ಶಾಸಕರು, ಕೆಎಂಎಫ್ ನಿರ್ದೇಶಕರಿಗೆ ಸನ್ಮಾನ
ಕ.ಪ್ರ.ವಾರ್ತೆ ಎಚ್.ಡಿ.ಕೋಟೆ ಜು. 9
ತಾಲೂಕು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ನೂತನ ಶಾಸಕರು ಹಾಗು ಕೆಎಂಎಫ್ ನಿರ್ದೇಶಕರಿಗೆ ಹ್ಯಾಂಡ್ಪೋಸ್ಟ್ನ ಜಯಮ್ಮ ಸಿದ್ದೇಗೌಡ ಕಲ್ಯಾಣ ಮಂಟಪದಲ್ಲಿ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿದ ಕೆಎಂಎಫ್ ನಿರ್ರ್ದೇಶಕ ಉಮಾಶಂಕರ್ ಮಾತನಾಡಿ, ತಾಲೂಕಿನ ಹಾಲು ಉತ್ಪಾದಕರ ಸಂಘಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸುವುದಾಗಿ ಭರವಸೆ ನೀಡಿದರು.
ಶಾಸಕ ಚಿಕ್ಕಮಾದು ಮಾತನಾಡಿ, ತಾಲೂಕಿನಲ್ಲಿ ಹೆಚ್ಚಿನ ಮಹಿಳಾ ಹಾಲು ಉತ್ಪಾದಕರ ಸಂಘಗಳಿದ್ದು, ಅವುಗಳು ಉತ್ತಮವಾಗಿ ಕೆಲಸ ನಿರ್ವಹಿಸುತ್ತಿವೆ. ಒಟ್ಟು 114 ಸಂಘಗಳಲ್ಲಿ 61 ಮಹಿಳಾ ಸಂಘಗಳಿವೆ. ಆದರೆ 25 ಸಂಘಗಳು ಮಾತ್ರ ತಮ್ಮ ಸ್ವಂತ ಕಟ್ಟಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಉಳಿದಂತೆ 12 ಸಂಘಗಳಿಗೆ ಸ್ವಂತ ಜಾಗ ಇಲ್ಲ. ತಮ್ಮ ಅನುದಾನದಲ್ಲಿ ಕಟ್ಟಡ ನಿರ್ಮಿಸಲು 1 ಲಕ್ಷ ನೀಡುವುದಾಗಿ ತಿಳಿಸಿದರು.
ಉಳಿದ ಸಂಘಗಳು ತಮ್ಮ ವ್ಯಾಪ್ತಿಯಲ್ಲಿ ಸರ್ಕಾರದ ಜಾಗ ಗುರುತಿಸಿ ತಿಳಿಸಿದರೆ ಅವರಿಗೂ ಸೂಕ್ತ ಕಟ್ಟಡ ನಿರ್ಮಿಸಿಕೊಳ್ಳಲು ನಿವೇಶನದ ಜೊತೆಗ 1 ಲಕ್ಷ ನೀಡಲಾಗುವುದು ಎಂದರು.
ಒಕ್ಕೂಟದ ಕಾರ್ಯನಿರ್ವಾಹಕ ನಿರ್ದೇಶಕ ಸುರೇಶ್ ಬಾಬು ಪ್ರಾಸ್ತಾವಿಕ ಭಾಷಣ ಮಾಡಿದರು. ಮೈಸೂರು- ಚಾಮರಾಜನಗರ ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷ ಮಹದೇವಪ್ಪ, ನಿರ್ದೇಶಕರಾದ ಕುಮಾರ್, ರಾಜೇಗೌಡ, ಈರೇಗೌಡ, ಬಸವಣ್ಣ, ಡಿ.ಎಸ್. ನಾಗರಾಜು, ಜಿಪಂ ಮಾಜಿ ಅಧ್ಯಕ್ಷ ಕಡಕೊಳ ನಾಗರಾಜು ಎಂ.ಪಿ.ನಾಗರಾಜು, ತಾಪಂ ಸದಸ್ಯ ಬಾಲಚಂದ್ರ, ತಿಬ್ಬಾನಾಯಕ, ಮಾಯಪ್ಪ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

