ಶಾಂತಿ ಕದಡಲು ಸಂಘಟನೆಗಳ ಯತ್ನ: ಆರೋಪ
ಟಿ. ನರಸೀಪುರ: ತಾಲೂಕಿನಲ್ಲಿ ನಡೆದಿರುವ ಶಿಕ್ಷಣ ಸಂಯೋಜಕಿ ರೂಪಾ ಆತ್ಮಹತ್ಯೆ ಪ್ರಕರಣದಲ್ಲಿ ಕೆಲವು ಸಂಘಟನೆಗಳು ಶಾಂತಿ ಕದಡುವ ಯತ್ನ ನಡೆಸಿವೆ ಎಂದು ಟಿ. ನರಸೀಪುರ ತಾಲೂಕು ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ಧಿ ಸಂಘ ಹಾಗೂ ಟಿ. ನರಸೀಪುರ ತಾಲೂಕು ಒಕ್ಕಲಿಗ ಯುವ ವೇದಿಕೆ ಆರೋಪಿಸಿದೆ.
ಈಗಾಗಲೇ ದಕ್ಷ ಹಾಗೂ ಪ್ರಾಮಾಣಿಕ ಕ್ಷೇತ್ರ ಶಿಕ್ಷಣಾಧಿಕಾರಿ ಮೇಲೆ ಬಂದಿರುವ ಆರೋಪದ ಬಗ್ಗೆ ತನಿಖೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡಿರುವ ಆಕೆ ಮಾನಸಿಕ ರೋಗಿಯೆಂದು ವೈದ್ಯಕೀಯ ಪ್ರಮಾಣ ಪತ್ರ ನೀಡಲಾಗಿದೆ. ಆಕೆಯ ಪತಿ ಕೂಡ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಇದನ್ನು ಗಮನಿಸಿದರೆ ಆಕೆಯ ಪತಿ ರಘು ಅವರು ಎಲ್ಲರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಅನುಮಾನ ಕಾಡಿದೆ ಎಂದು ಸಂಘಟನೆಯ ಮುಖಂಡರು ಸಂಶಯ ವ್ಯಕ್ತಪಡಿಸಿದ್ದಾರೆ.
ಶಿಕ್ಷಣ ಇಲಾಖೆ ಹಾಗೂ ಪೊಲೀಸ್ ಇಲಾಖೆಯು ತನಿಖೆ ನಡೆಸುತ್ತಿದ್ದು, ಇದರ ಸತ್ಯಾಸತ್ಯತೆ ಹೊರಬರುವವರೆಗೂ ತಾಳ್ಮೆ ವಹಿಸುವುದು ಅಗತ್ಯ. ಇಲ್ಲವಾದರೆ ಪ್ರತಿಯಾಗಿ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಸಂಘಟನೆ ಅಧ್ಯಕ್ಷರಾದ ಎನ್.ಎಂ. ರಾಮಚಂದ್ರ ಹಾಗೂ ಎಸ್. ಉಮೇಶ್ ಎಚ್ಚರಿಕೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

