ಬಿಜೆಪಿ ಸಂಘಟನೆಗೆ ಮುಖಂಡರಿಬ್ಬರ ನೇಮಕ: ಸನ್ಮಾನ
ಟಿ.ನರಸೀಪುರ: ಜಿಲ್ಲೆ ಮತ್ತು ತಾಲೂಕಿನಲ್ಲಿ ಬಿಜೆಪಿ ಸಂಘಟನೆಗಾಗಿ ಇಬ್ಬರನ್ನು ನೇಮಕ ಮಾಡಲಾಗಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ, ಬಿಜೆಪಿ ಹಿರಿಯ ಮುಖಂಡ ಸಿ.ರಮೇಶ್ ಹೇಳಿದರು.
ಇಲ್ಲಿನ ಬಾಬುಜಗಜೀವನರಾಂ ಸಮುದಾಯ ಭವನದಲ್ಲಿ ಶುಕ್ರವಾರ ಜಿಲ್ಲಾ ಬಿಜೆಪಿ ನೂತನ ಉಪಾಧ್ಯಕ್ಷ ಜಿ. ನಟರಾಜು ಹಾಗೂ ಬಿಜೆಪಿ ಎಸ್ಸಿ ಮೋರ್ಚಾದ ನೂತನ ಜಿಲ್ಲಾಧ್ಯಕ್ಷ ಸಿದ್ದರಾಜು ಅವರನ್ನು ಸನ್ಮಾನಿಸಿ ಮಾತನಾಡಿದ ಅವರು, ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ಸಮೀಪಿಸುತ್ತಿದೆ. ಈ ಹಿನ್ನೆಲೆ ಸಕ್ರಿಯ ರಾಜಕಾರಣದಲ್ಲಿ ಹಿರಿಯರಾಗಿರುವ ನಟರಾಜು ಮತ್ತು ಸಿದ್ದರಾಜು ಇಬ್ಬರು ಪಕ್ಷದ ಸಂಘಟನೆಯನ್ನು ಸಮರ್ಥವಾಗಿ ನಿರ್ವಹಿಸುವರು ಎಂದು ತಿಳಿಸಿದರು. ಜಿಪಂ ಮಾಜಿ ಸದಸ್ಯ ಪುಟ್ಟಬಸವಯ್ಯ ಮಾತನಾಡಿದರು. ತಾಲೂಕು ಅಂಬೇಡ್ಕರ್ ಅಭಿವೃದ್ಧಿ ಸಂಘದ ಅಧ್ಯಕ್ಷ ಮಹದೇವಯ್ಯ, ಬಿಜೆಪಿ ಕ್ಷೇತ್ರಾಧ್ಯಕ್ಷ ಟಿ.ಎಂ. ರಂಗಸ್ವಾಮಿ, ಯುವ ಮೋರ್ಚಾ ಅಧ್ಯಕ್ಷ ಎನ್.ಎಂ. ರಾಮಚಂದ್ರ, ಟೌನ್ ಅಧ್ಯಕ್ಷ ಕೆ.ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಬಸವರಾಜು, ಎಸ್ಸಿ ಮೋರ್ಚಾ ಅಧ್ಯಕ್ಷ ಆರ್. ಅರ್ಜುನ್, ಸಿಂಡಿಕೇಟ್ ಸದಸ್ಯ ದಾಸಯ್ಯ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

