ಪಿಎಚ್.ಡಿ ಪ್ರಬಂಧ ಕೃತಿಚೌರ್ಯ: ಆರೋಪ
ಮೈಸೂರು: ಡಿ. ರೇಖಾ ಎಂಬವರು ನನ್ನ ಸಂಶೋಧನಾ ಪ್ರಬಂಧವನ್ನು ಕೃತಿಚೌರ್ಯ ಮಾಡಿದ್ದಾರೆ ಎಂದು ಮಹಾರಾಣಿ ಕಲಾ ವಾಣಿಜ್ಯ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಎ.ವಿ. ವೇಣುಗೋಪಾಲ್ ಆರೋಪಿಸಿದ್ದಾರೆ.
2002ರಲ್ಲಿ ಮೈಸೂರು ವಿವಿಯ ಮನಃಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಪಿ. ಪ್ರಕಾಶ್ ಅವರ ಮಾರ್ಗದರ್ಶನದಲ್ಲಿ ಮಂಡಿಸಲಾಗಿದ್ದ ಪಿಎಚ್.ಡಿ ಪ್ರಬಂಧದ ವಿಷಯವನ್ನೆ ಆಧರಿಸಿ ಡಿ. ರೇಖಾ ಅವರು 2006ರಲ್ಲಿ ಅಮೆರಿಕೆಯ ಗೋಲ್ಡನ್ ಸ್ಟೇಟ್ ವಿವಿಯಿಂದ ಪಿಎಚ್.ಡಿ, ಮೈಸೂರು ವಿವಿಯಿಂದ ಎಂ.ಫಿಲ್ ಪದವಿ ಪಡೆದಿದ್ದಾರೆ ಎಂದು ದೂರಿದ್ದಾರೆ. ಮಾನಸಗಂಗೋತ್ರಿಯ ಮನಃಶಾಸ್ತ್ರ ಅಧ್ಯಯನ ವಿಭಾಗದ ಪ್ರಾಧ್ಯಾಪಕ ಡಾ. ಜಿ. ವೆಂಕಟೇಶ್ಕುಮಾರ್ ಅವರ ಮಾರ್ಗದರ್ಶನದಲ್ಲಿ ಇಂಪ್ಯಾಕ್ಟ್ ಆಫ್ ರೆಮಿಡಿಯಲ್ ಟೀಚಿಂಗ್ ಆನ್ ಚಿಲ್ಟ್ರನ್ ವಿಥ್ ಲರ್ನಿಂಗ್ ಡಿಸ್ಬಲೀಟಿ ಎಂಬ ಪ್ರಬಂಧ ಮಂಡಿಸಿ ಪಿಎಚ್.ಡಿ ಪಡೆದಿದ್ದಾರೆ. ಇದರ ಆಧಾರದ ಮೇಲೆ ಅವರು ಅತಿಥಿ ಉಪನ್ಯಾಸಕರ ಹುದ್ದೆಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರದ ಆದೇಶದನ್ವಯ ಮಹಾರಾಣಿ ಕಾಲೇಜಿನ ಮನಃಶಾಸ್ತ್ರ ವಿಭಾಗದ ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಕರೆಯಲಾಗಿತ್ತು. ನಾನು ಸಹ ಆಯ್ಕೆ ಸಮಿತಿಯ ಸದಸ್ಯನಾಗಿದ್ದರಿಂದ ಡಿ. ರೇಖಾ ಅವರ ದಾಖಲೆ ಪರಿಶೀಲಿಸುವಾಗ ಈ ವಿಚಾರ ಕಂಡುಬಂತು. ಈಗಾಗಲೇ ಹುದ್ದೆಗೆ ಆಯ್ಕೆಯಾಗಿ ತಿಂಗಳಿಗೆ 22 ಸಾವಿರು ವೇತನ ಪಡೆಯುತ್ತಿದ್ದಾರೆ. ಆದ್ದರಿಂದ ರೇಖಾ ಅವರ ಬಗ್ಗೆ ಸೂಕ್ತ ಕ್ರಮ ಕೈಗೊಂಡು ತಮಗೆ ನ್ಯಾಯ ಒದಗಿಸಬೇಕು ಎಂದು ಮೈಸೂರು ವಿವಿಯ ಪರೀಕ್ಷಾಂಗ ಕುಲಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

