ರಿಯಾಯ್ತಿಯಲ್ಲಿ ಯಂತ್ರೋಪಕರಣ ಕೊಡಿಸಲು ಮನವಿ

Updated on: 

ರಾವಂದೂರು: ಪಿರಿಯಾಪಟ್ಟಣ ತಾಲೂಕಿನ ಪ್ರಮುಖ ವಾಣಿಜ್ಯ ಬೆಳೆಯಾದ ತಂಬಾಕು ಬೆಳೆಗೆ ರಿಯಾಯಿತಿ ದರದಲ್ಲಿ ಯಂತ್ರೋಪಕರಣಗಳನ್ನು ಕೊಡಿಸುವಂತೆ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿರುವುದಾಗಿ ತಂಬಾಕು ಬೆಳೆಗಾರರ ಸಂಘದ ಸದಸ್ಯ ಆರ್.ಟಿ. ಸತೀಶ್ ಹೇಳಿದರು. ಈ ಬಾರಿ ಬಜೆಟ್‌ನಲ್ಲಿ ತಂಬಾಕು ಬೆಳೆಗಾರರಿಗೆ ಅನುಕೂಲವಾಗುವಂತೆ ಕೃಷಿ ಇಲಾಖೆಯ ವತಿಯಿಂದ ರಿಯಾಯಿತಿ ದರದಲ್ಲಿ ಯಂತ್ರೋಪಕರಣಗಳು ಮತ್ತು ನಮ್ಮಲ್ಲಿ ಹೆಚ್ಚು ಪಂಪ್‌ಸೆಟ್‌ಗಳು ಇರುವುದರಿಂದ, ಜನರೇಟರ್‌ಗಳನ್ನು ರಿಯಾಯಿತಿ ದರದಲ್ಲಿ ರೈತರಿಗೆ ಅನುಕೂಲವಾಗುವಂತೆ ಪ್ರಾತಿನಿಧ್ಯ ನೀಡಬೇಕೆಂದು ಅವರು ಆಗ್ರಹಿಸಿದರು. ತಂಬಾಕು ಬೆಳೆಗಾರರ ಸಂಘದ ಅಧ್ಯಕ್ಷ ಬಿ.ವಿ. ಜವರೇಗೌಡ, ವೈ.ಟಿ. ಮಹೇಶ್, ಅನಿತ್ ಇದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com