ಮೈಸೂರು

ಜೀತ ವಿಮುಕ್ತರಿಗೆ ಶೀಘ್ರ ಪರಿಹಾರಕ್ಕೆ ಆಗ್ರಹಿಸಿ ಧರಣಿ

Published On :

ಮೈಸೂರು: ಜೀತ ವಿಮುಕ್ತರಿಗೆ ಶೀಘ್ರ ಪರಿಹಾರ, ಪುನರ್ವಸತಿ ಕಲ್ಪಿಸಲು ಹಾಗೂ ಜಿಲ್ಲೆಯಲ್ಲಿರುವ ಜೀತದಾಳುಗಳನ್ನು ಗುರುತಿಸಲು ಆಗ್ರಹಿಸಿ ಜೀವಿಕ (ಜೀತ ವಿಮುಕ್ತಿ ಕರ್ನಾಟಕ)- ಕರ್ನಾಟಕ ಜೀತದಾಳು ಮತ್ತು ಕೃಷಿ ಕಾರ್ಮಿಕರ ಒಕ್ಕೂಟದವರು ಸೋಮವಾರ ಪ್ರತಿಭಟಿಸಿದರು.
ಜಿಲ್ಲೆಯ ಎಚ್.ಡಿ. ಕೋಟೆ, ಪಿರಿಯಾಪಟ್ಟಣ, ಹುಣಸೂರು, ಮೈಸೂರು, ನಂಜನಗೂಡು ತಾಲೂಕಿನ ಜೀತದಾಳುಗಳು, ಕೃಷಿ ಕಾರ್ಮಿಕರು, ಮಹಿಳೆಯರು ನೂರಾರು ಮಂದಿ ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿ, ಪ್ರಭಾರ ಜಿಲ್ಲಾಧಿಕಾರಿ ಡಾ. ಅಜಯ್ ನಾಗಭೂಷಣ್ ಅವರಿಗೆ ಮನವಿ ಸಲ್ಲಿಸಿದರು.
2011-12ನೇ ಸಾಲಿನಲ್ಲಿ ಸರ್ಕಾರದಿಂದ ಬಿಡುಗಡೆಗೊಳಿಸಿರುವ 253 ಮಂದಿ ಜೀತದಾಳುಗಳಿಗೆ ಕೂಡಲೇ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸಬೇಕು. 2012-13ನೇ ಸಾಲಿನಲ್ಲಿ ಎಚ್.ಡಿ. ಕೋಟೆಯಲ್ಲಿ ಗುರುತಿಸಿರುವ 400ಕ್ಕೂ ಹೆಚ್ಚಿನ ಜೀತದಾಳುಗಳಿಗೆ ಕೂಡಲೇ ಬಿಡುಗಡೆ ಪತ್ರ ನೀಡಬೇಕು ಎಂದು ಒತ್ತಾಯಿಸಿದರು.
ಸೂಕ್ತ ತನಿಖೆ ನಡೆಸಿ: ಜಿಲ್ಲೆಯಾದ್ಯಂತ ಜೀತದಾಳುಗಳ ಸೂಕ್ತ ತನಿಖೆ ನಡೆಸಬೇಕು. ಜಿಲ್ಲಾ ಮತ್ತು ಉಪ ವಿಭಾಗದ ಮಟ್ಟದ ಜಾಗೃತಿ ಸಮಿತಿ ಸಭೆ ತಪ್ಪದೇ 2 ತಿಂಗಳಿಗೊಮ್ಮೆ ನಿರಂತರವಾಗಿ ನಡೆಸಬೇಕು. ಜೀತದಾಳುಗಳ ಮಾಸಾಶನ 400 ಅನ್ನು ಕೂಡಲೇ ಬಿಡುಗಡೆಗೊಳಿಸಬೇಕು. ಮಾಸಾಶನ 400 ರಿಂದ 1000ಕ್ಕೆ ಹೆಚ್ಚಿಸಬೇಕು. ಜೀತ ಪರಿಹಾರ 20 ಸಾವಿರದಿಂದ 1 ಲಕ್ಷದವರೆಗೆ ಹೆಚ್ಚಿಸಬೇಕು ಎಂದು ಅವರು ಆಗ್ರಹಿಸಿದರು.
ಜೀತದಾಳುಗಳನ್ನು ಗುರುತಿಸಲು ವಿಳಂಬ ಮಾಡುತ್ತಿರುವ ಅಧಿಕಾರಿಗಳ ಮೇಲೆ ಎಸ್ಸಿ, ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು. ಜೀತವಿಮುಕ್ತರು ವ್ಯವಸಾಯ ಮಾಡಿಕೊಂಡು ಬರುತ್ತಿರುವ ಹಂಪಾಪುರ ಹೋಬಳಿ ಕೋಹಳ ಸರ್ವೆ ನಂ.23, 45, 46, 48 ಭೂಮಿಗಳಿಗೆ ಕೂಡಲೇ ಹಕ್ಕು ಪತ್ರ ನೀಡಬೇಕು ಎಂದರು. ಒಕ್ಕೂಟದ ಜಿಲ್ಲಾ ಸಂಚಾಲಕ ಬಸವರಾಜ್, ತಾಲೂಕು ಸಂಚಾಲಕ ಚಂದ್ರಶೇಖರಮೂರ್ತಿ, ಮಹಿಳಾ ಸಂಚಾಲಕಿ ನಾಗಮ್ಮ, ಮುಖಂಡರಾದ ಮಹದೇವ, ಮಲ್ಲಿಗೌಡ, ಶಿವಣ್ಣ, ಜಯಮ್ಮ ಮೊದಲಾದವರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.