ಮೈಸೂರು

ಶಿಕ್ಷಣ ಇಲಾಖೆಯಲ್ಲಿ ದೌರ್ಜನ್ಯ ವಿರೋಧಿ ದೂರು ಸಮಿತಿ ರಚಿಸಿ

Published On :

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಮಹಿಳಾ ದೌರ್ಜನ್ಯ ವಿರೋಧಿ ದೂರು ಸಮಿತಿ ರಚಿಸಬೇಕು ಎಂದು ಪಿಯುಸಿಎಲ್ ಒತ್ತಾಯಿಸಿದೆ.
ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಶಿಕ್ಷಣ ಸಂಯೋಜಕಿ ರೂಪಾ ಮತ್ತು ಸಹ ಶಿಕ್ಷಕಿ ಸಂಧ್ಯಾರಾಣಿ ಅವರ ಮರಣದ ಟಿಪ್ಪಣಿಯಲ್ಲಿ ನಮೂದಿಸಿದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಮತ್ತು ಸುಪ್ರೀಂಕೋರ್ಟ್ ತೀರ್ಪಿನ ಅನ್ವಯ ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿಯೂ ಮಹಿಳಾ ದೌರ್ಜನ್ಯ ವಿರೋಧಿ ದೂರು ಸಮಿತಿ ರಚಿಸಬೇಕು ಎಂದು ಪಿಯುಸಿಎಲ್‌ನ ರಾಜ್ಯ ಕಾರ್ಯದರ್ಶಿ ಡಾ. ಲಕ್ಷ್ಮೀನಾರಾಯಣ, ಜಿಲ್ಲಾಧ್ಯಕ್ಷ ಟಿ.ಆರ್. ನಟರಾಜ್, ಕಾರ್ಯದರ್ಶಿ ರೂಪಾರಾವ್, ಮರಿದಂಡಯ್ಯ ಬುದ್ಧ ಒತ್ತಾಯಿಸಿದ್ದಾರೆ.
ಸರ್ಕಾರಿ ಇಲಾಖೆಯಲ್ಲಿ ಮಹಿಳೆಯರಿಗೆ ಅಭದ್ರತೆ ಕಾಡುತ್ತಿದೆ. ಅಲ್ಲದೆ ಕಾನೂನಿನ ಪ್ರಕಾರ ಮಹಿಳೆಯರ ಹಕ್ಕುಗಳ ರಕ್ಷಣೆಗೆ ವೇದಿಕೆ ಇಲ್ಲದಿರುವುದು ಸರಿಯಲ್ಲ. ಮಹಿಳೆಯರ ಆತ್ಮಹತ್ಯೆಗೆ ಪ್ರೇರೇಪಿಸಿದವರ ಮೇಲೆ ಪ್ರಬಲ ಕಾನೂನಿನ ಕ್ರಮ ಕೈಗೊಳ್ಳಲು ಸಾಧ್ಯವಿದೆ. ಆದರೆ ಈವರೆಗೆ ಪೊಲೀಸರು ಯಾರನ್ನೂ ಬಂಧಿಸದಿರುವುದು ಆತಂಕ ಮೂಡಿಸಿದೆ ಎಂದು ತಿಳಿಸಿದ್ದಾರೆ.
ಜಿಪಂ ಖಂಡನೆ: ಜಿಲ್ಲಾ ಪಂಚಾಯಿತಿ ಸದಸ್ಯ ಸಿ.ಜವರಯ್ಯ ಶಿಕ್ಷಕಿ ಸಂಧ್ಯಾರಾಣಿ ಆತ್ಮಹತ್ಯೆ ಘಟನೆಯನ್ನು ಖಂಡಿಸಿದ್ದಾರೆ. ಈ ಸುದ್ದಿಯಿಂದ ಬೇಸರವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಘಟನೆ ಮರುಕಳಿಸಬಾರದು. ಎಲ್ಲರೂ ಸಹಬಾಳ್ವೆಯಿಂದ ನಡೆದುಕೊಳ್ಳಬೇಕು ಎಂಬುದು ನನ್ನ ಬಯಕೆ. ಆದ್ದರಿಂದ ಜಯಪುರ ಜಿಪಂ ಕ್ಷೇತ್ರ ವ್ಯಾಪ್ತಿಯ ಯಾವುದೇ ಇಲಾಖೆ ಅಧಿಕಾರಿಗಳು ಮತ್ತು ಸಮುದಾಯದ ಜನತೆಯ ನಡುವೆ ಭಿನ್ನಾಭಿಪ್ರಾಯ ಬಂದರೆ ನನ್ನ ಮೊ. 9620504465ಗೆ ಸಂಪರ್ಕಿಸಿ ಮಾತುಕತೆ ನಡೆಸಬಹುದು. ನಿಮ್ಮ ಸಮಸ್ಯೆ ಪರಿಹರಿಸಲು ನಾನು ಸದಾ ಸಿದ್ಧನಾಗಿದ್ದೇನೆ ಎಂದು ಸಿ. ಜವರಯ್ಯ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.