ಹುಣಸೂರು ಪುರಸಭೆ ಚುನಾವಣೆಗೆ ಸಿದ್ಧತೆ
ಹುಣಸೂರು: ಮಾ. 7 ರಂದು ನಡೆಯುವ ಹುಣಸೂರು ಪುರಸಭೆಯ 27 ಸ್ಥಾನಗಳಿಗೆ ನಾಮಪತ್ರ ಸಲ್ಲಿಸುವ ಸ್ಥಳ ಹಾಗೂ ಚುನಾವಣಾಧಿಕಾರಿಗಳನ್ನು ನೂತನ ತಹಸೀಲ್ದಾರ್ ಜಿ.ಬಿ. ಚಂದ್ರಪ್ಪ ಪ್ರಕಟಿಸಿದರು.
1 ರಿಂದ 9ನೇ ವಾರ್ಡಿಗೆ ಪುರಸಭಾ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸೋಮಯ್ಯ ಅವರು ಚುನಾವಣಾಧಿಕಾರಿಯಾಗಿ ಹಾಗೂ ಪುರಸಭಾ ಮುಖ್ಯಾಧಿಕಾರಿ ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ವಾರ್ಡ್ ನಂ. 10 ರಿಂದ 18 ರವರೆಗೆ ತಾಪಂ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ತಾಲೂಕು ಕಚೇರಿಯ ಗ್ರೇಡ್ 2 ತಹಸೀಲ್ದಾರ್ ಗಣೇಶ್ ಚುನಾವಣಾಧಿಕಾರಿಯಾಗಿಯೂ, ಲೋಕೋಪಯೋಗಿ ಇಲಾಖೆಯ ವ್ಯವಸ್ಥಾಪಕ ಮೋಹನ್ಕುಮಾರ್ ಅವರು ಸಹಾಯಕ ಚುನಾವಣಾಧಿಕಾರಿಯಾಗಿದ್ದಾರೆ.
ವಾರ್ಡ್ ನಂ. 19 ರಿಂದ 27 ರವರೆಗೆ ಕ್ಷೇತ್ರ ಶಿಕ್ಷಣಾಧಿಕಾರಿ (ಬಿಇಒ)ಗಳ ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುವುದು. ಬಿಇಒ ರಾಜಶೇಖರ್ ಚುನಾವಣಾಧಿಕಾರಿಯಾಗಿ, ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಗೋಪಾಲ್ ಸಹಾಯಕ ಚುನಾವಣಾಧಿಕಾರಿಯಾಗಿರುತ್ತಾರೆ. ಫೆ. 16 ರಿಂದ 23ರವರೆಗೆ ನಾಮಪತ್ರ ಸಲ್ಲಿಸಬಹುದು. ಫೆ. 25ಕ್ಕೆ ಪರಿಶೀಲನೆ, ಫೆ. 27ಕ್ಕೆ ನಾಮಪತ್ರ ಹಿಂದೆಗೆಯಲು ಅವಕಾಶವಿದ್ದು, ಮಾ. 7ರಂದು ಚುನಾವಣೆ ನಡೆಯಲಿದೆ. 2007ರಲ್ಲಿ ನಡೆದ ಚುನಾವಣಾ ಮೀಸಲಾತಿಯನ್ನೆ ಈ ಬಾರಿಯ ಚುನಾವಣೆಗೂ ನಿಗದಿಗೊಳಿಸಲಾಗಿದೆ ಎಂದು ತಹಸೀಲ್ದಾರ್ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

