ತಾ. ಸಾಹಿತ್ಯ ಸಮ್ಮೇಳನ ಅದ್ಧೂರಿ ಮೆರವಣಿಗೆ
ಕ.ಪ್ರ.ವಾರ್ತೆ , ಮೈಸೂರು , ಜು. 2
ಮೈಸೂರು ತಾಲೂಕು 3ನೇ ಕನ್ನಡ ಸಾಹಿತ್ಯ ಸಮ್ಮೇಳನದ ಹಿನ್ನೆಲೆಯಲ್ಲಿ ಮಂಗಳವಾರ ಇಲವಾಲದಲ್ಲಿ ಅದ್ಧೂರಿ ಮೆರವಣಿಗೆ ನಡೆಯಿತು. ಸಮ್ಮೇಳನದ ಅಧ್ಯಕ್ಷರನ್ನು ತೆರೆದ ವಾಹನದಲ್ಲಿ ಕರೆತರಲಾಯಿತು.
ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾ ತಂಡಗಳು, ಮಹಿಳಾ ಸ್ವ ಸಹಾಯ ಸಂಘದ ಪದಾಧಿಕಾರಿಗಳು ಮತ್ತು ಶಾಲಾ, ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಇಲವಾಲದ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಮೆರವಣಿಗೆಗೆ ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಚಾಲನೆ ನೀಡಿದರು. ಶಾಲಾ ಆವರಣದಿಂದ ಹೊರಟ ಮೆರವಣಿಗೆಯು ಗ್ರಾಮದ ಹಳೆ ಕೆನರಾ ಬ್ಯಾಂಕ್ ರಸ್ತೆ, ಮಾರಿಗುಡಿ ರಸ್ತೆ, ಹುಣಸೂರು ರಸ್ತೆ ಮೂಲಕ ಗ್ರಾಪಂ ಸಮುದಾಯ ಭವನ ಸೇರಿತು. ಮೆರವಣಿಗೆಯಲ್ಲಿ ವಿವಿಧ ಶಾಲಾ, ಕಾಲೇಜು ವಿದ್ಯಾರ್ಥಿಗಳು ಬಸವಣ್ಣ, ವಿವೇಕಾನಂದ, ಕುವೆಂಪು, ಬೇಂದ್ರೆ, ಕಿತ್ತೂರು ರಾಣಿ ಚೆನ್ನಮ್ಮ, ಕನಕದಾಸರು ಸೇರಿದಂತೆ ಹಲವರ ವೇಷ ಧರಿಸಿದ್ದರು.
ಅನೇಕ ಮಹಿಳಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಕಳಸ ಹೊತ್ತ ಮಹಿಳೆಯರು ಸಮ್ಮೇಳನದ ಸರ್ವಾಧ್ಯಕ್ಷ ಬಿ. ಶಾಮಸುಂದರ ಮತ್ತು ತಾಲೂಕು ಕಸಾಪ ಅಧ್ಯಕ್ಷ ಎಸ್. ಶಿವಮೂರ್ತಿ ಕಾನ್ಯ ಅವರಿಗೆ ಪೂರ್ಣ ಕುಂಭ ಸ್ವಾಗತ ನೀಡಿದರು. ಇಬ್ಬರನ್ನೂ ತೆರೆದ ವಾಹನದಲ್ಲಿ ಕರೆ ತರಲಾಯಿತು. ಶಾಸಕ ಹಾಗೂ ಸಾಹಿತ್ಯ ಸಮ್ಮೇಳನದ ಸ್ವಾಗತ ಸಮಿತಿ ಅಧ್ಯಕ್ಷರಾದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಧ್ವಜಾರೋಹಣ ನೆರವೇರಿಸಿದರು. ಇಲವಾಲ ಗ್ರಾಪಂ ಅಧ್ಯಕ್ಷ ಭೈರೇಗೌಡ ನಾಡಧ್ವಜಾರೋಹಣವನ್ನೂ, ತಾಲೂಕು ಕಸಾಪ ಅಧ್ಯಕ್ಷ ಶಿವಮೂರ್ತಿ ಕಾನ್ಯ ಅವರು ಪರಿಷತ್ತಿನ ಧ್ವಜಾರೋಹಣವನ್ನು ನೆರವೇರಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

