ಕಬಿನಿ ಜಲಾಶಯದ ಉದ್ಯಾನ ಅಭಿವೃದ್ಧಿ
ಕ.ಪ್ರ.ವಾರ್ತೆ , ಮೈಸೂರು , ಜು. 6
ಎಚ್.ಡಿ. ಕೋಟೆ ತಾಲೂಕಿನ ಕಬಿನಿ ಜಲಾಶಯದ ಸುತ್ತಮುತ್ತಲಿನ 240 ಎಕರೆಯನ್ನು ಉದ್ಯಾನವನವಾಗಿ ಅಭಿವೃದ್ಧಿಪಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಕಬಿನಿ ಜಲಾಶಯದ ಸುತ್ತಮುತ್ತಲಿನ ಜಾಗವನ್ನು ಕೆಆರ್ಎಸ್ನ ಬೃಂದಾವನ ಮಾದರಿಯಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳುತ್ತಾ ಬರಲಾಗಿದ್ದು, ಈಗ ಈ ಸಂಬಂಧ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಸೂಚಿಸಲಾಗಿದೆ ಎಂದರು. ಹಿಂದುಳಿದ ಎಚ್.ಡಿ. ಕೋಟೆ ತಾಲೂಕನ್ನು ದತ್ತು ಪಡೆಯುವುದಾಗಿ ಚುನಾವಣೆ ಸಂದರ್ಭದಲ್ಲಿ ಹೇಳಿದ್ದು ನಿಜ. ಹಾಗೆಂದು ಜೇಬಿನಲ್ಲಿ ಇಟ್ಟುಕೊಳ್ಳಲಾಗದು. ಬದಲಿಗೆ ಇತರೆ ಕ್ಷೇತ್ರಗಳಂತೆ ಈ ಕ್ಷೇತ್ರವನ್ನು ಅಭಿವೃದ್ಧಿಪಡಿಸಲಾಗುವುದು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

