ಮೈಸೂರು

ಆದಿವಾಸಿಗಳಿಗೆ ಶೀಘ್ರ ಹಕ್ಕುಪತ್ರ

Published On :

ಕ.ಪ್ರ.ವಾರ್ತೆ  ಹುಣಸೂರು  ಜು. 8
ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿಗೊಂಡಿರುವ ಅದಿವಾಸಿಗಳಿಗೆ ಶೀಘ್ರದಲ್ಲಿಯೇ ಭೂಮಿಯ ಹಕ್ಕುಪತ್ರ ನೀಡಲು ಸರ್ಕಾರ ಬದ್ಧವಾಗಿದೆ ಎಂದು ಸಂಸದ ಎಚ್. ವಿಶ್ವನಾಥ್ ಹೇಳಿದರು.
ಹನಗೋಡು ಹೋಬಳಿಯ ಶೆಟ್ಟಹಳ್ಳಿ- ಲಕ್ಕಪಟ್ಟಣ ಗಿರಿಜನ ಪುನರ್ವಸತಿ ಕೇಂದ್ರಕ್ಕೆ ಭೇಟಿ ನೀಡಿ ಪುನರ್ವಸತಿಗೊಂಡ ಗಿರಿಜನರ ಕೊಂದುಕೊರತೆ ಆಲಿಸಿದರು.
ಪುನರ್ವಸತಿ ಕೇಂದ್ರದ ಮುಖಂಡ ರಾಜಪ್ಪ ಮಾತನಾಡಿ, ಈ ಕೇಂದ್ರಕ್ಕೆ ಸ್ಥಳಾಂತರಗೊಂಡು ಮೂರು ವರ್ಷವಾದರೂ ಭೂ ಒಡೆತನ ಸಿಗದೆ ಪಹಣಿ ಪತ್ರವಿಲ್ಲದೆ, ಬ್ಯಾಂಕಿನಲ್ಲಿ ಸಾಲ ಸೌಲಭ್ಯ ಪಡೆಯಲಾಗುತ್ತಿಲ್ಲ, ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಚಟುವಟಿಕೆಗಾಗಿ ಬಡ್ಡಿ ಸಾಲ ತಂದು ವ್ಯವಸಾಯ ಮಾಡುವಂತಾಗಿದ್ದು, ಗಿರಿಜನರು ಆರ್ಥಿಕ ಸಹಾಯವಿಲ್ಲದೆ ಯಾವುದೆ ಕಾರ್ಯ ಕೈಗೊಳ್ಳಲು ಆಗದೆ, ಕೊಡಗಿಗೆ ಕೂಲಿ ಕೆಲಸಕ್ಕೆ ಹೋಗುವಂತಾಗಿದೆ. ತಕ್ಷಣವೆ ಭೂಮಿಗೆ ಹಕ್ಕುಪತ್ರ ಕೊಡಿಸುವಂತೆ ಮನವಿ ಮಾಡಿದರು.
ಗಿರಿಜನರ ಸಮಸ್ಯೆಗೆ ಸ್ಪಂದಿಸಿದ ಸಂಸದರು, ಭೂ ಒಡೆತನಕ್ಕೆ ಸಂಬಂಧಿಸಿದಂತೆ ಶಾಸಕ ಎಚ್.ಪಿ. ಮಂಜುನಾಥ್ ಸರಕಾರದೊಂದಿಗೆ ವ್ಯವಹರಿಸುತ್ತಿದ್ದು, ತಾವು ಕೂಡ ಜಿಲ್ಲಾಧಿಕಾರಿಗಳ ಮೇಲೆ ಒತ್ತಡ ಹೇರಿ ಶೀಘ್ರದಲ್ಲೇ ಸರ್ವೆ ಕಾರ್ಯ ಮುಗಿಸಿ ಹಕ್ಕುಪತ್ರ ಕೊಡಿಸುವ ಬಗ್ಗೆ ಭರವಸೆ ನೀಡಿದರು.
ಪುನರ್ವಸತಿ ಕೇಂದ್ರದಲ್ಲಿ ನಿರ್ಮಿಸುತ್ತಿರುವ ಗಿರಿಜನ ಆಶ್ರಮ ಶಾಲೆ ಕಟ್ಟಡ ಕಾಮಗಾರಿ ಪರಿಶೀಲಿಸಿದ ಸಂಸದರು, ತ್ವರಿತಗತಿಯಲ್ಲಿ ಹಾಗೂ ಗುಣಮಟ್ಟದ  ಕಾಮಗಾರಿ ನಡೆಸುವಂತೆ ಗುತ್ತಿಗೆದಾರನಿಗೆ ತಾಕೀತು ಮಾಡಿದರು.
ಶೆಟ್ಟಹಳ್ಳಿ  ಹಾಡಿಯ ಗ್ರಾಪಂ ಸದಸ್ಯ ಪಿ.ಕೆ. ರಾಮು ಹಲವಾರು ವರ್ಷಗಳಿಂದ ಅರಣ್ಯದಿಂದ ಹೊರಹಾಕಲ್ಪಟ್ಟ ನಮಗೂ ಕೂಡ ಇವರ ಮಾದರಿಯಲ್ಲೆ ಭೂಮಿ ನೀಡಬೇಕೆಂದು ಸಂಸದರಿಗೆ ಮಾಡಿದ ಮನವಿ ಪರಮರ್ಶಿಸುವುದಾಗಿ ಭರವಸೆ ನೀಡಿದರು.
ಜಿಪಂ ಸದಸ್ಯ ರಮೇಶ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕುಮಾರ್, ತಾಲೂಕು ಯುವ ಅಧ್ಯಕ್ಷ ಲೋಕೇಶ್, ತಾಲೂಕು ಕಾಂಗ್ರೆಸ್ ಅಧ್ಯಕ್ಷ ಬಿಳಿಕೆರೆ ಬಸವರಾಜು, ತಾಪಂ ಮಾಜಿ ಉಪಾಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡ ಮಹದೇವ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.