ರೈಲಿಗೆ ಸಿಲುಕಿಅಪರಿಚಿತ ಸಾವು
ಮೈಸೂರು: ಮಂಡ್ಯ ಜಿಲ್ಲೆಯ ಮದ್ದೂರು- ಹನಕೆರೆ ರೈಲು ನಿಲ್ದಾಣಗಳ ಮಧ್ಯೆ ಅಪರಿಚಿತ ವ್ಯಕ್ತಿ ರೈಲಿಗೆ ಸಿಕ್ಕಿ ಮೃತಪಟ್ಟಿರುವ ಘಟನೆ ಶನಿವಾರ ನಡೆದಿದೆ.
ಮೃತರ ಚಹರೆ: 25 ವರ್ಷ, 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕಪ್ಪು ಮೈಬಣ್ಣ, ದುಂಡುಮುಖ, ಗಿಡ್ಡ ಮೂಗು, ತಲೆಯಲ್ಲಿ ಸುಮಾರು 2 ಇಂಚು ಉದ್ದದ ಕಪ್ಪು ಕೂದಲು, ಎಡ ಮೊಣಕೈಯಲ್ಲಿ ಲವ್ ಸಿಂಬಲ್ ಒಳಗಡೆ ಖ ಎಂಬ ಹಚ್ಚೆ ಗುರುತು ಇದೆ. ನಶ್ಯ ಬಣ್ಣದ ತುಂಬು ತೋಳಿನ ಗೆರೆಗಳಿರುವ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್, ಸಿಮೆಂಟ್ ಬಣ್ಣದ ರೆಗ್ಜಿನ್ ಜರ್ಕಿನ್, ಎರಡು ಕೈಗಳಲ್ಲಿ ಕಪ್ಪು ದಾರ ಧರಿಸಿದ್ದಾರೆ.
ಮೃತ ವ್ಯಕ್ತಿಯ ದೇಹವನ್ನು ಮಂಡ್ಯ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಮೃತರ ವಾರಸುದಾರರು ಇದ್ದಲ್ಲಿ ಮೈಸೂರು ರೈಲ್ವೆ ಠಾಣೆ ದೂ. 0821- 2516579, ಮಂಡ್ಯ ಹೊರ ಉಪಠಾಣೆ ದೂ. 08232- 222340 ಸಂಪರ್ಕಿಸಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

