ಪಾಲಿಕೆಯಲ್ಲಿ ಕಾಂಗ್ರೆಸ್ಗೆ ಅಧಿಕಾರ
ಮೈಸೂರು: ನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಜಯಗಳಿಸಲಿದ್ದು, ಸ್ವತಂತ್ರವಾಗಿ ಅಧಿಕಾರ ಹಿಡಿಯಲಿದೆ ಎಂದು ಮಾಜಿ ಮೇಯರ್ ವಾಸು ವಿಶ್ವಾಸ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರದ ನರ್ಮ್ ಯೋಜನೆ, ವಸತಿ ಯೋಜನೆ ಮತ್ತು ಆರೋಗ್ಯ ಯೋಜನೆಗಳನ್ನು ರಾಜ್ಯ ಸರ್ಕಾರ ತನ್ನ ಕಾರ್ಯಕ್ರಮ ಎಂಬಂತೆ ಬಿಂಬಿಸುತ್ತಿದೆ. ಪಾಲಿಕೆಯಲ್ಲಿ ಕಳೆದ ಬಾರಿ ಕಾಂಗ್ರೆಸ್ಗೆ ಬಹುಮತ ಲಭಿಸದೆ ಜೆಡಿಎಸ್ ಜತೆ ಸೇರಿ ಆಡಳಿತ ನಡೆಸುವಂತೆ ಆಗಿತ್ತು. ಅಲ್ಲದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಡಳಿತ ನಡೆಸುತ್ತಿರುವುದು ಅನೇಕ ಅಭಿವೃದ್ಧಿ ಕೆಲಸಕ್ಕೆ ಹಿನ್ನಡೆಯುಂಟು ಮಾಡಿತು ಎಂದು ಅವರು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನರ್ಮ್ ಯೋಜನೆ ಸೇರಿದಂತೆ ಅನೇಕ ಯೋಜನೆಗಳಲ್ಲಿ ಆಗಿರುವ ದೋಷವನ್ನು ಮುಂದಿನ ದಿನಗಳಲ್ಲಿ ಸರಿಪಡಿಸಿಕೊಳ್ಳಲಾಗುವುದು ಎಂದರು.
ಮೈಸೂರಿಗೆ ಜಯದೇವ ಆಸ್ಪತ್ರೆ ನೀಡಿದಂತೆಯೇ ಕಿದ್ವಾಯಿ ಮತ್ತು ನಿಮ್ಹಾನ್ಸ್ನ ಘಟಕಗಳನ್ನು ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇನೆ ಎಂದ ಅವರು, ನಗರಕ್ಕೆ ಈ್ಝಜಿರುವ ನಗರ ಅಭಿವೃದ್ಧಿ ಯೋಜನೆಗೆ ಒಪ್ಪಿಗೆ ಸೂಚಿಸಿದರೆ ಮುಂದಿನ ದಿನಗಳಲ್ಲಿ ಬೆಂಗಳೂರಿನ ನಂತರ ಮೈಸೂರು 2ನೇ ಕಸದ ನಗರವಾಗುತ್ತದೆ. ಆದ್ದರಿಂದ ಕಸ ನಿರ್ವಹಣೆಗೆ ಖಾಸಗಿಯವರಿಗೆ ಜಾಗ ಮಾರಿಕೊಳ್ಳುವ ಇಂತಹ ಯೋಜನೆಗೆ ಸರ್ಕಾರ ಮುಂದಾಗಬಾರದು. ಈ ಬಗ್ಗೆ ಸ್ಥಳೀಯ ನಾಗರಿಕರು ತಮ್ಮ ಜವಾಬ್ದಾರಿ ಅರಿತು ಹೋರಾಟ ನಡೆಸಬೇಕು ಎಂದು ತಿಳಿಸಿದರು.
ಪಕ್ಷದ ತೀರ್ಮಾನ ಅಂತಿಮ: ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು ಎಂಬ ಪಕ್ಷದ ತೀರ್ಮಾನವೇ ಅಂತಿಮ. ಮಾಜಿ ಉಪ ಮೇಯರ್ ಪುಷ್ಪಲತಾ ಜಗನ್ನಾಥ್ ಅವರಿಗಾಗಲಿ ಅಥವಾ ಮಾಜಿ ಮೇಯರ್ ರಾಜೇಶ್ವರಿ ಅವರಿಗಾಗಲಿ ಟಕೆಟ್ ನೀಡಬಾರದು ಎಂಬುದು ನಮ್ಮ ಉದ್ದೇಶವಲ್ಲ. ಬದಲಿಗೆ ಮತ್ತೊಬ್ಬರಿಗೆ ಅವಕಾಶ ನೀಡುವುದು ನಮ್ಮ ಉದ್ದೇಶ. ಅಲ್ಲದೆ ಪುಷ್ಪಲತಾ ಜಗನ್ನಾಥ್ ಅವರಿಂದ ನಾಮಪತ್ರ ಹಿಂದಕ್ಕೆ ಪಡೆಯುವಂತೆ ಮನವೊಲಿಸಲಾಗುತ್ತಿದೆ ಎಂದು ಹೇಳಿದರು.
ಸಾಮಾನ್ಯ ಕ್ಷೇತ್ರಕ್ಕೆ ಪ.ಜಾತಿಯ ಕಲಾವಿದ ಬಾದಲ್ ನಂಜುಂಡಸ್ವಾಮಿಗೆ ಕಾಂಗ್ರೆಸ್ ಅವಕಾಶ ಮಾಡಿಕೊಟ್ಟಿದೆ. ಅಲ್ಲಿ ಸಿ. ದಾಸೇಗೌಡರ ಸಂಬಂಧಿಕರನ್ನೋ ಅಥವಾ ನಮ್ಮ ಸಂಬಂಧಿಕರನ್ನು ನಿಲ್ಲಿಸಬಹುದಿತ್ತು. ಆದರೆ ಕಾಂಗ್ರೆಸ್ ಆ ಕೆಲಸ ಮಾಡಿಲ್ಲ. ಬದಲಿಗೆ ಪಕ್ಷದ ಮುಖಂಡರೆ 4 ಸಾವಿರ ಠೇವಣಿ ನೀಡಿ ಬಾದಲ್ ಅವರಿಂದ ನಾಮಪತ್ರ ಸಲ್ಲಿಸಿದ್ದಾರೆ ಎಂದು ತಿಳಸಿದರು.
ಪಕ್ಷದ ಪ್ರಧಾನ ಕಾರ್ಯದರ್ಶಿ ಎಚ್.ಎ. ವೆಂಕಟೇಶ್ ಮಾತನಾಡಿ, ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ 44ನೇ ವಾರ್ಡ್ ಅಭ್ಯರ್ಥಿ ಶಾಂತುನೇಶನ್ ಮತ್ತು ಗೋವಿಂದರಾಜು ಚುನಾವಣೆಯಲ್ಲಿ ಸ್ಪರ್ಧಿಸಲು ಅರ್ಹರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳಿಂದ ಕ್ರಮವಾಗಿ 44 ಮತ್ತು 11ನೇ ವಾರ್ಡ್ನಲ್ಲಿ ಅಭ್ಯರ್ಥಿ ಹಾಕಲು ಸಾಧ್ಯವಾಗಿಲ್ಲ. ಆದರೆ ಕಾಂಗ್ರೆಸ್ ಎಲ್ಲಾ 65 ವಾರ್ಡ್ನಲ್ಲಿಯೂ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ ಎಂದು ವಿವರಿಸಿದರು. ನಗರ ಕಾಂಗ್ರೆಸ್ ಅಧ್ಯಕ್ಷ ಸಿ. ದಾಸೇಗೌಡ, ಡಿ. ನಾಗಭೂಷಣ್, ಭಾಸ್ಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

