ಎಳನೀರು ಖರೀದಿ ಕೇಂದ್ರ ಉದ್ಘಾಟನೆ
ಕೆ.ಆರ್.ಪೇಟೆ: ತಾಲೂಕಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಮಾರುಕಟ್ಟೆ ಆವರಣದಲ್ಲಿ ತೆರೆಯಲಾಗಿರುವ ಎಳನೀರು ಖರೀದಿ ಕೇಂದ್ರವನ್ನು ಎಪಿಎಂಸಿ ಅಧ್ಯಕ್ಷ ರಾಮೇಗೌಡ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಮದ್ದೂರಿನಲ್ಲಿರುವ ಎಳನೀರು ಮಾರುಕಟ್ಟೆಗೆ ತಾಲೂಕಿನಿಂದ ಅಪಾರ ಪ್ರಮಾಣದ ಎಳನೀರು ಹೋಗುತ್ತಿತ್ತು. ಇದರಿಂದ ದಲ್ಲಾಳಿಗಳಿಗೆ ಹೆಚ್ಚು ಲಾಭವಾಗುತ್ತಿತ್ತೆ ವಿನಃ ಇಲ್ಲಿನ ರೈತರಿಗೆ ಯಾವುದೇ ಲಾಭವಾಗುತ್ತಿರಲಿಲ್ಲ ಎಂದರು.
ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಇದನ್ನು ಮನಗಂಡು ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಎಳನೀರು ಖರೀದಿ ಕೆಂದ್ರವನ್ನು ತೆರೆಯಲಾಗಿದೆ. ಪ್ರತಿದಿನ ಎಳನೀರು ಮಾರುಕಟ್ಟೆ ಖರೀದಿ ಕೇಂದ್ರವು ನಡೆಯುವಂತೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ರೈತರ ಎಳನೀರು ಕೊಂಡುಕೊಳ್ಳಲು ಮಹಾರಾಷ್ಟ್ರ, ರಾಜಸ್ಥಾನ ಮತ್ತು ಬೆಂಗಳೂರಿನಿಂದ ವರ್ತಕರು ಬರುವಂತೆ ಅವರೊಂದಿಗೆ ಚರ್ಚಿಸಿ ಮಾರುಕಟ್ಟೆ ಪ್ರಾರಂಭಿಸಲಾಗಿದೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಲಿದೆ. ನಿತ್ಯ ತಾಲೂಕಿನ ರೈತರು ಎಳೆನೀರು ತಂದು ನೇರವಾಗಿ ಮಾರಾಟ ಮಾಡಬಹುದಾಗಿದೆ. ಇದರಿಂದ ರೈತರಿಗೆ ಹೆಚ್ಚಿನ ಲಾಭವು ಸಿಗಲಿದೆ ಎಂದರು.
ಮಾರುಕಟ್ಟೆಯಲ್ಲಿ ತೂಕದ ಯಂತ್ರ ನಿರ್ಮಿಸಲಾಗುತ್ತಿದೆ. ಪ್ರತ್ಯೇಕ ಯಾರ್ಡ್ಗಳನ್ನು ತೆರೆಯಲಾಗುತ್ತಿದೆ. ಮೂಲ ಸೌಲಭ್ಯ ನೀಡಲು ತಾಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯು ಸಿದ್ಧವಿದೆ. ರೈತರು ಇದರ ಸದುಪಯೋಗ ಪಡೆಯುವಂತೆ ರಾಮೇಗೌಡ ರೈತರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಎಪಿಎಂಸಿ ನಿರ್ದೇಶಕ ಕೆ.ಕೆ. ವೇಣುಗೋಪಾಲ್, ವಿ.ಸಿ. ಚೆಲುವೇಗೌಡ, ಶಂಕರೇಗೌಡ, ಶಂಕರ್ ನಾಯಕ್, ಮಾರುಕಟ್ಟೆ ಸಹಾಯಕ ರಾಜೇಗೌಡ ಉಪಸ್ಥಿತರಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

