ಟಿಬೆಟಿಯನ್ನರಿಂದ ನಿವೇಶನ ಕೊಡಿಸಲು ಸಿಎಂ ಒಪ್ಪಿಗೆ
ಕ.ಪ್ರ.ವಾರ್ತೆ , ಬೈಲುಕುಪ್ಪೆ , ಜು. 7
ಬೈಲುಕುಪ್ಪೆ ವ್ಯಾಪ್ತಿಯಲ್ಲಿ 500ಕ್ಕೂ ಹೆಚ್ಚು ಕಡುಬಡವ, ದೀನ ದಲಿತ, ಹಿಂದುಳಿದವರಿಗೆ ನಿವೇಶನವಿಲ್ಲವೆಂದು ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದೆವು. ಈಗ ಟಿಬೆಟಿಯನ್ನರಿಂದ ನಿವೇಶನ ಕೊಡಿಸಲು ಒಪ್ಪಿರುವುದು ನಮಗೆಲ್ಲರಿಗೂ ತುಂಬಾ ಸಂತೋಷವಾಗಿದೆ ಎಂದು ಬೈಲುಕುಪ್ಪೆ ಗ್ರಾಪಂ ಅಧ್ಯಕ್ಷ ರವಿಮಾನು ಹೇಳಿದರು.
ಗ್ರಾಪಂ ವ್ಯಾಪ್ತಿಯಲ್ಲಿ ಟಿಬೆಟಿಯನ್ನರಿಗೆ ಸರ್ಕಾರದಿಂದ 280 ಎಕರೆ ಪ್ರದೇಶ ನೀಡಿದ್ದು, ಇದರಲ್ಲಿ ಬಾಕಿ ಉಳಿದ 63 ಎಕರೆ ಪ್ರದೇಶದಲ್ಲಿ ಕಡುಬಡವ, ದೀನ ದಲಿತ, ಹಿಂದುಳಿದವರಿಗೆ ನಿವೇಶನವಿಲ್ಲ. ಇವರೆಲ್ಲ ದಿನನಿತ್ಯ ಕೂಲಿ ಮಾಡಿ ಜೀವನ ಸಾಗಿಸುತ್ತಿದ್ದು, ಎಲ್ಲೆಂದರಲ್ಲಿ ಗುಡಿಸಲು ಕಟ್ಟಿಕೊಂಡಿದ್ದಾರೆ. ಹೀಗಾಗಿ ಈ ಜಾಗದಲ್ಲಿ ಇವರಿಗೆ ನಿವೇಶನ ನೀಡಲು 30 ಎಕರೆ ಪ್ರದೇಶ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್, ಶಾಸಕ ಕೆ. ವೆಂಕಟೇಶ್ ಬಳಿ ಮನವಿ ಸಲ್ಲಿಸಲಾಗಿತ್ತು ಎಂದು ಅವರು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ನಮ್ಮ ಬೇಡಿಕೆಯನ್ನು ಪುರಸ್ಕರಿಸಿದ ಮುಖ್ಯಮಂತ್ರಿಗಳು, ಶಾಸಕರು ಈಗಾಗಲೇ ಟಿಬೆಟಿಯನ್ ಮುಖಂಡರ ಜತೆ ಮಾತುಕತೆ ನಡೆಸಿ ಮನೆ ನಿವೆಶನಕ್ಕಾಗಿ ಕೊಡುತ್ತೇವೆಂದು ಒಪ್ಪಿಗೆ ನೀಡಿದ್ದಾರೆ. ಸಿದ್ದರಾಮಯ್ಯ ಅವರು ದಲೈಲಾಮ ಅವರ ಹುಟ್ಟುಹಬ್ಬಕ್ಕೆ ಆಗಮಿಸಿದ್ದ ಸಂದರ್ಭದಲ್ಲಿ ಈ ಜಾಗವನ್ನು ಮಂಜೂರು ಮಾಡಿಸಿಕೊಡಿ ಎಂದು ತಿಳಿಸಿದೆವು. ಅದಕ್ಕೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿರುವುದಾಗಿ ಹೇಳಿದರು.
ಗ್ರಾಪಂ ಮಾಜಿ ಅಧ್ಯಕ್ಷೆ ಖತೀಜಾ ಬಾನು, ಸದಸ್ಯರಾದ ಮಹದೇವ್, ಗಣೇಶ್, ನಿಸಾರ್, ರಾಮೇಗೌಡ, ಅಲ್ತಾಫ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

