ಮೈಸೂರು

ನಾಯಕ ಜನಾಂಗದ ಶಾಸಕರಿಗೆ ಅಭಿನಂದನೆ

Published On :

ಕ.ಪ್ರ.ವಾರ್ತೆ , ಮೈಸೂರು , ಜು. 7
ಅಖಿಲ ಕರ್ನಾಟಕ ನಾಯಕ ಜನಾಂಗ ಹಿತರಕ್ಷಣಾ ವೇದಿಕೆಯ 3ನೇ ವಾರ್ಷಿಕೋತ್ಸವ ಅಂಗವಾಗಿ ಜು. 10ರ ಮಧ್ಯಾಹ್ನ 2ಕ್ಕೆ ಜಗನ್ಮೋಹನ ಅರಮನೆಯಲ್ಲಿ ನಾಯಕ ಜನಾಂಗದ ಶಾಸಕರಿಗೆ ಅಭಿನಂದನೆ, ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್, ಬ್ಯಾಗ್ ವಿತರಣೆ ಹಾಗೂ ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಹಮ್ಮಿಕೊಳ್ಳಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಅಧ್ಯಕ್ಷತೆ ವಹಿಸುವರು. ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ, ಶಿಡ್ಲೆಕೋಣ ಮಠದ ವಾಲ್ಮೀಕಿ ಸಂಜಯಕುಮಾರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಡಾ. ಭಾಷ್ಯಂ, ನಟ ಶಶಿಕುಮಾರ್, ನಿರ್ದೇಶಕ ಓಂಪ್ರಕಾಶ್‌ರಾವ್, ಸಂಸದರಾದ ಎಚ್. ವಿಶ್ವನಾಥ್, ಆರ್. ಧ್ರುವನಾರಾಯಣ, ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ ಸೇರಿದಂತೆ ಸಚಿವರು, ಶಾಸಕರು ಅತಿಥಿಗಳಾಗುವರು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಅಬಕಾರಿ ಸಚಿವ ಸತೀಶ್ ಜಾರಕಿಹೊಳಿ, ಜವಳಿ ಸಚಿವ ಬಾಬುರಾವ್ ಚಿಂಚನಸೂರ್, ಬಿಎಸ್‌ಆರ್ ಕಾಂಗ್ರೆಸ್ ಅಧ್ಯಕ್ಷ, ಶಾಸಕ ಬಿ. ಶ್ರೀರಾಮುಲು, ಶಾಸಕರಾದ ಎಸ್. ಚಿಕ್ಕಮಾದು, ಬಾಲಚಂದ್ರ ಜಾರಕಿಹೋಳಿ, ಕೆ.ಎನ್. ರಾಜಣ್ಣ, ಎಚ್.ಟಿ. ಸುರೇಶ್‌ಬಾಬು, ಎಸ್. ತಿಪ್ಪೇಸ್ವಾಮಿ, ರಮೇಶ್ ಲಕ್ಷ್ಮಣ್ ಜಾರಕಿಹೊಳಿ, ರಾಜಾ ವೆಂಕಟಪ್ಪನಾಯಕ, ತಿಪ್ಪರಾಜು, ಜಿ. ಹಂಪಯ್ಯ ಸಾಹುಕಾರ್ ಬಳ್‌ಟಗಿ, ಎ. ವೆಂಕಟೇಶನಾಯಕ, ಪ್ರತಾಪ್‌ಗೌಡ ಪಾಟೀಲ್, ಟಿ.ಎಂ. ನಾಗರಾಜು, ಇ. ತುಕಾರಾಮ್, ಬಿ. ನಾಗೇಂದ್ರ, ಟಿ. ರಘುಮೂರ್ತಿ ಮತ್ತು ಎಚ್.ಪಿ. ರಾಜೇಶ್ ಅವರನ್ನು ಸನ್ಮಾನಿಸಲಾಗುವುದು ಎಂದರು.
ವೇದಿಕೆಯ ಪದಾಧಿಕಾರಿಗಳಾದ ಪ್ರಭಾಕರ್ ಹುಣಸೂರು, ಜವರಪ್ಪ, ಕೆರೆಹಳ್ಳಿ ಮಾದೇಶ, ಎಂ.ಸಿ. ಚೆನ್ನಪ್ಪಾಜಿನಾಯಕ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.