಂಸ್ಥೆಯಿಂದ ದೊರೆಯುವ ಹಲವು ರೀತಿಯ ಸಾಲ ಮತ್ತಿತರರ ಸೌಲಭ್ಯ ನೀಡಬೇಕು. ಸಕಾಲದಲ್ಲಿ ಸಾಲದ ಹಣ ಮರು ವಸೂಲಾತಿ ಮಾಡಬೇಕು. ಸಂಸ್ಥೆಯನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕು ಎಂದು ಹೇಳಿದರು.
ಪಾಂಡವಪುರ ಉಪವಿಭಾಗೀಯ ಸಹಕಾರ ಸಂಘಗಳ ಸಹಾಯಕ ನಿಬಂಧಕ ಕೃಷ್ಣಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಸಹಕಾರ ಸಂಘಗಳ ಸಹಾಯಕ ನಿಬಂಧಕರಾದ ಎ.ಆರ್. ಶಶಿಧರ್, ತಾಲೂಕು ಸಹಕಾರ ಅಭಿವೃದ್ಧಿ ಅಧಿಕಾರಿ ಗೌಸ್ ಪಾಷ, ಟಿಎಪಿಸಿಎಂಎಸ್ ಕಾರ್ಯದರ್ಶಿ ಬಿ.ಆರ್. ಲಕ್ಷ್ಮೀನಾರಾಯಣ್, ಲೆಕ್ಕಪರಿಶೋಧಕರಾದ ಎಸ್. ಗುಡ್ಡಯ್ಯ, ಅನ್ನದಾನಿ, ನಿವೃತ್ತ ಕಾರ್ಯದರ್ಶಿಗಳಾದ ಚಂದ್ರಶೇಖರ್, ಬಿ.ಕೆ. ಪುಟ್ಟರಾಜು, ರಾಮೇಗೌಡ, ಬಿ.ಆರ್. ವೆಂಕಟರಮಣಸ್ವಾಮಿ, ರಾಮೇಗೌಡ, ಮುರುಳೀಧರ್, ಸಿದ್ದೇಗೌಡ, ತಿಮ್ಮಯ್ಯ, ಕುಮಾರ್, ಜಯರಾಂ, ಬಲರಾಂ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

