ಮೈಸೂರು

ಶಿಕ್ಷಕಿ ಆತ್ಮಹತ್ಯೆ: ನಾಲ್ವರು ಶಿಕ್ಷಕರ ಅಮಾನತು

Published On :

ಮೈಸೂರು: ಶಿಕ್ಷಕಿ ಸಂಧ್ಯಾರಾಣಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಹೊತ್ತಿರುವ ಅರಸನಕೆರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4 ಮಂದಿ ಶಿಕ್ಷಕರನ್ನು ಅಮಾನತುಗೊಳಿಸಲಾಗಿದೆ.
ಶಾಲೆಯ ಮುಖ್ಯ ಶಿಕ್ಷಕ ಶಂಭುಲಿಂಗು, ಸಹ ಶಿಕ್ಷಕರಾದ ಅಶೋಕ, ನಳಿನಿ ನೀಲಾವತಿ ಮತ್ತು ಭವಾನಿ ಎಂಬವರನ್ನು ಅಮಾನತುಗೊಳಿಸಲಾಗಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಕೆ. ಬಸವರಾಜು ತಿಳಿಸಿದ್ದಾರೆ.
ಆರೋಪ ಹೊತ್ತಿರುವ ಮತ್ತೊಬ್ಬ ಶಿಕ್ಷಕಿ ನಾಜೀಮಾ ಈಗಾಗಲೇ ಹೆರಿಗೆ ರಜೆಯಲ್ಲಿದ್ದು, ಹೀಗಾಗಿ ಅಮಾನತಿನಿಂದ ಪಾರಾಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ ಸಂಧ್ಯಾರಾಣಿಗೂ ಹಾಗೂ ಇತರೆ ಸಹ ಶಿಕ್ಷಕರ ನಡುವೆ ಹೊಂದಾಣಿಕೆ ಇರಲಿಲ್ಲ ಎಂದು ಮೈಸೂರು ಗ್ರಾಮಾಂತರ ವಲಯ ಬಿಇಒ ರಾಮಾರಾಧ್ಯ ಡಿಡಿಪಿಐಗೆ ವರದಿ ಸಲ್ಲಿಸಿದ್ದರು. ಈ ವರದಿಯನ್ನು ಪರಿಶೀಲಿಸಿದ ಡಿಡಿಪಿಐ ಬಿ.ಕೆ. ಬಸವರಾಜ್ ಅವರು, 4 ಮಂದಿ ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಆರೋಪ ಹೊತ್ತಿರುವ ಶಿಕ್ಷಕರು ಬುಧವಾರ ಸಹ ಶಾಲೆಗೆ ಹಾಜರಾಗಿಲ್ಲ. ಹೀಗಾಗಿ, ಬೇರೆ ಶಾಲೆಯ 4 ಮಂದಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ ಎಂದು ಬಿಇಒ ರಾಮಾರಾಧ್ಯ ತಿಳಿಸಿದ್ದಾರೆ.
ಏನಿದು ಪ್ರಕರಣ?: ಮೈಸೂರು ತಾಲೂಕು ಜಯಪುರ ಹೋಬಳಿ ಅರಸನಕೆರೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕಿ ಸಂಧ್ಯಾರಾಣಿ (30) ನಿದ್ರೆ ಮಾತ್ರೆ ಸೇವಿಸಿ ಶನಿವಾರ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಕ್ಕೆ ಮುಖ್ಯ ಶಿಕ್ಷಕ ಶಂಭುಲಿಂಗು, ಸಹ ಶಿಕ್ಷಕರಾದ ಅಶೋಕ, ನಳಿನಿ ನೀಲಾವತಿ, ಭವಾನಿ, ನಾಜೀಮಾ, ಎಸ್‌ಡಿಎಂಸಿ ಅಧ್ಯಕ್ಷರು ಮತ್ತು ಸದಸ್ಯರ ಮಾನಸಿಕ ಕಿರುಕುಳ ಕಾರಣ ಎಂದು ಸಂಧ್ಯಾರಾಣಿ ತಾಯಿ ಸುಶೀಲಮ್ಮ ಪೊಲೀಸರಿಗೆ ದೂರು ನೀಡಿದ್ದರು. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಜಯಪುರ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.