'ಆರೋಗ್ಯ ಸೇವೆ ಸುಧಾರಣೆಯಾಗಲಿ'
ಕ.ಪ್ರ.ವಾರ್ತೆ , ಎಚ್.ಡಿ.ಕೋಟೆ , ಜು. 7
ಮಾನವನ ದಿನನಿತ್ಯದ ಬದುಕಿನಲ್ಲಿ ಆರೋಗ್ಯ ಪ್ರಮುಖ ಪಾತ್ರ ವಹಿಸಲಿದ್ದು, ಗ್ರಾಮಾಂತರ ಪ್ರದೇಶಗಳಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸೇವೆಯಲ್ಲಿ ಸುಧಾರಣೆ ತರಬೇಕಿದೆ ಎಂದು ಶಾಸಕ ಎಸ್. ಚಿಕ್ಕಮಾದು ಹೇಳಿದರು.
ತಾಲೂಕಿನ ಜಿನ್ನಹಳ್ಳಿ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ಹಾಗೂ ಶಾಲಾ ಕಟ್ಟಡ ಉದ್ಘಾಟಿಸಿ ಮಾತನಾಡಿ, ಗ್ರಾಮದ ಜನತೆ ಶುಚಿತ್ವಕ್ಕೆ ಆದ್ಯತೆ ನೀಡಬೇಕು.
ವಿದ್ಯಾವಂತರನ್ನು ಹೊಂದಿರುವ ಈ ಗ್ರಾಮ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಬಿಇಒ ಮಂಜುನಾಥ್ ಅವರ ಮಾರ್ಗದರ್ಶನ ಪಡೆದುಕೊಳ್ಳುವಂತೆ ಹೇಳಿದರು.
ಆಸ್ಪತ್ರೆಗೆ ಜಮೀನು ದಾನ ಮಾಡಿದ ಗ್ರಾಮದ ಮುಖಂಡ ಚಿಕ್ಕನಾಯಕ ಅವರನ್ನು ಕೊಂಡಾಡಿದರು.
ಮುಖಂಡರಾದ ಎಂ.ಸಿ. ದೊಡ್ಡನಾಯಕ, ಸುಬ್ಬೇಗೌಡ, ತೋಪಮ್ಮ, ಮಹದೇವಮ್ಮ, ನಾಗೇಂದ್ರಸ್ವಾಮಿ, ನಾಗರಾಜು, ಮರಳೂರು ನಾಯಕ, ತಹಸೀಲ್ದಾರ್ ಕೃಷ್ಣ, ಡಾ. ಸುಮಾ, ಡಾ. ರವಿ, ಡಾ. ಮುದ್ದುಮಲ್ಲಯ್ಯ, ಬಿಇಒ ಮಂಜುನಾಥ್ ಇದ್ದರು.
ಅಂಗನವಾಡಿ ಸಹಾಯಕಿಯರ ಆಯ್ಕೆ ಪಟ್ಟಿ ಪ್ರಕಟ
ನಂಜನಗೂಡು: ತಾಲೂಕು ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿಯಿದ್ದ 3 ಅಂಗನವಾಡಿ ಕಾರ್ಯಕರ್ತೆಯರು ಹಾಗೂ 12 ಅಂಗನವಾಡಿ ಸಹಾಯಕಿಯರ ನೇಮಕಾತಿ ಸಂಬಂಧ ಆಯ್ಕೆ ಪಟ್ಟಿ ಪ್ರಕಟಿಸಲಾಗಿದೆ.
ಇತ್ತೀಚೆಗೆ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ. ರಾಮೇಗೌಡ ಅಧ್ಯಕ್ಷತೆಯಲ್ಲಿ ಆಯ್ಕೆ ಮಾಡಲಾಗಿದ್ದು, ಆಕ್ಷೇಪಣೆಗಳಿದ್ದಲ್ಲಿ ಜು. 11 ರೊಳಗೆ ಸೂಕ್ತ ದಾಖಲಾತಿಯೊಂದಿಗೆ ಸಲ್ಲಿಸುವಂತೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ನಿಗಮ- ಮಂಡಳಿಗೆ ನೇಮಿಸಲು ಆಗ್ರಹ
ಕೆ.ಆರ್. ನಗರ: ಕಾಂಗ್ರೆಸ್ ಸಮಿತಿ ಸದಸ್ಯಸ ತಾಲೂಕಿನ ಹಿರಿಯ ಕಾಂಗ್ರೆಸ್ ಮುಖಂಡ ಮುಸ್ಲಿಂ ಸಮಾಜದ ನಾಯಕರಾಗಿರುವ ಡಾ. ಮೆಹಬೂಬ್ ಖಾನ್ ಅವರಿಗೆ ನಿಗಮ, ಮಂಡಳಿ ನೇಮಕಾತಿಯಲ್ಲಿ ಆದ್ಯತೆ ನೀಡಬೇಕು ಎಂದು ಶಹೀದ್ ಟಿಪ್ಪು ಸುಲ್ತಾನ್ ಟ್ರಸ್ಟ್ ಅಧ್ಯಕ್ಷ ಸೈಯದ್ ಜಾಬೀರ್ ಒತ್ತಾಯಿಸಿದ್ದಾರೆ.
ಎಸ್‌ಡಿಎಂಸಿಗೆ ಆಯ್ಕೆ
ಪಿರಿಯಾಪಟ್ಟಣ: ತಾಲೂಕಿನ ಕಂಪಲಾಪುರ ಸರ್ಕಾರಿ ಪ್ರೌಢಶಾಲೆಯ ಎಸ್‌ಡಿಎಂಸಿ ನೂತನ ಅಧ್ಯಕ್ಷರಾಗಿ ಗ್ರಾಪಂ ಮಾಜಿ ಉಪಾಧ್ಯಕ್ಷ ಕೆ.ಎಂ. ಲಕ್ಷ್ಮಣ್ ಹಾಗೂ ಸವಿತಾ (ಉಪಾಧ್ಯಕ್ಷೆ), ರಾಮು, ಶಿವಣ್ಣೇಗೌಡ, ಕುಮಾರ, ಮಂಜುಳಾ, ರತ್ನಮ್ಮ, ಹರ್ಶಿಯಾ, ಹರೀಶ (ಸದಸ್ಯರು) ಆಯ್ಕೆಯಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

