121 ಗ್ರಾಮಗಳಿಗೆ ಕುಡಿಯುವ ನೀರು
ಕ.ಪ್ರ.ವಾರ್ತೆ , ನಂಜನಗೂಡು , ಜು. 7
ತಾಲೂಕಿನ ಹುಲ್ಲಹಳ್ಳಿ ಹೋಬಳಿಗೆ ಸೇರಿದ 121 ಗ್ರಾಮಗಳಲ್ಲಿ ಕುಡಿಯುವ ನೀರಿನ ಬವಣೆ ತಪ್ಪಿಸಲು ಈಗಾಗಲೇ ಸರ್ವೆ ಕಾರ್ಯ ಮುಗಿದಿದ್ದು, ಶೀಘ್ರದಲ್ಲೆ ಕಪಿಲಾ ನದಿಯಿಂದ 92 ಕೋಟಿ ವೆಚ್ಚದ ಶಾಶ್ವತ ಕುಡಿಯುವ ನೀರಿನ ಕಾಮಗಾರಿ ಆರಂಭಿಸಲಾಗುವುದು ಎಂದು ಕಂದಾಯ ಸಚಿವ ವಿ. ಶ್ರೀನಿವಾಸಪ್ರಸಾದ್ ಹೇಳಿದರು.
ಭಾನುವಾರ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕಿನ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿ, ಪಟ್ಟಣಕ್ಕೆ ಹೊಂದಿಕೊಂಡತಿರುವ ರೇಷ್ಮೆ ಇಲಾಖೆಗೆ ಸೇರಿದ ನಿವೇಶನದಲ್ಲಿ 8.5 ಕೋಟಿ ವೆಚ್ಚದ ಹೈಟೆಕ್ ಬಸ್ ನಿಲ್ದಾಣ ನಿರ್ಮಿಸಲಾಗುವುದು. ಬಿಳಿಗೆರೆ ಹೋಬಳಿಗೆ ಸೇರಿದ 41 ಗ್ರಾಮಗಳಿಗೆ 25 ಕೋಟಿ ವೆಚ್ಚದಲ್ಲಿ ಕಪಿಲಾನದಿಯಿಂದ ಶಾಶ್ವತ ಕುಡಿಯುವ ನೀರಿನ ಯೋಜನೆಗೆ ನೀಲನಕ್ಷೆ ತಯಾರಿಸಿದ್ದು, ಕಾಮಗಾರಿ ಅನುಮತಿಗಾಗಿ ಸಂಬಂಧಪಟ್ಟ ಅಧಿಕಾರಿಗಳಿಗೆ ಕಳುಹಿಸಲಾಗಿದೆ ಎಂದರು.
ತಗ್ಗು ಪ್ರದೇಶಗಳಿಗೆ ಭೇಟಿ: ಕಬಿನಿ ಜಲಾಶಯದಿಂದ ನದಿಗೆ ಹರಿಸಿದ ಹೆಚ್ಚುವರಿ ನೀರು ತಗ್ಗು ಪ್ರದೇಶಗಳಿಗೆ ನುಗ್ಗಿದ ಹಿನ್ನೆಲೆಯಲ್ಲಿ ಕಂದಾಯ ಸಚಿವರು ಪಟ್ಟಣದ ತೋಪಿನ ಬೀದಿ, ಹಳ್ಳದಕೇರಿ, ಮುಳ್ಳೂರು ಗ್ರಾಮಗಳಿಗೆ ಭೇಟಿ ನೀಡಿದರು. ನೆರೆಹಾವಳಿ ಪ್ರದೇಶ ಪರಿಶೀಲಿಸಿ ತೋಪಿನ ಬೀದಿ ಸಮೀಪ, ಕಪಿಲಾ ನದಿಯಿಂದ ಚರಂಡಿಗೆ ನೀರು ನುಗ್ಗದಂತೆ ಎಚ್ಚರ ವಹಿಸಲು ಅಧಿಕಾರಿಗಳಿಗೆ ಸೂಚಿಸಿದರು. ನೆರೆ ಹಾವಳಿಯಿಂದ ಕಬಿನಿ ಪಾತ್ರದ ಜಮೀನಿನಲ್ಲಿ ಆದ ಬೆಳೆ ನಷ್ಟದ ಅಂದಾಜು ಪಟ್ಟಿ ತಯಾರಿಸುವಂತೆ ತಹಸೀಲ್ದಾರ್ ಅರುಳಕುಮಾರ್ ಅವರಿಗೆ ತಿಳಿಸಿದರು.
ಡಿವೈಎಸ್ಪಿ ಎಸ್.ಜಿ. ವಿಜಯಕುಮಾರ್, ಇಒ ಕೃಷ್ಣರಾಜು, ಕೃಷಿ ಅಧಿಕಾರಿ ಚಂದ್ರಶೇಖರ್, ಸಮಾಜಕಲ್ಯಾಣ ಅಧಿಕಾರಿ ಸರಸ್ವತಿ, ಸಿಪಿಐ ರಘು, ಜಿಪಂ ಎಇಇ ರಾಮಕೃಷ್ಣಪ್ಪ, ಪಿಡಬ್ಲ್ಯೂಡಿ ಎಇಇ ವಾಸುದೇವ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

