ಡೋರನಹಳ್ಳಿ ಸುತ್ತ 9 ಗ್ರಾಮಗಳಿಗೆ ಕಾವೇರಿ ನೀರು
ಕೆ.ಆರ್. ನಗರ: ತಾಲೂಕಿನ ಡೋರನಹಳ್ಳಿ ಗ್ರಾಪಂ ಸಮೀಪದ 9 ಗ್ರಾಮಗಳಿಗೆ ಕಾವೇರಿ ನದಿಯಿಂದ ಶಾಶ್ವತ ಕುಡಿಯುವ ನೀರು ಸರಬರಾಜು ಮಾಡುವ ಕಾಮಗಾರಿಗೆ ಮಾರ್ಚ್ ತಿಂಗಳ ಅಂತ್ಯದಲ್ಲಿ ಚಾಲನೆ ನೀಡುವುದಾಗಿ ಶಾಸಕ ಸಾ.ರಾ. ಮಹೇಶ್ ಹೇಳಿದರು.
ತಾಲೂಕಿನ ಅರಕೆರೆ ಗ್ರಾಮದಲ್ಲಿ ನಿರ್ಮಿಸಿರುವ ಸಮುದಾಯ ಭವನ ಉದ್ಘಾಟಿಸಿ ಮತ್ತು ರಸ್ತೆ ಕಾಂಕ್ರಿಟ್ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು, ಗ್ರಾಮದಲ್ಲಿ 2 ಲಕ್ಷ ವೆಚ್ಚದಲ್ಲಿ ಸಮುದಾಯ ಭವನ ನಿರ್ಮಿಸಲಾಗಿದೆ. ನಾಯಕ ಸಮಾಜದ ಸಮುದಾಯ ಭವನಕ್ಕೂ 4 ಲಕ್ಷ ಅನುದಾನ ನೀಡಲಾಗಿದೆ ಎಂದರು.
ಪ. ಪಂಗಡ ಸಮುದಾಯದ ಜನತೆ ಹೆಚ್ಚಿನ ಪ್ರಮಾಣದಲ್ಲಿ ವಾಸಿಸುವ ರಸ್ತೆ ಮತ್ತು ಚರಂಡಿಗಳನ್ನು 10 ಲಕ್ಷಗಳಲ್ಲಿ ಕಾಂಕ್ರಿಟೀಕರಣ ಮಾಡಲಾಗುವುದು ಎಂದು ತಿಳಿಸಿದರು.
ಡೋರನಹಳ್ಳಿ, ಅರಕೆರೆ, ಚೌಕಹಳ್ಳಿ, ಅರಕೆರೆ ಕೊಪ್ಪಲು, ಕುಂಬಾರಕೊಪ್ಪಲು ಸೇರಿದಂತೆ 9 ಗ್ರಾಮಗಳಿಗೆ 19 ಕೋಟಿ ವೆಚ್ಚದಲ್ಲಿ ಕಾವೇರಿ ಕುಡಿಯುವ ನೀರು ಸರಬರಾಜು ಮಾಡಲು ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಸ್ಥಳೀಯ ಸಂಸ್ಥೆ ಚುನಾವಣೆ ನಡೆದ ನಂತರ ಕಾಮಗಾರಿ ಆರಂಭಿಸುವುದಾಗಿ ಹೇಳಿದರು.
ತಾಪಂ ಅಧ್ಯಕ್ಷೆ ಕವಿತಾ ರವಿ, ಗ್ರಾಪಂ ಸದಸ್ಯರಾದ ಕೆ.ಎನ್. ರವಿ, ಸಿ.ಎ. ರಾಜು, ಶಿವಮ್ಮ, ಮುಖಂಡರಾದ ರಾಮ ನಾಯಕ, ದಾಸ ನಾಯಕ, ಕಗ್ಗುಂಡಿ ಕುಮಾರ್, ಮಹೇಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

