ಮೈಸೂರು

ಪುರಸಭಾ ಸದಸ್ಯ ವಿನಯ್ ನಿಧನ

Published On :

ಕೆ.ಆರ್. ನಗರ: ಕೆ.ಆರ್. ನಗರ ಪುರಸಭಾ ಸದಸ್ಯ ಪಿ. ವಿನಯ್(25) ಭಾನುವಾರ ರಾತ್ರಿ  ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದರು.
ಮೃತರಿಗೆ ತಂದೆ, ತಾಯಿ ಮತ್ತು ಸೋದರ ಇದ್ದಾರೆ. ಕಳೆದ ಪುರಸಭಾ ಚುನಾವಣೆಯಲ್ಲಿ ಪಟ್ಟಣದ 15ನೇ ವಾರ್ಡಿನಿಂದ ಜೆಡಿಎಸ್ ಟಿಕೆಟ್‌ನಿಂದ ಆಯ್ಕೆಯಾಗಿದ್ದರು. ಆದರೆ, ಪ್ರಮಾಣವಚನ ಸ್ವೀಕರಿಸಿ ಪುರಸಭಾ ಸದಸ್ಯರ ಸಾಮಾನ್ಯ ಸಭೆಯಲ್ಲಿ ಪಾಲ್ಗೊಳ್ಳುವ ಮೊದಲೇ ನಿಧನರಾಗಿದ್ದಾರೆ.
ಸೋಮವಾರ ಬೆಳಗ್ಗೆ ಬಸವೇಶ್ವರ ಬ್ಲಾಕಿನ ಮೃತರ ಮನೆಯಲ್ಲಿ ಪಾರ್ಥೀವ ಶರೀರವನ್ನು ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿತ್ತು. ನಂತರ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿ ವೀರಶೈವ ರುದ್ರಭೂಮಿಯಲ್ಲಿ ಅಂತ್ಯಕ್ರಿಯೆ ಮಾಡಲಾಯಿತು.
ಶಾಸಕ ಸಾ.ರಾ. ಮಹೇಶ್, ಜಿಪಂ ಮಾಜಿ ಸದಸ್ಯ ಡಿ. ರವಿಶಂಕರ್, ಎಂ.ಟಿ. ಕುಮಾರ್, ಜೆಡಿಎಸ್ ಅಧ್ಯಕ್ಷ ಚಂದ್ರಶೇಖರ್, ಪುರಸಭಾ ಸದಸ್ಯರಾದ ಪ್ರಭುಶಂಕರ್, ಉಮೇಶ್, ಕೆ.ಎಲ್. ಜಗದೀಶ್, ಮಾಜಿ ಅಧ್ಯಕ್ಷ ರಿಜ್ವಾನ್ ಉಲ್ಲಾಖಾನ್, ತಮ್ಮನಾಯಕ, ಆರ್.ಬಿ. ನಾಗರಾಜ್, ಡಾ. ಮೆಹಬೂಬ್‌ಖಾನ್, ಸಿ.ಪಿ. ರಮೇಶ್, ತಾಪಂ ಅಧ್ಯಕ್ಷೆ ಕವಿತಾರವಿ, ಸದಸ್ಯ ಮಹದೇವಸ್ವಾಮಿ, ಬಿಜೆಪಿ ಅಧ್ಯಕ್ಷ ಮಿರ್ಲೆ ಶ್ರೀನಿವಾಸಗೌಡ, ಪುರಸಭಾ ಮಾಜಿ ಸದಸ್ಯ ಎನ್. ರವಿ, ಮೈಮುಲ್ ಮಾಜಿ ಅಧ್ಯಕ್ಷ ಎ.ಟಿ. ಸೋಮಶೇಖರ್ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.