ಮೈಸೂರು

'ಕ್ಷೇತ್ರದಲ್ಲಿ ಜಾತ್ಯತೀತ, ಧರ್ಮಾತೀತ ಅಭಿವೃದ್ಧಿ'

Published On :

ಮೈಸೂರು: ಕೃಷ್ಣರಾಜ ಕ್ಷೇತ್ರದಲ್ಲಿ ಜಾತ್ಯತೀತ ಮತ್ತು ಧರ್ಮಾತೀತವಾಗಿ ಅಭಿವೃದ್ಧಿ ಕೆಲಸ ನಡೆದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎ. ರಾಮದಾಸ್ ಹೇಳಿದರು.
ವಿಶ್ವೇಶ್ವರನಗರದ ಚಂದ್ರವಿಹಾರ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕೆ.ಆರ್. ಕ್ಷೇತ್ರ ಘಟಕ ಏರ್ಪಡಿಸಿದ್ದ ವಿವಿಧ ಪಕ್ಷಗಳ ಮುಖಂಡರ ಪಕ್ಷ ಸೇರ್ಪಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಮ್ಮ ಅವಧಿಯಲ್ಲಿ ನಡೆದ ಅನೇಕ ಅಭಿವೃದ್ಧಿ ಕಾಮಗಾರಿ ಕಂಡು ಸಹಿಸಲಾಗದವರು ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಈ ಬಾರಿ ವಿಭಿನ್ನ ರೀತಿಯ ಚುನಾವಣೆಯನ್ನು ತಮ್ಮ ಅನುಮತಿಯ ಮೇರೆಗೆ ಮಾಡಬೇಕು. ಒಂದೇ ವೇದಿಕೆಯಲ್ಲಿ ಕೆ.ಆರ್. ಕ್ಷೇತ್ರದ ವಿವಿಧ ಪಕ್ಷದ ಅಭ್ಯರ್ಥಿಗಳನ್ನು ಕೂರಿಸಿ, ಯಾರು ತಮ್ಮ ಅವಧಿಯಲ್ಲಿ ಎಷ್ಟು ಕೆಲಸ ಮಾಡಿದ್ದಾರೆ ಎಂದು ಬಹಿರಂಗವಾಗಿ ಜನರಿಗೆ ತಿಳಿಸುವುದು. ಆಗ ಜನ ಯಾರಿಗೆ ಬೆಂಬಲ ಸೂಚಿಸುತ್ತಾರೋ ನೋಡೋಣ ಎಂದ ಅವರು ನಾನು ಮಾಡಿದ ಅಭಿವೃದ್ಧಿಯ ಪುಸ್ತಕ ತೆರೆದಿಟ್ಟು ಮತ ಕೇಳುತ್ತೇನೆ ಎಂದರು.
ಸಂವಿಧಾನ ಬಾಹಿರ: ಈ ಬಾರಿಯ ಸ್ಥಳೀಯ ಸಂಸ್ಥೆ ಚುನಾವಣೆ ಸಂವಿಧಾನ ಬಾಹಿರವಾದದ್ದು. ಕೆ.ಆರ್. ಕ್ಷೇತ್ರದ ಎಲ್ಲಾ ಮಹಿಳೆಯರು ರಾಷ್ಟ್ರಪತಿಗಳಿಗೆ ಪತ್ರ ಬರೆಯುವ ಚಳವಳಿ ಹಮ್ಮಿಕೊಂಡು ಶೇ. 50 ರಷ್ಟು ಮೀಸಲಾತಿ ಕೇಳಬೇಕು ಎಂದರು.
ಸ್ಥಳೀಯ ಮುಖಂಡ ಯೋಗಾ ಶ್ರೀನಿವಾಸ್ ಮತ್ತು ಬೆಂಬಲಿಗರು ಬಿಜೆಪಿಗೆ ಸೇರ್ಪಡೆಯಾದರು. ಕೆ.ಆರ್. ಕ್ಷೇತ್ರ ಬಿಜೆಪಿ ಅಧ್ಯಕ್ಷ ವಿ. ಸೋಮಸುಂದರ್ ಅಧ್ಯಕ್ಷತೆ ವಹಿಸಿದ್ದರು. ನಗರ ಬಿಜೆಪಿ ಅಧ್ಯಕ್ಷ ಎಂ. ಶಿವಕುಮಾರ್, ಪಾಲಿಕೆ ಮಾಜಿ ಸದಸ್ಯರಾದ ಮ.ವಿ. ರಾಮಪ್ರಸಾದ್, ವಿದ್ಯಾಅರಸ್, 11ನೇ ವಾರ್ಡ್ ಬಿಜೆಪಿ ಅಧ್ಯಕ್ಷ ಸುರೇಶ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.