ಮೈಸೂರು

ಇಂದು ಸೂಲಿಬೆಲೆಯಲ್ಲಿ ರಥಸಪ್ತಮಿ

Published On :

ಸೂಲಿಬೆಲೆ: ಇಲ್ಲಿನ ವಿವೇಕಾನಂದ ಪ್ರೌಢಶಾಲೆಯಲ್ಲಿ ಪತಂಜಲಿ ಯೋಗ ಸಮಿತಿಯಿಂದ ಫೆ. 17 ರಂದು ರಥಸಪ್ತಮಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ರಥಸಪ್ತಮಿ ಕಾರ್ಯಕ್ರಮವನ್ನು   ಪ್ರತಿವರ್ಷ ಆಚರಣೆ ಮಾಡಲಾಗುತ್ತಿದೆ. ಈ ಭಾರಿಯ ಇದರ ಆಚರಣೆ ಸಮಿತಿ ಸರ್ವ ಸಿದ್ಧತೆ ಮಾಡಿಕೊಂಡಿದ್ದು, ಸಮಿತಿ ಎಲ್ಲ ಸದಸ್ಯರು  ರಥಸಪ್ತಮಿಯ 108 ನಮಸ್ಕಾರ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಸಮಿತಿಯ ಮಾಲಾ ರಾಜಕುಮಾರ್ ಕೋರಿದ್ದಾರೆ.
ಇಂದು  ಆಂಗ್ಲ ಶಾಲೆ ಸಮಾರೋಪ
ಸೂಲಿಬೆಲೆ: ಇಲ್ಲಿನ ವಿವೇಕಾನಂ ಆಂಗ್ಲ ಪ್ರೌಢಶಾಲೆಯಲ್ಲಿ ಫೆ.17ಕ್ಕೆ ವಿದ್ಯಾರ್ಥಿಗಳ ಸಮಾರೋಪ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ವಿವೇಕಾನಂದ ವಿದ್ಯಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಸೂ.ರಂ ರಾಮಯ್ಯ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಟಿ.ಸುಬ್ಬರಾಮಯ್ಯ, ವಿವಿ ಸಂಘದ ಅಧ್ಯಕ್ಷ ರಘನಾಥ್, ಉಪಾಧ್ಯಕ್ಷ ರಘು, ಕಾರ್ಯದರ್ಶಿ ವಿ.ಪ್ರಸಾದ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ಇಂದು ಸೋಮೇಶ್ವರಬ್ರಹ್ಮರಥೋತ್ಸವ
ಮಾಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀಸೋಮೇಶ್ವರಸ್ವಾಮಿ ಬ್ರಹ್ಮರಥೋತ್ಸವ ಫೆ.17 ರಂದು  ಭಾನುವಾರ ಮಧ್ಯಾಹ್ನ 12.30 ರಿಂದ 1.30 ರೊಳಗೆ ನಡೆಯಲಿದೆ ಎಂದು  ಹಿರಿಯ ಆಗಮಿಕ ಗೋಪಾಲ  ದೀಕ್ಷಿತ್ ತಿಳಿಸಿದ್ದಾರೆ. ಬ್ರಹ್ಮರಥೋತ್ಸವದ ಪ್ರಯುಕ್ತ ಶನಿವಾರ ಸಂಜೆ  ಶ್ರೀಸ್ವಾಮಿಯ ಕಲ್ಯಾಣೋತ್ಸವ ನೆರವೇರಿತು.
ಇಂದು ಆದಿಶ್ರೀಗೆ ಶ್ರದ್ಧಾಂಜಲಿ
ಬೆಂಗಳೂರು: ಮಹಾಲಕ್ಷ್ಮೀ ಬಡಾವಣೆ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಸಮಿತಿ, ಅನುಶ್ರುತ ಫೌಂಡೇಷನ್ ಟ್ರಸ್ಟ್ ಸಹಯೋಗದೊಂದಿಗೆ ಫೆ.17ರಂದು ಆದಿ ಚುಂಚನಗಿರಿ ಮಠಾಧ್ಯಕ್ಷರಾಗಿದ್ದ ದಿ.ಡಾ.ಬಾಲಗಂಗಾಧರನಾಥ ಸ್ವಾಮೀಜಿ ಅವರಿಗೆ ಸೇವಾ ಶ್ರದ್ಧಾಂಜಲಿ ಕಾರ್ಯಕ್ರಮ ಏರ್ಪಡಿಸಿದೆ. ಸೇವಾ ಶ್ರದ್ಧಾಂಜಲಿಯು ಕಾಮಾಕ್ಷಿಪಾಳ್ಯದ ನರಸಮ್ಮ ವೀರಣ್ಣ ಕಲ್ಯಾಣ ಮಂಟಪದ ಎದುರಲ್ಲಿರುವ ಆಟದ ಮೈದಾನದಲ್ಲಿ ನಡೆಯಲಿದ್ದು, ಆದಿಚುಂಚನಗಿರಿ ಮಹಾಸಂಸ್ಥಾನದ ಶಾಖಾ ಮಠದ ಸೌಮ್ಯನಾಥ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ, ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧ್ಯಕ್ಷ ನಂಜಾವಧೂತ ಸ್ವಾಮೀಜಿ, ನಟ ಅಂಬರೀಷ್, ವಿಪಕ್ಷ ನಾಯಕ ಸಿದ್ದರಾಮಯ್ಯ ಭಾಗವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.