ರಾಷ್ಟ್ರಪತಿ ಪದಕ ಪುರಸ್ಕೃತ ರಾಜಗೆ ಸನ್ಮಾನ
ಮೈಸೂರು: ಕರ್ನಾಟಕ ರಾಜ್ಯ ವಾಲ್ಮೀಕಿ ನಾಯಕರ ಸಂಘಗಳ ಒಕ್ಕೂಟದ ವತಿಯಿಂದ ಕರ್ನಾಟಕ ರಾಜ್ಯ ಕೇಂದ್ರ ಕಾರಾಗೃಹ ಉಪಮಹಾನಿರ್ದೇಶಕ ಹಾಗೂ ರಾಷ್ಟ್ರಪತಿ ಪದಕ ಪುರಸ್ಕೃತ ವಿ.ಎಸ್. ರಾಜ ಅವರನ್ನು ಸನ್ಮಾನಿಸಲಾಯಿತು.
ಭಾನುವಾರ ನಗರದ ರೋಟರಿ ಕೇಂದ್ರದಲ್ಲಿ ನಡೆದ ಚಿಂತನ ಮಂಥನ ಕಾರ್ಯಕ್ರಮದಲ್ಲಿ ಗೌರವ ಸ್ವೀಕರಿಸಿ ಮಾತನಾಡಿದ ರಾಜ, ಇದು ತಮಗೆ ಸಿಗುತ್ತಿರುವ ಎರಡನೇ ರಾಷ್ಟ್ರಪತಿ ಪದಕವಾಗಿದ್ದು, ಜನಾಂಗದ ಏಳಿಗೆ ಮತ್ತು ಹಕ್ಕುಗಳು ಸಿಗಬೇಕಾದರೆ ಎಲ್ಲರೂ ಒಗ್ಗೂಡಬೇಕು. ಸನ್ಮಾನಕ್ಕೆ ತಾವು ಚಿರಋಣಿಯಾಗಿದ್ದು, ಸಮಾಜಕ್ಕೆ ಅಳಿಲು ಸೇವೆ ಮಾಡುವ ಧ್ಯೇಯ ಹೊಂದಿದ್ದೇನೆ ಎಂದರು.
ಒಕ್ಕೂಟದ ಗೌರವಾಧ್ಯಕ್ಷ ಎಸ್. ಹನುಮಂತಪ್ಪ ಅಧ್ಯಕ್ಷತೆ ವಹಿಸಿದ್ದರು. ಮುಖಂಡರಾದ ಕೆ.ವಿ. ನಾಗೇಂದ್ರ, ಜಿ.ಎನ್. ದೇವದತ್ತ, ಪಿ.ದೇವರಾಜು, ಟಿ. ತಿಬ್ಬಣ್ಣ, ಎಂ. ರಾಮು, ಎಂ. ಲಕ್ಷ್ಮಣನಾಯಕ, ಎಂ. ಶ್ರೀನಿವಾಸ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

