ಕೆ.ಆರ್. ನಗರ: ತಾಲೂಕಿನ ಮಿರ್ಲೆ ಗ್ರಾಮದಲ್ಲಿ ಜ.24ರ ಬೆಳಗ್ಗೆ 10ಕ್ಕೆ ಹಾಲು ಉತ್ಪಾದಕರ ಸಹಕಾರ ಸಂಘದ ಆವರಣದಲ್ಲಿ ನಡೆಯುವ ಬಿಎಂಸಿ ಕೇಂದ್ರ ಮತ್ತು ಬೆಳ್ಳಿ ಮಹೋತ್ಸವವನ್ನು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ಉದ್ಘಾಟಿಸುವರು. ಶಾಸಕ ಸಾ.ರಾ. ಮಹೇಶ್ ಅಧ್ಯಕ್ಷತೆ ವಹಿಸುವರು. ಮೈಮುಲ್ ಅಧ್ಯಕ್ಷ ಮಹದೇವಪ್ಪ, ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್, ಜಿಪಂ ಸದಸ್ಯೆ ಕಲ್ಪನಾ ಧನಂಜಯ, ಮೈಮುಲ್ ಮಾಜಿ ಅಧ್ಯಕ್ಷ ಕೆ. ಉಮಾಶಂಕರ್, ನಿರ್ದೇಶಕರಾದ ವಿಜಯಲಕ್ಷ್ಮಿ, ಕೆ. ಈರೇಗೌಡ, ಟಿ.ಎ. ರಾಜೇಗೌಡ, ಆರ್. ಪ್ರಭಾಕರ್ ಕಾರ್ಯನಿರ್ವಾಹಕ ನಿರ್ದೇಶಕ ಡಾ. ಸುರೇಶ್ಬಾಬು ಭಾಗವಹಿಸುವರು.
ಕ್ರಿಕೆಟ್ ಪಂದ್ಯಾವಳಿ
ರಾವಂದೂರು: ಇಲ್ಲಿನ ಬಸವೇಶ್ವರ ಕ್ರಿಕೆಟ್ ಕ್ಲಬ್ನ 8ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಜಿಲ್ಲಾ ಮಟ್ಟದ ಟೆನ್ನಿಸ್ಬಾಲ್ ಕ್ರಿಕೆಟ್ ವಿಷ್ಣು ಗೋಲ್ಡ್ಕಪ್ ಪಂದ್ಯಾವಳಿಯನ್ನು ಜ.25 ರಿಂದ 27 ರವರೆಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಏರ್ಪಡಿಸಿದೆ ಎಂದು ಕ್ಲಬ್ ಅಧ್ಯಕ್ಷ ಲೋಕೇಶ್ ಹೇಳಿದರು. ಹೆಚ್ಚಿನ ಮಾಹಿತಿಗಾಗಿ 9972727959, 9945743275 ಸಂಪರ್ಕಿಸಿರಿ.