ನೋಂದಾವಣಿಗೆ ಇಂದು ಕೊನೆ ದಿನ
ಮೈಸೂರು: ರಾಜ್ಯ ಮುಕ್ತ ವಿವಿಯಿಂದ ವಿವಿಧ ಬ್ಯಾಂಕ್ಗಳ ಹುದ್ದೆಗಳಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಪರೀಕ್ಷಾಪೂರ್ವ ತರಬೇತಿ ಶಿಬಿರ ಆಯೋಜಿಸಿತ್ತಿದ್ದು, ಹೆಸರು ನೋಂದಾಯಿಸಿಕೊಳ್ಳುವ ಅವಧಿಯನ್ನು ಜು.12 ರವರೆಗೆ ವಿಸ್ತರಿಸಿದೆ ಎಂದು ವಿವಿ ಕುಲಸಚಿವ ಪ್ರೊ.ಎಸ್.ಎನ್. ವಿಕ್ರಂರಾಜೇ ಅರಸ್ ತಿಳಿಸಿದ್ದಾರೆ. ಆಸಕ್ತರು ಜು.12 ರೊಳಗಾಗಿ ರಾಜ್ಯ ಮುಕ್ತ ವಿವಿ ಆವರಣದಲ್ಲಿರುವ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಚೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 4 ರವರೆಗೆ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂ.2515944 ಸಂಪರ್ಕಿಸಬಹುದು.
ಸೀಟು ಹಂಚಿಕೆ ರದ್ದು ಮಾಡಿ, ಮರು ಕೌನ್ಸೆಲಿಂಗ್ ನಡೆಸಿ
ಬೆಂಗಳೂರು: ನಿಯಮ ಉಲ್ಲಂಘಿಸಿ ಮೈಸೂರಿನ ಜಯ ಚಾಮರಾಜೇಂದ್ರ ಎಂಜಿನಿಯರಿಂಗ್ ಕಾಲೇಜಿಗೆ ಸೀಟು ಹಂಚಿಕೆ ಮಾಡಿರುವ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸೀಟು ಹಂಚಿಕೆ ರದ್ದುಗೊಳಿಸಿ, ಮರು ಕೌನ್ಸೆಲಿಂಗ್ ಮಾಡುವಂತೆ ಆದೇಶಿಸಿದೆ.
ಸರ್ಕಾರದ ಕ್ರಮ ಪ್ರಶ್ನಿಸಿ ಜೆಇಸಿ ಕಾಲೇಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಕೆ.ಎಲ್.ಮಂಜುನಾಥ್ ಹಾಗೂ ನ್ಯಾ. ರವಿ ಮಳಿಮಠ್ ಅವರಿದ್ದ ವಿಭಾಗೀಯ ಪೀಠ, ಮರು ಕೌನ್ಸೆಲಿಂಗ್ಗೆ ಆದೇಶಿಸಿದೆ.
ಎಲೆಕ್ಟ್ರಾನಿಕಲ್ ಕಮ್ಯುನಿಕೇಷನ್ ಮತ್ತು ಕಂಪ್ಯೂಟರ್ ಎಂಜಿನಿಯರಿಂಗ್ ಕೋರ್ಸ್ಗಳಿಗೆ ಮೀಸಲಾಗಿದ್ದ ಒಟ್ಟು 120 ಸೀಟುಗಳಲ್ಲಿ ಶೇ. 45ರಷ್ಟು ಸೀಟುಗಳನ್ನು ಸರ್ಕಾರ, ಶೇ.30ರಷ್ಟು ಸೀಟುಗಳನ್ನು ಕಾಮೆಡ್-ಕೆ ಹಾಗೂ ಉಳಿದ ಶೇ.25ರಷ್ಟು ಸೀಟುಗಳನ್ನು ಮ್ಯಾನೇಜ್ಮೆಂಟ್ ಕೋಟಾದಡಿ ಭರ್ತಿ ಮಾಡಬೇಕು ಎಂದು ಸರ್ಕಾರ ಹಾಗೂ ಖಾಸಗಿ ಕಾಲೇಜಿನ ಆಡಳಿತ ಮಂಡಳಿ ಒಮ್ಮತದ ತೀರ್ಮಾನ ಕೈಗೊಂಡಿದ್ದವು.
ಆದರೆ, ಆ ನಿಯಮಗಳನ್ನು ಗಾಳಿಗೆ ತೂರಿರುವ ಸರ್ಕಾರ, ಸುಮಾರು 100 ಸೀಟುಗಳನ್ನು ಭರ್ತಿಗೊಳಿಸಿದೆ. ಇದು ಕಾನೂನುಬಾಹಿರ ಎಂದು ಅರ್ಜಿಯಲ್ಲಿ ಆಕ್ಷೇಪಿಸಲಾಗಿತ್ತು.
ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಪೀಠ, ನಿಯಮಗಳನ್ನು ಗಾಳಿಗೆ ತೂರಿ ಮನಸ್ಸಿಗೆ ಬಂದ ಹಾಗೆ ಸೀಟು ಮ್ಯಾಟ್ರಿಕ್ಸ್ ತಯಾರಿಸಲು ನಿಮಗೆ ಅನುಮತಿ ನೀಡಿದವರ್ಯಾರು? ಪದೇ ಪದೇ ಇಂತಹ ತಪ್ಪುಗಳನ್ನು ಮಾಡುವುದು ಸರ್ಕಾರಕ್ಕೆ ಶೋಭೆ ತರುವುದೇ? ತಪ್ಪು ಸೀಟು ಮ್ಯಾಟ್ರಿಕ್ಸ್ ನೀಡಿ ವಿದ್ಯಾರ್ಥಿಗಳ ಜೀವನದ ಜೊತೆ ಸರ್ಕಾರ ಆಟವಾಡುತ್ತಿದೆ. ಇಂತಹ ತಪ್ಪಿಗೆ ಕಾರಣರಾದ ಅಧಿಕಾರಿಯ ವಿರುದ್ಧ ಶಿಸ್ತು ಕ್ರಮ ತೆಗೆದುಕೊಳ್ಳಿ ಎಂದು ಸರ್ಕಾರಕ್ಕೆ ಆದೇಶಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

