ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಲು ಸೂಚನೆ
ಕ.ಪ್ರ.ವಾರ್ತೆ , ಮೈಸೂರು , ಜು. 7
ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕರ್ನಾಟಕ ಪೊಲೀಸ್ ಮಹಾ ನಿರ್ದೇಶಕ ಲಾಲ್ ರುಖುಮಾ ಪಚಾವೋ ಅವರು ಭಾನುವಾರ ನಗರ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದರು.
ನಗರದಲ್ಲಿ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ ಹಾಗೂ ಅಪರಾಧ ನಿಯಂತ್ರಣಕ್ಕೆ ಒತ್ತು ನೀಡುವಂತೆ ಸ್ಥಳೀಯ ಪೊಲೀಸ್ ಅಧಿಕಾರಿಗಳಿಗೆ ಪಚಾವೋ ಸೂಚಿಸಿದರು. ಪೊಲೀಸ್ ಆಯುಕ್ತ ಡಾ.ಎಂ.ಎ. ಸಲೀಂ ಅವರು, ನಗರದ ಈಗಿನ ಕಾನೂನು ಮತ್ತು ಸುವ್ಯವಸ್ಥೆ, ಸಂಚಾರ, ಅಪರಾಧ ಪರಿಸ್ಥಿತಿ ವಿವರಿಸಿದರು. ಜೊತೆಗೆ ನಗರದ ವ್ಯಾಪ್ತಿ ಬೆಳೆದಿದ್ದು, ಹೊಸ ಸಂಚಾರ ಮತ್ತು ಸಾಮಾನ್ಯ ಪೊಲೀಸ್ ಠಾಣೆ ತೆರೆಯುವ ವಿಚಾರವನ್ನು ಅಧಿಕಾರಿಗಳ ಗಮನಕ್ಕೆ ತಂದರು.
ಈ ಸಭೆಯಲ್ಲಿ ಇನ್ಸ್ಪೆಕ್ಟರ್ ನಂತರ ಅಧಿಕಾರಿಗಳು ಪಾಲ್ಗೊಂಡಿದ್ದರು. ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಎಂ.ಎನ್. ರೆಡ್ಡಿ, ದಕ್ಷಿಣ ವಲಯ ಐಜಿಪಿ ಡಾ. ರಾಮಚಂದ್ರರಾವ್, ಕೆಪಿಎ ನಿರ್ದೇಶಕ ಎ.ಎಸ್.ಎನ್. ಮೂರ್ತಿ, ಡಿಸಿಪಿಗಳಾದ ಬಸವರಾಜ ವೈ. ಮಾಲಗತ್ತಿ, ಕೆ.ಪಿ. ಭೀಮಯ್ಯ, ಪ್ರಭಾಶಂಕರ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

