ರೋಟರಿ ಪದಾಧಿಕಾರಿಗಳ ಪದಗ್ರಹಣ
ಕ.ಪ್ರ.ವಾರ್ತೆ , ಹುಣಸೂರು , ಜು. 6
ವಿಶ್ವದಲ್ಲಿ ವಿವಿಧ ರೀತಿಯ ಸಂಘಟನೆಗಳು ಜನರನ್ನು ವಿವಿಧ ರೀತಿಯಲ್ಲಿ ಬೇರ್ಪಡಿಸುವ ಕಾರ್ಯ ಮಾಡುತ್ತಿದ್ದರೆ, ರೋಟರಿ ಮಾತ್ರ ವಿವಿಧ ಭಾಷೆ, ಪ್ರದೇಶದ ಜನರನ್ನು ಒಂದುಗೂಡಿಸುವ ಕಾರ್ಯ ಮಾಡುತ್ತಿದೆ ಎಂದು ಪದಗ್ರಹಣ ಅಧಿಕಾರಿ ಸೂರ್ಯಪ್ರಕಾಶ್ ಭಟ್ ಹೇಳಿದರು.
ಇಲ್ಲಿನ ರೋಟರಿ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ 2013- 14ನೇ ಸಾಲಿಗಾಗಿ ರೋಟರಿ ಕ್ಲಬ್ ಪದಾಧಿಕಾರಿಗಳ ಪದಗ್ರಹಣ ನೇತೃತ್ವದಲ್ಲಿ ಹುಣಸೂರು ರೋಟರಿಯ ಅಧ್ಯಕ್ಷರಾಗಿ ರಾಜಶೇಖರ್ ಹಾಗೂ ಕಾರ್ಯದರ್ಶಿಯಾಗಿ ಜಿ.ಎಚ್. ಮಂಜುನಾಥ್ ಅವರಿಗೆ ಅಧಿಕಾರ ಹಸ್ತಾಂತರಿಸಿ ಅವರು ಮಾತನಾಡಿದರು.
ಸೇವೆಯ ಮೂಲಕ ಸಾಮಾಜಿಕ ಸುಧಾರಣೆಯೆ ರೋಟರಿಯ ಮುಖ್ಯ ಉದ್ದೇಶವಾಗಿದೆ ಹಾಗೂ ದೇಶವನ್ನು ಪೆಡಂಭೂತವಾಗಿ ಕಾಡುತ್ತಿರುವ ಭ್ರಷ್ಟಾಚಾರದ ವಿರುದ್ಧ ರೋಟರಿ ಸದಸ್ಯರು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯ ಮಾಡಬೇಕೆಂದು ಕರೆ ನೀಡಿದರು.
ವಲಯ- 6ರ ಅಸಿಸ್ಟೆಂಟ್ ಗವರ್ನರ್ ರವೀಂದ್ರ ರೈ ರೋಟರಿ ಕಾರ್ಯಕ್ರಮ ವಿವರಿಸಿದರು. ನೂತನ ಅಧ್ಯಕ್ಷ ರಾಜಶೇಖರ್ ರೋಟರಿ ಕ್ಲಬ್‌ನ ಈ ಸಾಲಿನ ಕಾರ್ಯಕ್ರಮಗಳ ಸಮರ್ಪಕ ಅನುಷ್ಠಾನಕ್ಕೆ ಎಲ್ಲ ಸದಸ್ಯರ ಸಹಕಾರ ಕೋರಿದರು.
ರೋಟರಿ ಕ್ಲಬ್ ವತಿಯಿಂದ ತಾಲೂಕಿನ ಮಧುಗಿರಿಕೊಪ್ಪಲು ಹಾಗೂ ವಡ್ಡಂಬಾಳು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗಾಗಿ ಉಚಿತವಾಗಿ ನೋಟ್‌ಬುಕ್ ವಿತರಿಸಲಾಯಿತು.
ನಿಕಟಪೂರ್ವ ಅಧ್ಯಕ್ಷ ಆರ್. ಆನಂದ್ ಮಾತನಾಡಿದರು. ಕಾರ್ಯದರ್ಶಿ ಹನಗೋಡು ನಟರಾಜ್ ಕಳೆದ ಸಾಲಿನಲ್ಲಿ ನಡೆದ ಕಾರ್ಯಕ್ರಮಗಳ ವರದಿ ನೀಡಿದರು. ವಲಯ ಸೇನಾನಿ ಎಚ್.ಎಸ್. ಸಚ್ಚಿತ್ ಸೇರಿದಂತೆ ಎಲ್ಲ ರೋಟರಿ ಸದಸ್ಯರು ಹಾಗೂ ಅವರ ಕುಟುಂಬದವರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

