ಮೈಸೂರು

'ಮಾದಕ ವಸ್ತುಗಳ ದಾಸರಾಗಬೇಡಿ'

Published On :

ಮೈಸೂರು:  ಇಂದಿನ ಯುವ ಜನಾಂಗ ಮಾದಕ ವಸ್ತುಗಳಿಗೆ ದಾಸರಾಗಿ, ತಮ್ಮ ಜೀವನವನ್ನೇ ಬಲಿ ಕೊಡುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಏಡ್ಸ್ ನಿಯಂತ್ರಣ ಮತ್ತು ನಿರೋಧಕ ಘಟಕದ ಜಿಲ್ಲಾ ನಿಯಂತ್ರಣಾಧಿಕಾರಿ ಡಾ. ರಘುಕುಮಾರ್ ವಿಷಾದಿಸಿದರು. ಶಾರದಾ ವಿಲಾಸ ಪದವಿಪೂರ್ವ ಕಾಲೇಜಿನಲ್ಲಿ ರೆಡ್ ರಿಬ್ಬನ್ ಕ್ಲಬ್ ವತಿಯಿಂದ ನಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯಅತಿಥಿಗಳಾಗಿ ಅವರು ಮಾತನಾಡಿದರು.
ಸ್ವಯಂ ಪ್ರೇರಿತರಾಗಿ ಅಸುರಕ್ಷಿತ ಲೈಂಗಿಕ ಸಂಪರ್ಕದಲ್ಲಿ ತೊಡಗಿ ಸಾಮಾಜಿಕ ಅರಿವನ್ನು ಮರೆಯುತ್ತರುವುದರಿಂದ ಏಡ್ಸ್ ರೋಗಕ್ಕೆ ಬಲಿಯಾಗುತ್ತಿದ್ದಾರೆ. ಇಂದಿನ ಶಾಲಾ-ಕಾಲೇಜಿನ ಪಠ್ಯಕ್ರಮಗಳಲ್ಲಿ ಕಡ್ಡಾಯವಾಗಿ ಲೈಂಗಿಕ ಶಿಕ್ಷಣದ ಬಗ್ಗೆ ಅರಿವನ್ನು ಮೂಡಿಸುವ ಹಾಗೂ ಸಾಮಾಜಿಕ ಜವಾಬ್ದಾರಿ ಹೊಂದುವ ಹತ್ತು ಹಲವು ವಿಚಾರಗಳನ್ನು ಪಠ್ಯಪುಸ್ತಕಗಳಲ್ಲಿ ಅಳವಡಿಸಬೇಕೆಂದು ಅವರು ಸಲಹೆ ನೀಡಿದರು.
ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಏರ್ಪಡಿಸಿದ್ದ ಎಚ್ಐವಿ ಏಡ್ಸ್ ರೋಗವನ್ನು ತಡೆಗಟ್ಟುವಲ್ಲಿ ಯುವ ಜನಾಂಗದ ಪಾತ್ರ ವಿಷಯವಾಗಿ ನಡೆದ ಪ್ರಬಂಧ ಸ್ಪರ್ಧೆ, ರಸಪ್ರಶ್ನೆ, ಉಪನ್ಯಾಸ ಮಾಲೆಯ ಕಾರ್ಯಕ್ರಮದಲ್ಲಿ ವಿಜೇತರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಪ್ರಾಂಶುಪಾಲ ಸಿ.ಕೆ. ಅಶೋಕ್ಕುಮಾರ್ ಅಧ್ಯಕ್ಷತೆ ವಹಿಸಿ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು. ಉಪನ್ಯಾಸಕರಾದ ರಾಜೇಂದ್ರ ಪ್ರಸಾದ್ ಹೊನ್ನಲಗೆರೆ ಮತ್ತು ಸುನಿಲ್ ಕುಮತಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.