ಜೆಡಿವಿ ಎಂದು ಬದಲಿಸಿಕೊಳ್ಳಿ'
ಮೈಸೂರು: ಜಾತ್ಯತೀತ ಜನತಾ ದಳವನ್ನು, ಜನತಾ ದಳ (ಒಕ್ಕಲಿಗ) ಎಂದು ಬದಲಿಸಿಕೊಳ್ಳಿ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನಗರ ಕಾಂಗ್ರೆಸ್ ಸಮಿತಿ ಮಾಧ್ಯಮ ಸಂಚಾಲಕ ಎಂ. ಲಕ್ಷ್ಮಣ ಸಲಹೆ ನೀಡಿದರು.
ಬೆಂಗಳೂರಿನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡುವ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಹಿತವಚನ ಹೇಳುವುದು ಬಿಟ್ಟು ಜಾತಿಗಾಗಿ ಮತ್ತು ರಾಜಕೀಯಕ್ಕಾಗಿ ವೇದಿಕೆ ಬಳಸಿಕೊಂಡಿರುವುದು ಸರಿಯಲ್ಲ. ಅಲ್ಲದೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವರ್ಗಾವಣೆ ಮಾಡಿರುವ ಐಎಎಸ್ ಮತ್ತು ಐಪಿಎಸ್ ಅಧಿಕಾರಿಗಳ ಪೈಕಿ ಒಬ್ಬರೂ ಒಕ್ಕಲಿಗರು ಇಲ್ಲ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಯಾರೊಬ್ಬರನ್ನೂ ವರ್ಗಾರ್ವಣೆ ಮಾಡಿಲ್ಲವೆ, ಒಕ್ಕಲಿಗ ಅಧಿಕಾರಿಗಳನ್ನು ಕೇವಲ ಬೆಂಗಳೂರು ಮತ್ತು ಮೈಸೂರಿನಲ್ಲಿ ಮಾತ್ರ ಉಳಿಸಿಕೊಂಡಿದ್ದರೆ ಅಥವಾ ಒಕ್ಕಲಿಗರನ್ನು ಕುಮಾರಸ್ವಾಮಿ ಗುತ್ತಿಗೆ ಪಡೆದಿದ್ದಾರೆಯೆ, ಅಲ್ಲದೆ ಒಕ್ಕಲಿಗರಿಗೆ ಕುಮಾರಸ್ವಾಮಿ ಎಷ್ಟು ಸಹಾಯ ಮಾಡಿದ್ದಾರೆ ಎಂಬ ಬಗ್ಗೆ ಅವರು ತಿಳಿಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ಸರ್ಕಾರಿ ನೌಕರರಾಗಿ ನಿಯುಕ್ತಿಗೊಂಡ ಅಧಿಕಾರಿಗಳು ಕೇವಲ ಒಂದು ಜಿಲ್ಲೆಗೆ ಸೀಮಿತವಲ್ಲ. ಇಡೀ ರಾಜ್ಯದಲ್ಲಿ ಎಲ್ಲಿಯಾದರೂ ಅವರು ಕೆಲಸ ಮಾಡಬೇಕು. ಆದರೆ, ಕುಮಾರಸ್ವಾಮಿ ಅವರು ಒಕ್ಕಲಿಗ ಅಧಿಕಾರಿಗಳನ್ನು ಗುಲ್ಬರ್ಗ ಮತ್ತು ಬೆಳಗಾವಿಗೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳುತ್ತಾರೆ. ಒಬ್ಬ ಮಾಜಿ ಮುಖ್ಯಮಂತ್ರಿಯಿಂದ ಇಂಥ ಮಾತುಗಳನ್ನು ನಿರೀಕ್ಷಿಸಿರಲಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಲಿಂಗಾಯಿತರು ಮತ್ತು ಒಕ್ಕಲಿಗರಿಗೆ ಎತ್ತಿಕಟ್ಟಿದ್ದರು. ಈಗ ಕುರುಬರಿಗೂ ಒಕ್ಕಲಿಗರಿಗೂ ಎತ್ತಿಕಟ್ಟಿ ಜಾತಿ ಜಾತಿಯ ನಡುವೆ ವಿಷಬೀಜ ಬಿತ್ತುತ್ತಿದ್ದಾರೆ ಎಂದು ದೂರಿದರು. ಮಾಜಿ ಮೇಯರ್ ಬಿ.ಕೆ. ಪ್ರಕಾಶ್ ಮಾತನಾಡಿ, ಸಿದ್ದರಾಮಯ್ಯ ಅವರು ಉಪ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ಹಲವು ಮಂದಿ ಒಕ್ಕಲಿಗ ಮುಖಂಡರಿಗೆ ರಾಜಕೀಯ ಸ್ಥಾನಮಾನ ನೀಡಿದ್ದಾರೆ. ಅವರದು ಜಾತ್ಯತೀತ ವ್ಯಕ್ತಿತ್ವ. ಆದರೆ, ಕುಮಾರಸ್ವಾಮಿ ಅವರು ಒಕ್ಕಲಿಗರನ್ನು ಓಲೈಸಲು ಮತ್ತು ತಮಗೆ ಬೇಕಾದ ಅಧಿಕಾರಿಗಳು ಇರುವ ಸ್ಥಳದಲ್ಲಿಯೆ ಇರುವಂತೆ ನೋಡಿಕೊಳ್ಳಲು ಈ ರೀತಿಯ ಹೇಳಿಕೆ ನೀಡಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕ ಎಂದರು.ಕಾಂಗ್ರೆಸ್ ಮುಖಂಡರಾದ ರಾಜೇಂದ್ರ, ಕುರು ಬಾರಹಳ್ಳಿ ಪ್ರಕಾಶ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

