ಮೈಸೂರು

ಮಹನೀಯರ ತತ್ವಾದರ್ಶ ಪಾಲಿಸಿ: ಶಾಸಕ ಸಾ.ರಾ. ಮಹೇಶ್

Published On :

ಕ.ಪ್ರ.ವಾರ್ತೆ ,  ಕೆ.ಆರ್. ನಗರ ,  ಜು. 6
ಮಹನೀಯರ ಜಯಂತಿಗಳು ಮತ್ತು ಪುಣ್ಯತಿಥಿಗಳನ್ನು ಕೇವಲ ಆಚರಣೆಗೆ ಸೀಮಿತಗೊಳಿಸದೆ, ಅವರ ತತ್ವ ಮತ್ತು ಆದರ್ಶಗಳನ್ನು ಪಾಲನೆ ಮಾಡುವುದರ ಮೂಲಕ ಗೌರವ ಸಲ್ಲಿಸಿ ಇತರರಿಗೆ ಮಾದರಿಯಾಗಬೇಕು ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.ಇಲ್ಲಿನ ಪುರಸಭೆಯ ಆವರಣದಲ್ಲಿ ನಡೆದ ಡಾ. ಬಾಬುಜಗಜೀವನ್‌ರಾಂ ಅವರ 27ನೇ ಪರಿನಿರ್ವಾಣ ದಿನದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಬಾಬೂಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು.
ತಾಪಂ ಮಾಜಿ ಉಪಾಧ್ಯಕ್ಷ ಕೆ.ಎಚ್. ಸ್ವಾಮಿ, ದಲಿತ ಮುಖಂಡ ಹನಸೋಗೆ ನಾಗರಾಜು, ಆದಿಜಾಂಬವ ಸಂಘದ ಅಧ್ಯಕ್ಷ ಲೋಕೇಶ್ ಮಾತನಾಡಿದರು. ಬಾಬುಜಿ ಗೌರವಾರ್ಥ ಒಂದು ನಿಮಿಷ ಮೌನ ಆಚರಿಸಲಾಯಿತು.
ತಹಸೀಲ್ದಾರ್ ವೀಣಾಕುಮಾರ್, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಸಾಧಿಕ್‌ಖಾನ್, ಮಾಜಿ ಅಧ್ಯಕ್ಷರಾದ ಹಾಡ್ಯ ಮಹದೇವಸ್ವಾಮಿ, ಮೇಲೂರುಕೃಷ್ಣೇಗೌಡ, ಡಾ. ಶಿವನಂಜಪ್ಪ, ಬಿಇಒ ಜವರೇಗೌಡ, ಸಿಡಿಪಿಒ ಸದಾಶಿವಪ್ಪ, ಮುಖ್ಯಾಧಿಕಾರಿ ನಾಗಶೆಟ್ಟಿ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಚಂದ್ರಕಾಂತ್, ತಾಲೂಕು ಆರೋಗ್ಯಾಧಿಕಾರಿ ಡಾ. ಶಿವಪ್ರಸಾದ್, ಸಮಾಜ ಕಲ್ಯಾಣಾಧಿಕಾರಿ ಭಾರತಿ, ರೇಷ್ಮೆ ಇಲಾಖೆ ವ್ಯವಸ್ಥಾಪಕ ವಸಂತಕುಮಾರ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.