ಎಂಎಲ್ಸಿ ಪ್ರೊ. ಮಲ್ಲಿಕಾರ್ಜುನಪ್ಪ ಬಿಜೆಪಿ ತೊರೆದು ಕೆಜೆಪಿ ಸೇರ್ಪಡೆ
ಮೈಸೂರು: ವಿಧಾನಪರಿಷತ್ ಸದಸ್ಯ ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಅವರು ಬಿಜೆಪಿ ತೊರೆದು ಅಧಿಕೃತವಾಗಿ ಕರ್ನಾಟಕ ಜನತಾ ಪಕ್ಷಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲಿ ಶನಿವಾರ ಮೈಸೂರಿನಲ್ಲಿ ಸೇರ್ಪಡೆಯಾದರು.
ವಿದ್ಯಾರಣ್ಯಪುರಂ ಭಾರತಿ ಕನ್ವೆನ್ಸನ್ ಹಾಲ್ನಲ್ಲಿ ನಡೆದ ಕೆಜೆಪಿ ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಯಡಿಯೂರಪ್ಪ ಮಾತನಾಡುತ್ತಿದ್ದಾಗ ಪ್ರೊ. ಮಲ್ಲಿಕಾರ್ಜುನಪ್ಪ ಆಗಮಿಸಿ, ವೇದಿಕೆಯಲ್ಲಿ ಕುಳಿತುಕೊಂಡರು.
ವಿಧಾನಪರಿಷತ್ ಸದಸ್ಯತ್ವ ಹೋದರೂ ಪರವಾಗಿಲ್ಲ ಎಂದು ಪ್ರೊ. ಮಲ್ಲಿಕಾರ್ಜುನಪ್ಪು ಅವರು ಕೆಜೆಪಿಗೆ ಬಂದಿದ್ದಾರೆ. ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಯ ಮುಖಂಡರು ಮತ್ತು ಕಾರ್ಯಕರ್ತರು ಸರಿಯಾದ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದು ಯಡಿಯೂರಪ್ಪ ಸೂಚಿಸಿದರು.
ಯಡಿಯೂರಪ್ಪ ತಮ್ಮ ಭಾಷಣ ಮುಗಿಸಿದ ಮೇಲೆ ಪ್ರೊ. ಮಲ್ಲಿಕಾರ್ಜುನಪ್ಪ ಅವರನ್ನು ಕೆಜೆಪಿಗೆ ಸ್ವಾಗತಿಸಿದರು. ಪ್ರೊ. ಕೆ.ಆರ್. ಮಲ್ಲಿಕಾರ್ಜುನಪ್ಪ ಅವರು ಬಿಜೆಪಿ ಟಿಕೆಟ್ ಮೇಲೆ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ವಿಧಾನಪರಿಷತ್ತಿಗೆ 2010ರ ಜ. 6 ರಂದು ಆಯ್ಕೆಯಾಗಿದ್ದು, ಇವರ ಅವಧಿಯು 2016ರ ಜ.5 ರವರೆಗೆ ಇದೆ.
ಪ್ರೊ. ಮಲ್ಲಿಕಾರ್ಜುನಪ್ಪ ಅವರು ಬಿಜೆಪಿ ಚಾಮರಾಜನಗರ ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಕಳೆದ ಹಲವು ದಿನಗಳಿಂದ ಬಿಜೆಪಿಯ ಯಾವುದೇ ಸಭೆ, ಸಮಾರಂಭಗಳಿಗೆ ಹಾಜರಾಗಿರಲಿಲ್ಲ ಎಂದು ತಿಳಿದು ಬಂದಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

