ಮೈಸೂರು

ಯೋಜನೆ ಬಳಸಿ ಅಂತರ್ಜಲ ವೃದ್ಧಿಸಿ

Published On :

ಪಿರಿಯಾಪಟ್ಟಣ: ಜಲಾನಯನ ಇಲಾಖೆಯ ಯೋಜನೆಗಳನ್ನು ಸದುಪಯೋಗಪಡಿಸಿಕೊಂಡ ಅಂತರ್ಜಲ ಹೆಚ್ಚಿಸಬೇಕಿದೆ ಎಂದು ಶಾಸಕ ಕೆ.ವೆಂಕಟೇಶ್ ಹೇಳಿದರು.
ತಾಲೂಕಿನ ಬೆಟ್ಟದತುಂಗ ಗ್ರಾಮದಲ್ಲಿ ಏರ್ಪಡಿಸಿದ್ದ ಜಲಾನಯನ ಮೇಳದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಇಲಾಖೆಗಳಲ್ಲಿ ಹಣ ಪೋಲಾಗುವುದು ಸಾಮಾನ್ಯ. ಆದರೆ ಜಲಾನಯನ ಯೋಜನೆಗಳ ಬಗ್ಗೆ ಅಧಿಕಾರಿಗಳಲ್ಲಿ ಅಸಡ್ಡೆ ಇದ್ದು, ಇದು ದೂರವಾಗಬೇಕು.
ನಿಜವಾಗಿಯೂ ಜನಸಾಮಾನ್ಯರ ಮುಂದಿನ ಬದುಕಿಗೆ ಜಲಸಮೃದ್ಧಿ ಅಗತ್ಯ ಎಂಬ ದೂರ ದೃಷ್ಟಿಯುಳ್ಳ ಪ್ರತಿಯೊಬ್ಬ ರಾಜಕಾರಣಿಯೂ ಇದಕ್ಕೆ ಒತ್ತು ನೀಡಬೇಕು ಎಂದರು.
ಪ್ರತಿ ಗ್ರಾಪಂ ಹಂತದಲ್ಲಿಯೂ ಕೆರೆಗಳ ಹೂಳೆತ್ತುವ, ಇಂಗು ಗುಂಡಿ ನಿರ್ಮಿಸುವ, ಬದುಗಳನ್ನು ನಿರ್ಮಿಸುವ ಕೆಲಸ ವ್ಯಾಪಕವಾಗಿ ನಡೆಯಬೇಕು. ಆಗ ಮಾತ್ರ ನಾವು ಜಲಮೂಲಗಳನ್ನು ಉಳಿಸಿಕೊಳ್ಳಲು ಸಾಧ್ಯ ಎಂದು ಅವರು ಹೇಳಿದರು.
ಜಿಪಂ ಸದಸ್ಯ ಎಸ್.ಎ. ಶಿವಣ್ಣ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ತಾಲೂಕಿನಲ್ಲಿ ಅಂತರ್ಜಲ ಕುಸಿಯುತ್ತಿರುವುದು ಆತಂಕದ ಸಂಗತಿಯಾಗಿದೆ. ಜಲಾನಯನ ಯೋಜನೆಯ ಸಮಗ್ರ ಅಭಿವೃದ್ಧಿಯಿಂದ ಅಂತರ್ಜಲ ಮಟ್ಟವನ್ನು ಹೆಚ್ಚಿಸಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದರು.
ಜಿಲ್ಲಾ ಜಲಾನಯನ ಅಧಿಕಾರಿ ಎಚ್.ಆರ್. ತಿಪ್ಪೇಶ್ ಯೋಜನೆ ಬಗ್ಗೆ ವಿವರ ನೀಡಿದರು. ಜಿಪಂ ಸದಸ್ಯೆ ಮಂಜುಳರಾಜ್, ತಾಪಂ ಸದಸ್ಯೆ ಬಿ.ವಿ. ಅನಿತಾ ಮಾತನಾಡಿದರು.ತಾಪಂ ಸದಸ್ಯರಾದ ಸರಸ್ವತಿ, ಆರ್.ಸಿ. ಚಂದ್ರು, ಸಾಕಮ್ಮ, ಎಪಿಎಂಸಿ ನಿರ್ದೇಶಕ ಹೊಲದಪ್ಪ, ಇಒ ಆರ್. ಕಾಂತರಾಜು, ಜಲಾನಯನ ಸಹಾಯಕ ನಿರ್ದೇಶಕ ಕೆ.ಎಂ. ಶೇಷಣ್ಣ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಟಿ.ವಿ. ಭಾನುಪ್ರಕಾಶ್, ಪಶುಪಾಲನೆ ಇಲಾಖೆ ಸಹಾಯಕ ನಿರ್ದೇಶಕ ಡಾ. ಸದಾನಂದಪ್ಪ, ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕ ಹುಂಬಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.