ಮೈಸೂರು

ಸಾರಾ ಕನ್‌ವೆನ್ಷನ್ ಹಾಲ್ ಉದ್ಘಾಟನೆ

Published On :

 ಕ.ಪ್ರ.ವಾರ್ತೆ , ಕೆ.ಆರ್. ನಗರ , ಜು. 7
ಮೈಸೂರು ನಗರದಲ್ಲಿ ಶಾಸಕ ಸಾ.ರಾ. ಮಹೇಶ್ ನಿರ್ಮಿಸಿರುವ ಸಾ.ರಾ. ಕನ್‌ವೆನ್ಷನ್ ಹಾಲ್ ಆ.12 ರಂದು ಉದ್ಘಾಟನೆಯಾಗಲಿದ್ದು, ಅಂದು ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಸಾ.ರಾ. ಸ್ನೇಹ ಬಳಗದ ಅಧ್ಯಕ್ಷ ವಿಜಯ ಕುಮಾರ್ ಹೇಳಿದರು.
ಬಳಗದ 8ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಸಾಮೂಹಿಕ ವಿವಾಹ ನಡೆಸುತ್ತಿದ್ದು, ಜಿಲ್ಲೆಯ ನಾಗರಿಕರು ಇದರ ಪ್ರಯೋಜನ ಪಡೆದುಕೊಳ್ಳಬೇಕು. ಕಡ್ಡಾಯವಾಗಿ ವಧು- ವರರು ತಮ್ಮ ವಯಸ್ಸಿನ ಮತ್ತು ವಾಸಸ್ಥಳದ ದೃಢೀಕರಣ ಹಾಜರುಪಡಿಸುವಂತೆ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ವಧು- ವರರಿಗೆ ವಸ್ತ್ರ ಮತ್ತು ವರನಿಗೆ ಕೈಗಡಿಯಾರ ನೀಡಲಿದ್ದು, ಭೋಜನದ ವ್ಯವಸ್ಥೆ ಮಾಡಲಾಗಿದೆ. ಅರ್ಜಿ ಸಲ್ಲಿಸಲು ಜು. 30 ಕಡೆಯ ದಿನವಾಗಿದ್ದು, ಆಸಕ್ತರು ಮೊ. 9448871925 ಸಂಪರ್ಕಿಸಬಹುದು.
ಬಳಗದ ವತಿಯಿಂದ ಪಟ್ಟಣದಲ್ಲಿ 2008- 13ರ ಸುವರ್ಣ ವಸ್ತ್ರನೀತಿ ಯೋಜನೆಯಡಿ ಹೊಲಿಗೆ ತರಬೇತಿ ನೀಡುತ್ತಿದ್ದು, ಕಳೆದ ಎರಡು ವರ್ಷಗಳ ಅವಧಿಯಲ್ಲಿ 300 ಮಂದಿ ಮಹಿಳೆಯರಿಗೆ ತರಬೇತಿ ನೀಡಲಾಗಿದೆ. ಅವರು ವಿವಿಧ ಗಾರ್ಮೆಂಟ್ಸ್‌ಗಳಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಬಳಗದ ಕಾರ್ಯದರ್ಶಿ ಸಿ.ಜೆ. ಆನಂದ್, ನಿರ್ದೇಶಕ ಕುಚೇಲ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.