ಮೈಸೂರು

ಸಂಸದ ಎಚ್. ವಿಶ್ವನಾಥ್ ಹೇಳಿಕೆಗೆ ಖಂಡನೆ

Published On :

ಮೈಸೂರು: ಕಾವೇರಿ ಐತೀರ್ಪು ಬಂದ ನಂತರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಜಕೀಯ ಮಾಡುವುದರಲ್ಲೇ ಕಾಲ ಕಳೆಯುತ್ತಿದ್ದಾರೆ ಎಂದಿರುವ ಸಂಸದ ಎಚ್. ವಿಶ್ವನಾಥ್ ಅವರ ಹೇಳಿಕೆಯನ್ನು ಮೈಸೂರು ಜಿಲ್ಲಾ ಕನ್ನಡ ಚಳವಳಿಗಾರರ ಸಂಘದ ಅಧ್ಯಕ್ಷ ಬಿ.ಎ. ಶಿವಶಂಕರ್ ತೀವ್ರವಾಗಿ ಖಂಡಿಸಿದ್ದಾರೆ.
1990ರ ದಶಕದಲ್ಲಿ ದೇವೇಗೌಡರು ಲೋಕಸಭಾ ಸದಸ್ಯರಾಗಿದ್ದಾಗಲೇ ಕಾವೇರಿ ವಿಚಾರವನ್ನು ಸಮಗ್ರವಾಗಿ ಲೋಕಸಭೆಯಲ್ಲಿ ಗಂಟೆಗಟ್ಟಲೆ ಪ್ರಸ್ತಾಪಿಸಿ ಇಡೀ ರಾಷ್ಟ್ರದ ಗಮನ ಸೆಳೆದಿದ್ದರು. ದೇವೇಗೌಡರು ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿದ್ದು ರಾಜಕೀಯ ಮಾಡುವುದಕ್ಕಲ್ಲ. ರಾಜ್ಯಕ್ಕೆ ಕಾವೇರಿ ವಿಚಾರದಲ್ಲಿ ಒದಗಿರುವ ಗಂಡಾಂತರ ಕುರಿತು ಚರ್ಚಿಸಿ ಕಾವೇರಿ ವಿವಾದದ ಬಗ್ಗೆ ಮುಂದೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿ ಮಾರ್ಗದರ್ಶನ ನೀಡಿದ್ದಾರೆಯೇ ವಿನಃ ರಾಜಕೀಯ ಉದ್ದೇಶದಿಂದಲ್ಲ ಎಂದು ಹೇಳಿದ್ದಾರೆ.
1983 ರಲ್ಲಿ ರಾಮಕೃಷ್ಣ ಹೆಗಡೆಯವರ ಸಂಪುಟದಲ್ಲಿ ದೇವೇಗೌಡರು ಸಚಿವರಾಗಿದ್ದಾಗ ಕಾವೇರಿ ಜಲಾನಯನ ಪ್ರದೇಶದ ಯೋಜನೆಗಾಗಿ ನೂರು ಕೋಟಿ ಹಣವನ್ನು ಕೊಡಲಿಲ್ಲವೆಂದು ಹೇಳಿ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದರು. 1964 ರಲ್ಲಿ ದೇವೇಗೌಡರು ಶಾಸಕರಾಗಿದ್ದ ಅವಧಿಯಲ್ಲಿ ವಿಧಾನಸಭೆಯಲ್ಲಿ ಕಾವೇರಿ ಕುರಿತಂತೆ ಖಾಸಗಿ ಮಸೂದೆಯನ್ನು ಮಂಡಿಸಿ ಅದನ್ನು ಸರ್ವಾನುಮತದಿಂದ ಅಂಗೀಕಾರವಾಗುವಂತೆ ಮಾಡಿದಂತ ಕೀರ್ತಿಗೆ ಗೌಡರಿಗೆ ಸಲ್ಲುತ್ತದೆ ಎಂದು ಹೇಳಿದರು.
ಕಾವೇರಿ ವಿಚಾರದಲ್ಲಿ ದೇವೇಗೌಡರ ಹೋರಾಟ ಪ್ರಶ್ನಾತೀತವಾದದು. ಇದನ್ನು ವಿಶ್ವನಾಥ್ ಅರಿಯಬೇಕು. ಮಾಜಿ ಪ್ರಧಾನಿ ವಿರುದ್ಧ ಕಾವೇರಿ ವಿಚಾರದಲ್ಲಿ ಇಲ್ಲಸಲ್ಲದ ಆರೋಪ ಮಾಡುವುದರಲ್ಲಿ ಕಾಲಕಳೆಯುತ್ತಿರುವ ವಿಶ್ವನಾಥ್ ಅವರ ಕೊಡುಗೆ ಶೂನ್ಯವಾಗಿದೆ. ದೇವೇಗೌಡರ ಬಗ್ಗೆ ಟೀಕಿಸುವ ನೈತಿಕ ಹಕ್ಕು ಇವರಿಗಿಲ್ಲ ಎಂದು ಶಿವಶಂಕರ್ ಟೀಕಿಸಿದ್ದಾರೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.