ಮೈಸೂರು

'ಕುಡಿವ ನೀರಿಗೆ 22 ಕೋಟಿ ಮಂಜೂರು'

Published On :

ಕ.ಪ್ರ.ವಾರ್ತೆ , ಭೇರ್ಯ , ಜು. 7
ಕೆ.ಆರ್. ನಗರ ತಾಲೂಕಿನ ಕೊಡಿಯಾಲ, ನರಚನಹಳ್ಳಿ ಸೇರಿದಂತೆ ಈ ಭಾಗದ ಸುತ್ತಮುತ್ತಲ ಹಳ್ಳಿಗಳಿಗೆ ಕಾವೇರಿ ನದಿಯಿಂದ ಶಾಶ್ವತ ಶುದ್ಧ ಕುಡಿಯುವ ನೀರು ಪೂರೈಕೆಗೆ 22 ಕೋಟಿ ಮಂಜೂರಾಗಿದೆ ಎಂದು ಶಾಸಕ ಸಾ.ರಾ. ಮಹೇಶ್ ಹೇಳಿದರು.
ನರಚನಹಳ್ಳಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ, ಟೆಂಡರ್ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಮುಂದಿನ ತಿಂಗಳು ಕಾಮಗಾರಿ ಆರಂಭವಾಗಲಿದೆ. ಬಳ್ಳೂರು, ಹರದನಹಳ್ಳಿ, ಮುಂಜನಹಳ್ಳಿ ಹಾಗೂ ಹನಸೋಗೆ ಸಮೀಪ ಕೋಟ್ಯಂತರ ವೆಚ್ಚದ ಶುದ್ಧ ಕುಡಿಯುವ ನೀರು ಪೂರೈಕೆ ಕಾಮಗಾರಿಗಳು ಅಂತಿಮ ಹಂತದಲ್ಲಿವೆ. ಶೀಘ್ರವೇ ಸಾರ್ವಜನಿಕರ ಸೇವೆಗೆ ಅರ್ಪಿಸಲಾಗುವುದು ಎಂದರು.
ನರಚನಹಳ್ಳಿ ಹಾಗೂ ಕಾಕನಹಳ್ಳಿ ಕೆರೆಗಳಿಗೆ ನೀರು ತುಂಬಿಸಲು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಈ ಭಾಗದ ನಾಲೆಗಳಿಗೆ ಸಮರ್ಪಕ ನೀರು ಹರಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಇದಕ್ಕೂ ಮುನ್ನ ಶಾಸಕರು ಬೀಚನಹಳ್ಳಿಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿ, ಬೀಚನಹಳ್ಳಿ ಗ್ರಾಮದಲ್ಲಿ ನಾಲ್ಕು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ನೀರು ಪೂರೈಕೆಗೆ ತುರ್ತು ಕ್ರಮ ಕೈಗೊಳ್ಳಲು ಜಿಪಂ ಎಂಜಿನಿಯರ್ ಚಂದ್ರಕಾಂತ್‌ಗೆ ಸೂಚಿಸಿದ್ದೇನೆ. ಅಲ್ಲದೆ, ಗ್ರಾಮಸ್ಥರ ಮನವಿ ಮೇರೆಗೆ ಗ್ರಾಮದಲ್ಲಿ ಎಕ್ಸ್‌ಪ್ರೆಸ್ ಬಸ್‌ಗಳ ನಿಲುಗಡೆಗೆ ಡಿಪೋ ವ್ಯವಸ್ಥಾಪಕರಿಗೆ ದೂರವಾಣಿ ಮೂಲಕ ಆದೇಶಿಸಿದರಲ್ಲದೆ, ಜನಸ್ಪಂದನ ಕಾರ್ಯಕ್ರಮದಲ್ಲಿ ಖುದ್ದು ಹಾಜರಿಗೆ ಅವರು ತಾಕೀತು ಮಾಡಿದರು.
ತಾಪಂ ಮಾಜಿ ಉಪಾಧ್ಯಕ್ಷ ಹಾಡ್ಯ ಮಹದೇವಸ್ವಾಮಿ, ಗ್ರಾಪಂ ಮಾಜಿ ಅಧ್ಯಕ್ಷ ಸ್ವಾಮಿ, ತಹಸೀಲ್ದಾರ್ ವೀಣಾ, ಸೆಸ್ಕ್ ಎಇಇ ಸಿದ್ದಪ್ಪ, ಲೋಕೋಪಯೋಗಿ ಎಇಇ ರವಿಕುಮಾರ್, ನೀರಾವರಿ ಇಲಾಖೆ ಎಂಜಿನಿಯರ್ ಚಂದ್ರಶೇಖರ್, ಜೆಡಿಎಸ್‌ನ ಮಿರ್ಲೆ ಧನಂಜಯ್, ಲೋಕಿ, ಅರವಿಂದ್, ಸಬ್‌ಇನ್ಸ್‌ಪೆಕ್ಟರ್ ಹರೀಶ್, ಉಪವಿಭಾಗಾಧಿಕಾರಿ ವಿನೂತ ಪ್ರಿಯಾ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.