ಮೈಸೂರು: 79ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಆಯ್ಕೆಯಾಗಿರುವ ಸಾಹಿತಿ ಕೋ. ಚೆನ್ನಬಸಪ್ಪ ಅವರಿಗೆ ಕರ್ನಾಟಕ ಕಾವಲುಪಡೆ ವತಿಯಿಂದ ಜ.25 ರಂದು ಬೆಳಗ್ಗೆ 11ಕ್ಕೆ ಕಲಾಮಂದಿರದ ಮನೆಯಂಗಳದಲ್ಲಿ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು, ಸಾಹಿತಿ ಜರಗನಹಳ್ಳಿ ಶಿವಶಂಕರ್ ಉದ್ಘಾಟಿಸುವರು. ಕಾವಲುಪಡೆಯ ರಾಜ್ಯಾಧ್ಯಕ್ಷ ಎಂ.ಮೋಹನ್ಕುಮಾರ್ಗೌಡ ಅಧ್ಯಕ್ಷತೆ ವಹಿಸುವರು. ಸಾಹಿತಿ ಡಾ.ಸಿಪಿಕೆ, ಡಾ.ಅರವಿಂದ ಮಾಲಗತ್ತಿ, ಟಿ.ಸತೀಶ್ ಜವರೇಗೌಡ, ಆರ್. ಹೊಯ್ಸಳ ಭಾಗವಹಿಸುವರು. ಕನ್ನಡ ಸಾಹಿತ್ಯ ಪರಿಷತ್ತು, ಜೆಎಸ್ ಮಹಾವಿದ್ಯಾಪೀಠ, ಸಂವಹನ ಪ್ರಕಾಶನದ ಸಂಯುಕ್ತಾಶ್ರಯದಲ್ಲಿ ಜ. 25ರ ಸಂಜೆ 5.30ಕ್ಕೆ ಸರಸ್ವತಿಪುರಂನಲ್ಲಿರುವ ಜೆಎಸ್ಎಸ್ ಮಹಿಳಾ ಕಾಲೇಜು ಸಭಾಂಗಣದಲ್ಲಿ ಕೋ. ಚೆನ್ನಬಸಪ್ಪ ಅವರಿಗೆ ಅಭಿನಂದನಾ ಸಮಾರಂಭ ಏರ್ಪಡಿಸಲಾಗಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಡಾ.ಸಿಪಿಕೆ ಅಧ್ಯಕ್ಷತೆ ವಹಿಸಲಿದ್ದು, ಡಾ.ಕೆ. ಚಿದಾನಂದಗೌಡ ಭಾಗವಹಿಸುವರು.