ಮೈಸೂರು

ವಿದ್ಯಾರ್ಥಿಗಳಲ್ಲಿ ಅಸಾಧಾರಣ ಬುದ್ಧಿಶಕ್ತಿ: ಡಾ. ತಿಪ್ಪೇಸ್ವಾಮಿ

Published On :

ಸುತ್ತೂರು: ವಿದ್ಯಾರ್ಥಿ ಸಮುದಾಯದಲ್ಲಿ ಅಸಾಧಾರಣ ಬುದ್ದಿಶಕ್ತಿ ಸಾಮರ್ಥ್ಯವಿದೆ. ಅದನ್ನು ಸರಿಯಾಗಿ ಬಳಸಿಕೊಂಡರೆ ವಿದ್ಯಾರ್ಥಿಗಳು ಉತ್ತಮ ಸಾಧಕರಾಗಬಹುದು ಎಂದು ಮೈಸೂರಿನ ಕೇಂದ್ರ ರೇಷ್ಮೆ ಸಂಶೋಧನೆ ಮತ್ತು ತರಬೇತಿ ಸಂಸ್ಥೆಯ ಜಂಟಿ ನಿರ್ದೇಶಕ ಡಾ.ಟಿ. ತಿಪ್ಪೇಸ್ವಾಮಿ ಹೇಳಿದರು.
ಇಲ್ಲಿನ ಜೆಎಸ್‌ಎಸ್ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳ ವಾರ್ಷಿಕೋತ್ಸವದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿ, ಇಲ್ಲಿನ ಶಾಲಾ ವಾರ್ಷಿಕೋತ್ಸವವನ್ನು ನೋಡುತ್ತಿದ್ದರೆ ಒಂದು ರೀತಿಯ ಸಾಧನಾ ಸಮಾವೇಶ ನೋಡಿದಂಥ ಸಂತೋಷವಾಗುತ್ತದೆ. ವಿದ್ಯಾರ್ಥಿಗಳಾದ ನೀವು ನಿಮ್ಮ ಸಹಪಾಠಿಗಳು ಬಹುಮಾನ ಸ್ವೀಕರಿಸುತ್ತಿರುವಾಗ ನೀವು ಚಪ್ಪಾಳೆ ತಟ್ಟಿ ಅವರನ್ನು ಪ್ರೋತ್ಸಾಹಿಸುವುದನ್ನು ನೋಡಿದರೆ, ನಿಜಕ್ಕೂ ಸಂತಸವಾಗುತ್ತದೆ ಎಂದು ತಿಳಿಸಿದರು. ಉಪವಿಭಾಗಾಧಿಕಾರಿ ಬಸವರಾಜು ಅಧ್ಯಕ್ಷತೆ ವಹಿಸಿ ಮಾತನಾಡಿ, ಎಲ್ಲಾ ಐಶ್ವರ್ಯಗಳಿಗಿಂತಲೂ ಮಿಗಿಲಾದುದು ಶಿಕ್ಷಣ ಎಂದು ಹೇಳಿದರು. ನಂಜನಗೂಡಿನ ಕ್ಷೇತ್ರ ಶಿಕ್ಷಣಾಧಿಕಾರಿ ಪುರುಷೋತ್ತಮ್ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.  
ಸುತ್ತೂರು ಜೆಎಸ್‌ಎಸ್ ಸಂಸ್ಥೆಗಳ ಆಡಳಿತಾಧಿಕಾರಿ ಶೇಖರ್‌ಪಾಟೀಲ್, ಗೌರವ ಸಹಾಯಕ ಆಡಳಿತಾಧಿಕಾರಿ ಎಸ್.ಪಿ. ಉದಯಶಂಕರ್ ಹಾಗೂ ಮುಖ್ಯಸ್ಥರು ಇದ್ದರು. ವಿದ್ಯಾರ್ಥಿಗಳಾದ ಎಸ್.ಜೆ. ವಿಶ್ವನಾಥ್ ಸ್ವಾಗತಿಸಿದರು. ನಾಗನಗೌಡ ವಂದಿಸಿದರು. ಎಂ.ಕೆ. ಪೂಜಾ ನಿರೂಪಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.