ಮಹಿಳೆಯರು ಸ್ವಾಭಿಮಾನಿಗಳಾಗಲಿ: ತನ್ವೀರ್ ಸೇಠ್
ಕ.ಪ್ರ.ವಾರ್ತೆ ಮೈಸೂರು ಜು. 10
ಮಹಿಳೆಯರು ಕೌಶಲ್ಯಾಧಾರಿತ ತರಬೇತಿ ಪಡೆದ ನಂತರ ಸ್ವಾವಲಂಬಿಗಳಾಗಿ ಸ್ವಾಭಿಮಾನಿ ಬದುಕು ಕಟ್ಟಿಕೊಳ್ಳುವಂತೆ ಶಾಸಕ ತನ್ವೀರ್ ಸೇಠ್ ಕರೆ ನೀಡಿದರು.
ಸಹಾರ ಇಸ್ಲಾಮಿಯಾ ಟ್ರಸ್ಟ್, ಸಹರಾ ಟೈಲರಿಂಗ್ ಟ್ರೈನಿಂಗ್ ಸೆಂಟರ್ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ರಾಜೇಂದ್ರನಗರದ ಕಾರ್ಮಿಕ ಕಲ್ಯಾಣ ಕೇಂದ್ರದಲ್ಲಿ ಮಂಗಳವಾರ ಏರ್ಪಡಿಸಿದ್ದ ಟೈಲರಿಂಗ್ ತರಬೇತಿ ಪ್ರಮಾಣ ಪತ್ರ ವಿತರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ದಿವಸಗಳಲ್ಲಿ ಒಬ್ಬ ಯಜಮಾನನ ದುಡಿಮೆಯಿಂದ ಕುಟುಂಬ ನಿರ್ವಹಣೆ ಮಾಡಲು ಸಾಧ್ಯವಿಲ್ಲ. ಇದನ್ನರಿತು ಮಹಿಳೆಯರು ಸಹ ಮನೆಯಲ್ಲಿಯೇ ಕುಳಿತು ಕೌಶಲ್ಯಾಧಾರಿತ ವೃತ್ತಿ ಮಾಡುವ ಮೂಲಕ ಹಣ ಗಳಿಸಬೇಕು. ಗಳಿಸಿದ್ದನ್ನು ಉಳಿಸಿಕೊಂಡರೆ ಉಜ್ವಲ ಭವಿಷ್ಯ ಕಂಡುಕೊಳ್ಳಬಹುದು. ಸರ್ಕಾರದಿಂದ ಪ್ರತಿಯೊಬ್ಬರಿಗೂ ಉದ್ಯೋಗ ಕಲ್ಪಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಸ್ವಯಂಸೇವಾ ಸಂಸ್ಥೆಗಳು ಮುಂದೆ ಈ ರೀತಿಯ ತರಬೇತಿ ಹೇಳಿಕೊಟ್ಟಾಗ ಎಲ್ಲರೂ ಕಲಿತುಕೊಂಡು ಸ್ವ- ಉದ್ಯೋಗ ಹುಡುಕಿಕೊಳ್ಳಬೇಕು ಎಂದರು.
ಸಮಾಜದಲ್ಲಿನ ಹಿಂದುಳಿದವರು, ಅಲ್ಪಸಂಖ್ಯಾತರ ಏಳಿಗೆಗೆ ಹಲವು ನಿಗಮ ಮಂಡಳಿಗಳಿವೆ. ಡಿ. ದೇವರಾಜ ಅರಸು ಹಿಂದುಳಿದ ವರ್ಗಗಗಳ ಅಭಿವೃದ್ಧಿ ನಿಗಮ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಂತಹ ಸಂಸ್ಥೆಗಳು ಕೋಟ್ಯಂತರ ಅನುದಾನ ನೀಡುತ್ತಿವೆ. ಈ ಸೌಲಭ್ಯ ಬಳಸಿಕೊಂಡು ಬದುಕುವ ಮಾರ್ಗ ಕಂಡುಕೊಳ್ಳಬೇಕು. ನೆಮ್ಮದಿಯ ಜೀವನ ಸಾಗಿಸಬೇಕು ಎಂದು ಹೇಳಿದರು. ಇದೇ ವೇಳೆ ನಂಜನಗೂಡು ಸತ್ಯನಾರಾಯಣ ಅವರ ರಾಮಾನುಜರು ಕೃತಿಯನ್ನು ಕನ್ನಡ ಪ್ರಾಧ್ಯಾಪಕಿ ಡಾ.ಸಿ.ಜಿ. ಉಷಾದೇವಿ, ಕರ್ನಾಟಕ ಪ್ರಸಿದ್ಧ ವಿಜ್ಞಾನಿಗಳು ಕೃತಿಯನ್ನು ಎಫ್ಪಿಐ ಅಧ್ಯಕ್ಷ ಮಡ್ಡೀಕೆರೆ ಗೋಪಾಲ್ ಬಿಡುಗಡೆಗೊಳಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ಎನ್.ಆರ್. ವಿಜಯ್, ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಜ್ಞಾನಪ್ರಕಾಶ್, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಕೆ. ಮಹದೇವಯ್ಯ ಅವರು ತರಬೇತಿ ಪಡೆದವರಿಗೆ ಪ್ರಮಾಣ ಪತ್ರ ವಿತರಿಸಿದರು.
ಕಸಾಪ ಎನ್.ಆರ್. ಕ್ಷೇತ್ರದ ಅಧ್ಯಕ್ಷ ನೂರ್ ಮೊಹಮ್ಮದ್ ಮರ್ಚೆಂಟ್, ಮುಖಂಡರಾದ ಸೈಯದ್ ಸಯೀದ್, ಅನ್ವರ್ ಪಾಷಾ, ಆರೀಫ್ ಪಾಷಾ ಇದ್ದರು. ರಮ್ಯ, ಹರ್ಷ್ಯಾ ಪ್ರಾರ್ಥಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

