ಮೈಸೂರು

ಬಿಎಸ್‌ಆರ್ 'ಕೆ' ಸೇರ್ಪಡೆ

Published On :

ಪಿರಿಯಾಪಟ್ಟಣ:  ಡಾ. ಬಿ.ಆರ್. ಅಂಬೇಡ್ಕರ್ ಅವರನ್ನು ಪರೋಕ್ಷವಾಗಿ ಶೋಷಣೆ ಮಾಡಿದ ಕಾಂಗ್ರೆಸ್ ಪಕ್ಷ, ಇಂದು ಹಿಂದುಳಿದ ವರ್ಗಗಳನ್ನು ವ್ಯವಸ್ಥಿತವಾಗಿ ಶೋಷಿಸುತ್ತಿದೆ ಎಂದು ಬಿಎಸ್‌ಆರ್ ಕಾಂಗ್ರೆಸ್ ಪಕ್ಷದ ತಾಲೂಕು ಮುಖಂಡ ಟಿ.ಡಿ. ಗಣೇಶ್ ಆರೋಪಿಸಿದರು. ತಾಲೂಕಿನ ಆಲನಹಳ್ಳಿ ಗ್ರಾಮದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ಉದ್ಘಾಟಿಸಿ ವಿವಿಧ ಪಕ್ಷಗಳ ಕಾರ್ಯಕರ್ತರನ್ನು ಪಕ್ಷಕ್ಕೆ ಬರಮಾಡಿಕೊಂಡು ಅವರು ಮಾತನಾಡಿದರು.
ತಾವು ಎರಡು ಬಾರಿ ಚನಾವಣೆಯಲ್ಲಿ ಸೋತಿದ್ದು, ಅಂದಿನ ಪರಿಸ್ಥಿತಿಯಲ್ಲಿ ಅಲ್ಪಸಂಖ್ಯಾತರ ಹಾಗೂ ಮುಸಲ್ಮಾನರ ಮತಗಳು ತಮಗೆ ಕಾರಣಾಂತರಗಳಿಂದ ಸಿಗಲಿಲ್ಲ. ಆದರೆ, ಪ್ರಸ್ತುತ ತಾಲೂಕಿನಲ್ಲಿ ಮಾತ್ರವಲ್ಲದೆ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದ್ದು, ಬಿಎಸ್‌ಆರ್ ಕಾಂಗ್ರೆಸ್‌ನತ್ತ ಮತದಾರರು ಮುಖ ಮಾಡಿದ್ದಾರೆ. ಈ ಬಾರಿ ಬಿಎಸ್‌ಆರ್ ಕಾಂಗ್ರೆಸ್ ಬಾವುಟ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜಿಪಂ ಮಾಜಿ ಸದಸ್ಯ ರೆಹಮಾನ್, ಬಾಬು, ಮಂಡಲ ಪಂಚಾಯಿತಿ ಮಾಜಿ ಪ್ರಧಾನ ಆರ್.ಎಲ್. ಮಣಿ, ಮಜರ್‌ಪಾಷಾ, ಚೆಲುವನಾಯಕ ಮಾತನಾಡಿದರು. ವಿವಿಧ ಪಕ್ಷಗಳ ಹಲವಾರು ಕಾರ್ಯಕರ್ತರು ಬಿಎಸ್‌ಆರ್ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. ಅಪ್ಪಣ್ಣನಾಯಕ, ಪಿ.ಟಿ. ರಮೇಶ್ , ಉತ್ತಯ್ಯ, ಮಹದೇವ್, ವಿಶ್ವೇಶ್ವರಯ್ಯ, ಸೋಮಣ್ಣ, ಸೋಮಶೇಖರಯ್ಯ, ಮಹದೇವ್, ಶಿವಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.