ನಾಳೆಯಿಂದ ಬಸವ ಜಯಂತಿ ಕಾರ್ಯಕ್ರಮ
ಕ.ಪ್ರ.ವಾರ್ತೆ ಮೈಸೂರು ಜು. 11
ಅಖಿಲ ಭಾರತ ವೀರಶೈವ ಮಹಾಸಭಾವು ಬಸವ ಜಯಂತಿ ಶತಮಾನೋತ್ಸವ ವರ್ಷಾಚರಣೆಯನ್ನು ಜು.13 ಮತ್ತು 14 ರಂದು ಕಲಾಮಂದಿರದಲ್ಲಿ ಆಯೋಜಿಸಿದೆ. ಬಸವ ಬಳಗಗಳ ಹಾಗೂ ವೀರಶೈವ ಸಂಘ ಸಂಸ್ಥೆಗಳ ಒಕ್ಕೂಟದ ನೆರವಿನೊಂದಿಗೆ ಆಯೋಜಿಸಿರುವ ಈ ಕಾರ್ಯಕ್ರಮದಲ್ಲಿ ಧ್ವಜಾರೋಹಣವನ್ನು ಬರಡನಪುರ ಶ್ರೀ ಮಹಾಂತೇಶ್ವರ ಮಠದ ಶ್ರೀ ಪರಶಿವಮೂರ್ತಿ ಸ್ವಾಮೀಜಿ ನೆರವೇರಿಸುವರು. ಬಸವಣ್ಣನವರ ಪುತ್ಥಳಿ ಮೆರವಣಿಗೆ ಕಾರ್ಯಕ್ರಮದಲ್ಲಿ ಹೊಸಮಠದ ಶ್ರೀ ಚಿದಾನಂದಸ್ವಾಮೀಜಿ ಸಮ್ಮುಖ ವಹಿಸಲಿದ್ದು, ಜಿಪಂ ಅಧ್ಯಕ್ಷ ಕಾ.ಪು. ಸಿದ್ದವೀರಪ್ಪ ಉದ್ಘಾಟಿಸುವರು. ಜಿಲ್ಲಾಧಿಕಾರಿ ಡಾ.ರಾಮೇಗೌಡ, ಮೈಮುಲ್ ಅಧ್ಯಕ್ಷ ಎನ್.ಮಹದೇವಪ್ಪ, ನಗರ ಪೊಲೀಸ್ ಆಯುಕ್ತ ಡಾ.ಎಂ. ಅಬ್ದುಲ್ ಸಲೀಂ, ಪಾಲಿಕೆ ಆಯುಕ್ತ ಪಿ.ಜಿ. ರಮೇಶ್, ಎಂಡಿಎ ಆಯುಕ್ತ ಡಾ.ಸಿ.ಜಿ.ಬೆಟ್ಸೂರ್ಮಠ್ ಮುಖ್ಯ ಅತಿಥಿಗಳಾಗಿ ಆಗಮಿಸುವರು ಎಂದು ಬಸವ ಬಳಗಗಳ ಒಕ್ಕೂಟದ ಅಧ್ಯಕ್ಷ ಸಿ. ಗುರುಸ್ವಾಮಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

