ಮೈಸೂರು

ಜೆಡಿಎಸ್ ಕಚೇರಿಯಲ್ಲಿ ಅರ್ಜಿ ವಿತರಣೆ

Published On :

ಹುಣಸೂರು: ಪುರಸಭೆಯ ಚುನಾವಣೆಯ ಹಿನ್ನೆಲೆಯಲ್ಲಿ ಜೆಡಿಎಸ್ ಆಕಾಂಕ್ಷಿಗಳಿಗೆ ಫೆ. 21ರ ವರೆಗೆ ಪಕ್ಷದ ಕಚೇರಿಯಲ್ಲಿ ಅರ್ಜಿ ವಿತರಿಸಲಾಗುವುದು ಎಂದು ತಾಲೂಕು ಅಧ್ಯಕ್ಷ ಲಾರಿ ಸ್ವಾಮಿಗೌಡ ತಿಳಿಸಿದರು. ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸುವವರು 1000 ಹಾಗೂ ಎಸ್ಸಿ, ಎಸ್ಟಿ, ಬಿಸಿಎಂ(ಎ), ಬಿಸಿಎಂ(ಬಿ) ಹಾಗೂ ಮಹಿಳಾ ಕ್ಷೇತ್ರಗಳಿಗೆ 500 ಶುಲ್ಕ ಪಾವತಿಸಿ ಅರ್ಜಿ ಪಡೆಯಬೇಕು. ಪಟ್ಟಣದ 27 ವಾರ್ಡುಗಳ ಪಕ್ಷದ ಅಭ್ಯರ್ಥಿಗಳ ಆಯ್ಕೆಗಾಗಿ ಸಮಿತಿ ರಚನೆ ಮಾಡಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಪಕ್ಷನಿಷ್ಠೆ, ಸ್ಥಳೀಯ ಕಾರ್ಯಕರ್ತರ ಅಭಿಪ್ರಾಯ ಹಾಗೂ ಹೊಸ ಮುಖಗಳಿಗೆ ಆದ್ಯತೆ ನೀಡಲಾಗುವುದು ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಜಿಪಂ ಸದಸ್ಯ ಸಿ.ಟಿ. ರಾಜಣ್ಣ, ಮಾಜಿ ಸದಸ್ಯೆ ಭಾಗ್ಯಮ್ಮ, ಗಣಪತ್‌ರಾವ್ ಇಂಡೋಲ್ಕರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.