ಸರ್ಕಾರದ ಯೋಜನೆ ಅರ್ಹರಿಗೆ ತಲುಪಿಸಿ: ವೆಂಕಟೇಶ್
ಕ.ಪ್ರ.ವಾರ್ತೆ ಪಿರಿಯಾಪಟ್ಟಣ ಜು. 13
ಸರ್ಕಾರ ಯೋಜನೆ ರೂಪಿಸಿದರೆ ಸಾಲದು, ಅವು ಅರ್ಹ ಫಲಾನುಭವಿಗಳಿಗೆ ತಲುಪಿದಾಗ ಮಾತ್ರ ಯೋಜನೆ ರೂಪಿಸಿದ್ದಕ್ಕೂ ಸಾರ್ಥಕವೆನಿಸುತ್ತದೆ ಎಂದು ಶಾಸಕ ಕೆ. ವೆಂಕಟೇಶ್ ಹೇಳಿದರು.
ಇಲ್ಲಿನ ಟಿಎಪಿಸಿಎಂಎಸ್ ಸಭಾಂಗಣದಲ್ಲಿ ಸರ್ಕಾರದ ಮಹತ್ವಾಕಾಂಕ್ಷೆ ಕಾರ್ಯಕ್ರಮವಾದ ಅನ್ನಭಾಗ್ಯ ಯೋಜನೆಯಡಿ ಒಂದು ರು. ನಂತೆ 30 ಕೆಜಿ ಅಕ್ಕಿ ವಿತರಿಸುವ ಯೋಜನೆಯಡಿ ಫಲಾನುಭವಿಗಳಿಗೆ ಅಕ್ಕಿ ವಿತರಿಸಿ ಮಾತನಾಡಿದರು.
ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆಯ ಕಾರ್ಯಕ್ರಮ ಇದಾಗಿದ್ದು, ಬೇರೆ ರಾಜ್ಯಗಳಂತೆ ನಮ್ಮ ರಾಜ್ಯದಲ್ಲಿ ಬಡವರಿಗೆ ಅನುಕೂಲವಾಗಲಿದೆ. ಈ ಯೋಜನೆಯಲ್ಲಿ ಅಕ್ಕಿ ಪಡೆಯುವವರು ಇದನ್ನು ದುರುಪಯೋಗ ಮಾಡದೆ ಸದ್ವಿನಿಯಯೋಗ ಮಾಡಿಕೊಳ್ಳುವಂತೆ ತಿಳಿಸಿದರು.
ಮಾಜಿ ಶಾಸಕ ಎಚ್.ಸಿ. ಬಸವರಾಜ್ ಮಾತನಾಡಿ, ಸ್ವಾತಂತ್ರ್ಯ ಬಂದು ಇಷ್ಟು ವರ್ಷಗಳಾದರೂ ಸಾಮಾನ್ಯ ಜನರು ಸಮಸ್ಯೆಗಳಿಂದ ಬಳಲುತ್ತಿರುವುದು ಬೇಸರದ ಸಂಗತಿ. ಪ್ರಣಾಳಿಕೆಯಲ್ಲಿ ವಾಗ್ದಾನ ಮಾಡಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅನ್ನಭಾಗ್ಯ ಯೋಜನೆ ಜಾರಿಗೆ ತಂದಿರುವುದು ಅಭಿನಂದಾರ್ಹ ಸಂಗತಿ ಎಂದರು.
ತಹಸೀಲ್ದಾರ್ ಎಂ.ಕೆ. ಸವಿತಾ ಮಾತನಾಡಿದರು. ಜಿಪಂ ಸದಸ್ಯೆ ಕಾವೇರಿ ಶೇಖರ್, ತಾಪಂ ಸದಸ್ಯರಾದ ಆರ್.ಸಿ. ಚಂದ್ರು, ಬಿ.ವಿ. ಅನಿತಾ, ಸರಸ್ವತಿ, ಟಿಎಪಿಸಿಎಂಸ್ ಅಧ್ಯಕ್ಷ ಪುಟ್ಟರಾಜ್, ಕಾರ್ಯದರ್ಶಿ ಪುಟ್ಟೇಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಲಕ್ಷ್ಮೇಗೌಡ, ಎಪಿಎಂಸಿ ಅಧ್ಯಕ್ಷ ಹೊಲದಪ್ಪ, ತಹಸೀಲ್ದಾರ್ ಗೋವಿಂದಪ್ಪ, ಉಪ ತಹಸೀಲ್ದಾರ್ ಸಣ್ಣರಾಮಪ್ಪ, ರವಿಶಂಕರ್ ಇದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

