ಇಂದು ಪದವಿ ಪ್ರದಾನ
ಮೈಸೂರು: ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪದವಿ ಪ್ರದಾನ ದಿನಾಚರಣೆಯು ಮಾ. 1ರ ಸಂಜೆ 4ಕ್ಕೆ ಕಾಲೇಜಿನ ರಾಜೇಂದ್ರ ಸಭಾಂಗಣದಲ್ಲಿ ನಡೆಯಲಿದೆ.
ಇನ್ಫೋಸಿಸ್ನ ಸಂಸ್ಥಾಪಕ ಅಧ್ಯಕ್ಷ ಎನ್.ಆರ್. ನಾರಾಯಣಮೂರ್ತಿ ಪದವೀಧರರನ್ನು ಉದ್ದೇಶಿಸಿ ಭಾಷಣ ಮಾಡುವರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಜೆಎಸ್ಎಸ್ ಮಹಾವಿದ್ಯಾಪೀಠದ ಕಾರ್ಯನಿರ್ವಾಹಕ ಕಾರ್ಯದರ್ಶಿ ಬಿ.ಎನ್. ಬೆಟ್ಕೆರೂರ್ ಅಧ್ಯಕ್ಷತೆ ವಹಿಸುವರು. ಜೆಎಸ್ಎಸ್ ವಿವಿ ಕುಲಪತಿ ಡಾ.ಬಿ. ಸುರೇಶ್ ಅತಿಥಿಗಳಾಗುವರು ಎಂದು ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ಡಾ.ಎಚ್. ಬಸವನಗೌಡಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಸಕ್ತ ಸಾಲಿನಲ್ಲಿ 148 ವಿದ್ಯಾರ್ಥಿಗಳು ಪದವಿ ಸ್ವೀಕರಿಸಲು ಅರ್ಹರಾಗಿದ್ದು, ಡಾ. ಶೇಸ್ತಾರಾ, ಡಾ. ನೇಹಾ ಮೋಹನ್ರಾವ್, ಡಾ. ಕೃತಿಕಾ ಸೇರಿದಂತೆ 7 ಮಂದಿಗೆ ಚಿನ್ನದ ಪದಕ, 10 ಮಂದಿಗೆ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಗುವುದು. ಕ್ರೀಡೆ ಮತ್ತಿತರ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಸಹ ಗೌರವಿಸಲಾಗುವುದು ಎಂದರು.
1984ರಲ್ಲಿ ಆರಂಭವಾದ ಜೆಎಸ್ಎಸ್ ವೈದ್ಯಕೀಯ ಕಾಲೇಜು 28 ವರ್ಷಗಳನ್ನು ಪೂರೈಸಿದೆ. ಎಂಬಿಬಿಎಸ್ ಪದವಿ, ಸ್ನಾತಕೋತ್ತರ ಪದವಿ, ಅರೆ ವೈದ್ಯಕೀಯ ಕೋರ್ಸುಗಳು ಮತ್ತು ಪಿಎಚ್ಡಿ ಅಧ್ಯಯನಕ್ಕಾಗಿ ಪ್ರತಿ ವರ್ಷ ಪ್ರವೇಶ ನೀಡಲಾಗುತ್ತಿದೆ. ಒಟ್ಟು 20 ವಿಭಾಗಗಳಲ್ಲಿ ಸ್ನಾತಕೋತ್ತರ ಹಾಗೂ ಉನ್ನತ ಸ್ನಾತಕೋತ್ತರ ಕೋರ್ಸುಗಳನ್ನು ಆರಂಭಿಸಲಾಗಿದೆ ಎಂದು ತಿಳಿಸಿದರು.
ಪ್ರಸ್ತುತ ಕಾಲೇಜಿನಲ್ಲಿ 430 ಬೋಧಕರು, 251 ಬೋಧಕೇತರ ಸಿಬ್ಬಂದಿ ವರ್ಗ ಕಾರ್ಯ ನಿರ್ವಹಿಸುತ್ತಿದ್ದು, 1356 ವಿದ್ಯಾರ್ಥಿಗಳು ವಿವಿಧ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಈವರೆಗೆ 3756 ವಿದ್ಯಾರ್ಥಿಗಳು ಪದವಿ ಹಾಗೂ 1004 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದರು. ಜೆಎಸ್ಎಸ್ ವಿವಿ ಶೈಕ್ಷಣಿಕ ನಿರ್ದೇಶಕ ಪ್ರೊ. ಕುಶಾಲಪ್ಪ, ಜೆಎಸ್ಎಸ್ ವೈದ್ಯಕೀಯ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಬಾಲರಾಜ್, ಆಡಳಿತಾಧಿಕಾರಿ ಸತೀಶ್ಚಂದ್ರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

