ಮೈಸೂರು

ಅಟಲ್‌ಜೀ ಜನಸ್ನೇಹಿ ಕೇಂದ್ರಕ್ಕೆ ಚಾಲನೆ

Published On :

ಗುಂಡ್ಲುಪೇಟೆ: ಪಟ್ಟಣದ ತಾಲೂಕು ಕಚೇರಿಯಲ್ಲಿ ನೂತನವಾಗಿ ಅಟಲ್‌ಜೀ ಜನಸ್ನೇಹಿ ಕೇಂದ್ರ ಹಾಗೂ ನಾಡ ಕಚೇರಿಯ ನೂತನ ಕೌಂಟರ್ ಅನ್ನು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಸ್.ಮಹದೇವಪ್ರಸಾದ್ ಉದ್ಘಾಟಿಸಿದರು.
ಜನರಿಗೆ ಅನುಕೂಲವಾಗಲಿ ಎಂಬ ಉದ್ದೇಶದಿಂದ ಸರ್ಕಾರ ಸಕಾಲದಂತಹ ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕೆಂದರು.
ಸಾರ್ವಜನಿಕರಿಗೆ ಉತ್ತಮ ರೀತಿಯಲ್ಲಿ ಯಾವುದೇ ಮಾಹಿತಿ ಪಡೆಯಲು ತಾಲೂಕು ಕಚೇರಿಗೆ ಅಲೆದಾಟ ನಡೆಸಬೇಕಾಗಿತ್ತು. ಎಲ್ಲ ಸರ್ಕಾರಿ ಕಡತಗಳನ್ನು ಕಂಪ್ಯೂಟರೀಕರಣಗೊಳಿಸಿದ ನಂತರ ಸಾರ್ವಜನಿಕರಿಗೆ ನೆಮ್ಮದಿ ದೊರೆತಿದೆ ಎಂದರು.
ಪಟ್ಟಣದ ಹೊರ ವಲಯದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕಟ್ಟಡದ ವಿಸ್ತರಣಾ ಕಟ್ಟಡದ ಕೊಠಡಿಗೆ 50 ಲಕ್ಷ ವೆಚ್ಚದ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು. ನಂತರ ಮಡಹಳ್ಳಿ ರಸ್ತೆಯಲ್ಲಿರುವ ಬಾಲಕಿಯರ ಕಾಲೇಜಿನಲ್ಲಿ ನಿರ್ಮಿಸಲಾಗಿದ್ದ ಕೊಠಡಿಗಳನ್ನು ಉದ್ಘಾಟಿಸಿದರು.
ಸಂಸದ ಆರ್.ಧ್ರುವನಾರಾಯಣ, ಜಿಪಂ ಉಪಾಧ್ಯಕ್ಷ ಮಹದೇವಪ್ಪ, ತಾಪಂ ಅಧ್ಯಕ್ಷೆ ಗಾಯಿತ್ರಿ, ಜಿಪಂ ಸದಸ್ಯ ನಾಗೇಂದ್ರ, ತಹಸೀಲ್ದಾರ್ ಚಿದಾನಂದ್, ಜಿಪಂ ಮಾಜಿ ಸದಸ್ಯರಾದ ಹಂಗಳ ನಂಜಪ್ಪ, ಕೊಡಸೋಗೆ ಶಿವಬಸಪ್ಪ, ಕಬ್ಬಹಳ್ಳಿ ಮಹೇಶ್, ತಾಪಂ ಸದಸ್ಯರಾದ ಕನ್ನೇಗಾಲ ಸ್ವಾಮಿ, ಪುರಸಭೆ ಸದಸ್ಯರಾದ ಪಿ.ಚಂದ್ರಪ್ಪ, ರಮೇಶ್, ವೆಂಕಟಾಚಲ, ಪಿ.ಶಶಿಧರ್, ಸುರೇಶ್, ಭಾಗ್ಯಮ್ಮ, ಮುಖಂಡರಾದ ಕೆ.ಆರ್.ಲೋಕೇಶ್, ಬೆಟ್ಟಹಳ್ಳಿ ಕೆಂಪರಾಜು, ನೇನೆಕಟ್ಟೆ ಗಂಗಾಧರಪ್ಪ, ಬೇರಂಬಾಡಿ ರಾಜೇಶ್, ಪ್ರಾಂಶುಪಾಲ ಚಾಮರಾಜು, ಹೆಚ್ಚುವರಿ ತಹಸೀಲ್ದಾರ್ ಸಿದ್ದಪ್ಪ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.