ಮಕ್ಕಳಿಗಾಗಿ ಸಮಯ ಮೀಸಲಿಡಿ: ಗಣಪತಿ
ಮೈಸೂರು: ಆಧುನಿಕ ಬದುಕಿನ ನಾಗಾಲೋಟದ ಭರದಲ್ಲಿ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಸೇರಿಸಿದ ತಕ್ಷಣ ಎಲ್ಲಾ ಮುಗಿಯಿತು ಅಂದುಕೊಳ್ಳದೆ ಅವರೊಂದಿಗೆ ಭಾವನಾತ್ಮಕವಾಗಿ ಬೆರೆತು, ವ್ಯಕ್ತಿತ್ವ ರೂಪಿಸುವುದಕ್ಕಾಗಿ ಸಮಯ ಮೀಸಲಿಡುವಂತೆ ಪತ್ರಿಕೋದ್ಯಮಿ ಕೆ.ಬಿ. ಗಣಪತಿ ಪೋಷಕರಿಗೆ ಮನವಿ ಮಾಡಿದರು.
ದಟ್ಟಗಳ್ಳಿಯಲ್ಲಿರುವ ಕೌಟಿಲ್ಯ ವಿದ್ಯಾಲಯದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಶಾಲೆಯ 8ನೇ ವಾರ್ಷಿಕೋತ್ಸವ ಕೌಟಿಲ್ಯ ಸಂಭ್ರಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದಿನ ಪರಿಸ್ಥಿತಿಯಲ್ಲಿ ಶಿಕ್ಷಣ ಒದಗಿಸುವುದು ಸವಾಲಿನ ವಿಷಯ. ಯಾವುದೇ ಶಾಲೆಯು ಮೌಲ್ಯಯುತ ಶಿಕ್ಷಣವನ್ನು ಸಮಾಜಕ್ಕೆ ನೀಡುವಲ್ಲಿ ಸರ್ಕಾರ, ವಿದ್ಯಾಭಿಮಾನಿಗಳು, ಪೋಷಕರು, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ಜವಾಬ್ದಾರಿಯುತ ಹಾಗೂ ರಚನಾತ್ಮಕ ಪಾಲ್ಗೊಳ್ಳುವಿಕೆ ಹಿಂದೆಂದಿಗಿಂತಲೂ ಪ್ರಸಕ್ತ ಸಮಯದಲ್ಲಿ ಹೆಚ್ಚು ಅವಶ್ಯಕವಾಗಿದೆ ಎಂದರು.
ಅತಿಥಿಯಾಗಿದ್ದ ಬೆಂಗಳೂರಿನ ಆಕ್ಸ್‌ಫರ್ಡ್ ಎಜುಕೇಷನಲ್ ಇನ್ಸ್‌ಟ್ಯೂಟ್‌ನ ಕಾರ್ಯನಿರ್ವಾಹಕ ನಿರ್ದೇಶಕ ಎಸ್.ಎನ್.ವಿ.ಎಲ್. ನರಸಿಂಹರಾಜು ಮಾತನಾಡಿ, ಶಿಕ್ಷಕ ವೃತ್ತಿಯು ಸಮಾಜದಲ್ಲೇ ಪ್ರಥಮ ಗೌರವದಾಯಕ ವೃತ್ತಿಯಾಗಿದ್ದು, ವಿದ್ಯಾರ್ಥಿಗಳು ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರಂತೆ ತಮ್ಮ ಉನ್ನತ ಗುರಿ ಹಾಗೂ ಬದುಕಿನ ಕುರಿತು ಕನಸನ್ನು ಕಂಡು ಆ ಕನಸನ್ನು ನನಸು ಮಾಡಿಕೊಳ್ಳುವಲ್ಲಿ ಶಿಕ್ಷಕರು ಹಾಗೂ ಪೋಷಕರು ಆದರ್ಶವಾಗಬೇಕು ಎಂದು ತಿಳಿಸಿದರು.
ಇದೇ ವೇಳೆ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕಿ ಲಿನ್ ಮಿಲ್‌ಡ್ರೆಡ್ ಕಾಟರ್ ಅವರಿಗೆ ಪ್ರಸಕ್ತ ಸಾಲಿನ ಕೌಟಿಲ್ಯ ವಿದ್ಯಾರತ್ನ ಪ್ರಶಸ್ತಿಯೊಂದಿಗೆ 10 ಸಾವಿರ ಬಹುಮಾನ ನೀಡಲಾಯಿತು. ಅನುಪಮ ಸೇವೆ ಸಲ್ಲಿಸಿದ ಜೆನಿಫರ್ ಸೇನ್ ಗುಪ್ತಾ, ಕಣ್ಮಣಿ, ಶಾಲಿನಿ, ಉಷಾಸಿಂಹ, ಸಂಗೀತ, ಕುಸುಮ, ಕವಿತಾ, ಹುಮಾಯೂನ್, ವಿಕ್ಟರ್ ವಿಲಿಯಮ್ಸ್ ಅವರಿಗೆ ನೆನಪಿನ ಕಾಣಿಕೆ ನೀಡಲಾಯಿತು. ಎಂಬಿಎ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣನಾದ ವಿದ್ಯಾರ್ಥಿ ಕೆ.ಎಸ್. ಅನೂಪ್ ಹಾಗೂ ಈ ಸಾಲಿನ ವಾಯ್ಸ್ ಆಫ್ ಬೆಂಗಳೂರ್‌ನಲ್ಲಿ ಪ್ರಥಮ ಸ್ಥಾನ ಗಳಿಸಿದ ವಿಜೇತ್ ಅರಸ್ ಅವರನ್ನೂ ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.
ವಿದ್ಯಾಲಯದ ಅಧ್ಯಕ್ಷ ಆರ್. ರಘು ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟಿ ನಿರ್ಮಲ ಇದ್ದರು. ವಿದ್ಯಾರ್ಥಿನಿ ರಕ್ಷಿತಾ ಇ. ಪಾಲ್ ಸ್ವಾಗತಿದರು. ಪ್ರಾಂಶುಪಾಲೆ ಎಲ್. ಸವಿತ ಪ್ರಾಸ್ತಾವಿಕ ಭಾಷಣ ಮಾಡಿದರು. ಶಿಕ್ಷಕಿ ಜೆನಿಫರ್ ಮತ್ತು ಮಮತ ಶರತ್ ನಿರೂಪಿಸಿ, ವಿದ್ಯಾರ್ಥಿ ಅಸ್ಫಾನ್‌ಖಾನ್ ವಂದಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

