ಮೈಸೂರು

ಕಾನೂನು ಪದವೀಧರರಿಗೆ ಅವಕಾಶ ಹೆಚ್ಚಳ

Published On :

ಮೈಸೂರು: ಕಾನೂನು ಪದವಿ ಮುಗಿಸಿದವರಿಗೆ ಹೆಚ್ಚಿನ ಅವಕಾಶಗಳು ಲಭಿಸುತ್ತಿವೆ ಎಂದು ಕೇರಳ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ಎಸ್.ಆರ್. ಬನ್ನೂರ್‌ಮಠ್ ಹೇಳಿದರು.
ಚೆನೈನ ಸುರಾನ ಮತ್ತು ಸುರಾನ ಅಂತರ್‌ರಾಷ್ಟ್ರೀಯ ಕಾನೂನು ಸಂಸ್ಥೆಯು ಕುವೆಂಪುನಗರದ ಜೆಎಸ್‌ಎಸ್ ಕಾನೂನು ಕಾಲೇಜಿನಲ್ಲಿ ಏರ್ಪಡಿಸಿರುವ 3ನೇ ರಾಷ್ಟ್ರೀಯ ಕಾರ್ಪೋರೇಟ್ ಅಣಕು ನ್ಯಾಯಾಲಯ ಸ್ಪರ್ಧೆಯನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದ ಅವರು, ಎಪ್ಪತ್ತರ ದಶಕದಲ್ಲಿ ಕಾನೂನು ಪದವಿಗೆ ಹೆಚ್ಚಿನ ಪ್ರಾಮುಖ್ಯತೆ ಇರಲಿಲ್ಲ. ಕೇವಲ ವೈದ್ಯಕೀಯ, ಎಂಜಿನಿಯರಿಂಗ್ ಪದವಿಗಳಿಗೆ ಹೆಚ್ಚು ಮಹತ್ವ ನೀಡಲಾಗುತ್ತಿತ್ತು. ಈಗ ಕಾಲ ಬದಲಾಗಿದ್ದು, ವಕೀಲ ವೃತ್ತಿಗೆ ಬೇಡಿಕೆ ಬಂದಿದೆ ಎಂದರು.
ವಕೀಲರಾದವರು ಪ್ರಾಮಾಣಿಕತೆ, ಪರಿಶ್ರಮ ಹಾಗೂ ಸಮರ್ಪಣಾ ಮನೋಭಾವ ಅಳವಡಿಸಿಕೊಂಡಿದ್ದರೆ ಜೀವನದಲ್ಲಿ ಯಶಸ್ಸು ಗಳಿಸಬಹುದು. ಆಗ ಜೀವನದಲ್ಲಿ ತೃಪ್ತಿ ಕಾಣಬಹುದು. ಒಳ್ಳೆಯ ವೃತ್ತಿಯಿಂದ ಆರ್ಥಿಕ ಮಟ್ಟ ಸುಧಾರಿಸಿಕೊಳ್ಳಬಹುದು ಎಂದ ಅವರು, ವಕೀಲ ವೃತ್ತಿಗೆ ಮಹಿಳೆಯರೂ ಹೆಚ್ಚಿನ ಸಂಖ್ಯೆ ಬರುತ್ತಿರುವುದಕ್ಕೆ ಶ್ಲಾಘಿಸಿದರು. ಕಾನೂನು ವಿದ್ಯಾರ್ಥಿಗಳಿಗೆ ಪ್ರಸ್ತುತ ದಿನಗಳಲ್ಲಿ ಸಾಕಷ್ಟು ಅವಕಾಶಗಳು ಸಿಗುತ್ತಿವೆ. ಅವುಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಇತ್ತಚಿನ ದಿನಗಳಲ್ಲಿ ಹೆಚ್ಚಿನ ಜನರು ಮಾನಸಿಕ ಒತ್ತಡದಿಂದಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ಆತ್ಮಸ್ಥೈರ್ಯ ಬೆಳೆಸಿಕೊಳ್ಳದೆ ಜೀವನದಲ್ಲಿ ಭರವಸೆ ಕಳೆದುಕೊಂಡವರು ಈ ರೀತಿಯ ಚಿಂತೆಗೆ ಒಳಗಾಗಿ ಜೀವನ ಹಾಳು ಮಾಡಿಕೊಳ್ಳವುತ್ತಾರೆ. ಅದಕ್ಕಾಗಿ ಪ್ರತಿಯೊಬ್ಬರೂ ತಾವು ಮಾಡುವ ಕೆಲಸವನ್ನು ಸಂತೋಷದಿಂದ ನಿರ್ವಹಿಸಿದರೆ ಮನಸ್ಸು ಸ್ಥಿಮಿತತೆಯಲ್ಲಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
ಮೂರು ದಿನಗಳ ಕಾಲ ನಡೆಯುವ ಕಾರ್ಪೋರೇಟ್ ವ್ಯವಹಾರದಲ್ಲಿ ಕಾನೂನು ಎಂಬ ವಿಷಯ ಕುರಿತ ರಾಷ್ಟ್ರೀಯ ಅಣುಕು ನ್ಯಾಯಾಲಯ ಸ್ಪರ್ಧೆಯಲ್ಲಿ ದೆಹಲಿ, ಚೆನ್ನೈ, ಮೊಹಾಲಿ, ಮುಂಬೈ, ಭೂಪಾಲ್, ಪುಣೆ ಸೇರಿದಂತೆ ವಿವಿಧ ರಾಜ್ಯಗಳಿಂದ 35ಕ್ಕೂ ಹೆಚ್ಚು ಕಾನೂನು ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದ್ದಾರೆ.
ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬಿ.ಎನ್. ಬೆಟ್‌ಕೆರೂರ್, ಮಾನಸದತ್ತ, ಸುರಾನ ಮತ್ತು ಸುರಾನ ಅಂತರ್‌ರಾಷ್ಟ್ರೀಯ ಕಾನೂನು ಸಂಸ್ಥೆಯ ಸಂಚಾಲಕ ರವಿಚಂದ್ರನ್, ನಾಗೇಂದ್ರಮೂರ್ತಿ, ಜೆಎಸ್‌ಎಸ್ ಕಾನೂನು ಕಾಲೇಜಿನ ಪ್ರಾಂಶುಪಾಲ ಪ್ರೊ. ಕೆ.ಎಸ್. ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.