ಚಾಮುಂಡಿಬೆಟ್ಟ ಭೂವಿವಾದ: ಪಿ.ಎಸ್. ವಸ್ತ್ರದ್ಗೆ ನೋಟಿಸ್
ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನಲ್ಲಿ 2 ಸಾವಿರ ಎಕರೆ ಸರ್ಕಾರಿ ಭೂಮಿಯನ್ನು ಖಾಸಗಿಯವರಿಗೆ ಪರಭಾರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿಂದಿನ ಜಿಲ್ಲಾಧಿಕಾರಿ ಪಿ.ಎಸ್. ವಸ್ತ್ರದ್ ಅವರಿಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ನೋಟಿಸ್ ಜಾರಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.
ಇದರಿಂದ ವಿವಾದಕ್ಕೀಡಾಗಿ ಪಿ.ಎಸ್. ವಸ್ತ್ರದ್ ಅವರು ಮೈಸೂರು ಜಿಲ್ಲಾಧಿಕಾರಿ ಸ್ಥಾನದಿಂದ ಎತ್ತಂಗಡಿಯಾಗಿ, ಪ್ರಸ್ತುತ ಪುರಾತತ್ವ ಇಲಾಖೆ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಜಿಲ್ಲಾಧಿಕಾರಿ ಸಭೆ: ಏತನ್ಮಧ್ಯೆ ಜಿಲ್ಲಾಧಿಕಾರಿ ಡಾ.ರಾಮೇಗೌಡ ಅವರು ಬುಧವಾರ ಕಂದಾಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು. ಚಾಮುಂಡಿಬೆಟ್ಟ ತಪ್ಪಲು ಭೂವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಬಂದಿರುವ ಸೂಚನೆಯ ಹಿನ್ನೆಲೆಯಲ್ಲಿ ಈ ಸಭೆ ನಡೆಸಿದ ಅವರು, ಈ ವಿಷಯದಲ್ಲಿ ಮುಂದಿನ ಆದೇಶದವರೆಗೆ ಯಾವುದೇ ಪ್ರಕ್ರಿಯೆ ನಡೆಸದಂತೆ ಆದೇಶಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ನಾಗನಾಯಕ, ಎಂಡಿಎ ಆಯುಕ್ತ ಡಾ.ಸಿ.ಜಿ. ಬೆಟ್ಸೂರಮಠ, ಉಪ ವಿಭಾಗಾಧಿಕಾರಿ ಬಸವರಾಜು, ತಹಸೀಲ್ದಾರ್ ನವೀನ್ ಜೋಸೆಫ್, ಎಸ್ಪಿ ಆರ್. ದಿಲೀಫ್, ಡಿಸಿಪಿ ಬಸವರಾಜ ವೈ. ಮಾಲಗತ್ತಿ ಮೊದಲಾದವರು ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

