ಬೈಕ್ಗಳ ಮುಖಾಮುಖಿ: ವ್ಯಕ್ತಿ ಸಾವು
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಜು. 9
ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಪಟ್ಟಣದಲ್ಲಿ ಮಂಗಳವಾರ ಜರುಗಿದೆ.
ಹುಣಸೂರು ತಾಲೂಕು ಬಿ.ಆರ್. ಕಾವಲಿನ ಆಂಥೋಣಿ(40) ಮೃತಪಟ್ಟ ವ್ಯಕ್ತಿ. ಇವರೊಂದಿಗೆ ಪ್ರಯಾಣಿಸುತ್ತಿದ್ದ ಹುಣಸೂರು ತಾಲೂಕು ಹೈರಿಗೆ ಗ್ರಾಮದ ಪ್ರಭಾಕರ್ ಹಾಗೂ ಮತ್ತೊಂದು ಬೈಕ್ನಲ್ಲಿ ಪ್ರಯಾಣಿಸುತ್ತಿದ್ದ ಪಟ್ಟಣದ ಪ್ರೇಮಾ ಹಾಗೂ ಯೋಗೇಶ್ ಎಂಬವರಿಗೆ ಪೆಟ್ಟಾಗಿದೆ. ಆಂಥೋಣಿ ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ತೀವ್ರ ಸ್ವರೂಪದ ಗಾಯಾಳುಗಳಾಗಿರುವ ಪ್ರೇಮಾ ಹಾಗೂ ಪ್ರಭಾಕರ್ ಅವರನ್ನು ಮೈಸೂರಿನ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಇದೇ ರಸ್ತೆಯಲ್ಲಿ ತೆರಳುತ್ತಿದ್ದ ತಹಸೀಲ್ದಾರ್ ಎಂ.ಕೆ. ಸವಿತಾ ಆಸ್ಪತೆಗೆ ಭೇಟಿ ನೀಡಿ, ಗಾಯಾಳುಗಳ ಆರೋಗ್ಯ ವಿಚಾರಿಸಿದರಲ್ಲದೆ, ಪ್ರಸ್ತುತ ರಾಜ್ಯ ರಸ್ತೆ ಹೆದ್ದಾರಿಯಿಂದ ತಾಲೂಕು ಆಡಳಿತ ಭವನಕ್ಕೆ ತೆರಳುವ ಮಾರ್ಗದಲ್ಲಿ ರಸ್ತೆ ಡುಬ್ಬ ನಿರ್ಮಿಸುವ ಸಂಬಂಧ ಅಧಿಕಾರಿಗಳಿಗೆ ಪತ್ರ ಬರೆಯುವುದಾಗಿ ತಿಳಿಸಿದರು.
ಮೈಸೂರಿಗೆ ಗಾಯಾಳುಗಳನ್ನು ಕಳುಹಿಸಲು ಆಂಬ್ಯುಲೆನ್ಸ್ ಪಡೆಯಲು ಪ್ರಯತ್ನಿಸಿದರಾದರೂ ಸಾಧ್ಯವಾಗದ ಕಾರಣ, ಖಾಸಗಿ ವಾಹನದಲ್ಲಿ ಸಾಗಿಸಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

